ಬ್ರೇಕಿಂಗ್ ನ್ಯೂಸ್
05-03-24 03:41 pm Mangalore Correspondent ಕರಾವಳಿ
ಉಳ್ಳಾಲ, ಮಾ.5: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿಯಲ್ಲಿ ಚಲಿಸುತ್ತಿದ್ದ ಸ್ಕೂಟರ್ಗೆ ಡಿಕ್ಕಿಯಾಗಿದ್ದು ಪರಿಣಾಮ ಸ್ಕೂಟರ್ ಸವಾರ ಡಿವೈಡರ್ಗೆ ಎಸೆಯಲ್ಪಟ್ಟು ದಾರುಣ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಎದುರುಗಡೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕೊಲ್ಯ ಕಣೀರುತೋಟ ನಿವಾಸಿ ಸಂತೋಷ್ ಬೆಳ್ಚಾಡ ( 48) ಅಪಘಾತದಲ್ಲಿ ಮೃತ ಪಟ್ಟ ದುರ್ದೈವಿ. ಬಾಳೆಹಣ್ಣಿನ ವ್ಯಾಪಾರಿಯಾಗಿದ್ದ ಅವರು ವ್ಯಾಪಾರ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಮಂಗಳೂರು ಕಡೆಯಿಂದ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಲ್ಲಿದ್ದ ಥಾರ್ ಜೀಪ್ ಎದುರಿನಲ್ಲಿ ಧರ್ಮಸ್ಥಳದಿಂದ ಕಾಞಂಗಾಡ್ ಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಬೆಲೆನೋ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿದ ಕಾರು ಎದುರಿನಲ್ಲಿ ತೆರಳುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆದಿದೆ. ಸ್ಕೂಟರ್ ಹೆದ್ದಾರಿಯ ಡಿವೈಡರ್ ಗೆ ಬಡಿದ ಪರಿಣಾಮ ಸವಾರ ಸಂತೋಷ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸೋ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ವಿವಾಹಿತರಾಗಿದ್ದ ಸಂತೋಷ್ ಬಡ ಕುಟುಂಬದವರಾಗಿದ್ದು ತಂದೆ, ತಾಯಿ, ಪತ್ನಿ ಇಬ್ಬರು ಹೆಣ್ಮಕ್ಕಳ ಕುಟುಂಬದ ಆಧಾರ ಸ್ಥಂಬವಾಗಿದ್ದರು.
ಗಾಂಜಾ ನಶೆಯಿಂದ ಘಟನೆ, ಕಾಯಂ ಸಂಚಾರಿ ಪೊಲೀಸ್, ಬ್ಯಾರಿಕೇಡ್ ಅಳವಡಿಸಲು ಒತ್ತಾಯ ಘಟನೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಕೊಲ್ಯ ನಿವಾಸಿಗಳು ತಕ್ಷಣವೇ ಸ್ಥಳದಲ್ಲಿ ಕಾಯಂ ಸಂಚಾರಿ ಪೊಲೀಸರು, ಹೆದ್ದಾರಿಗೆ ಬ್ಯಾರಿಕೇಡ್ ಅಳವಡಿಸುವಂತೆ ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇದೆ. ಪೊಲೀಸರು ಯಾವುದೇ ಕ್ರಮ ವಹಿಸುತ್ತಿಲ್ಲ. ಇಂದು ನಡೆದಿರುವ ಅಪಘಾತಕ್ಕೆ ಗಾಂಜಾ ನಶೆಯೇ ಕಾರಣ. ಜೀಪಿನಲ್ಲಿದ್ದ ಮೂವರು ಯುವಕರು ನಶೆಯಲ್ಲಿದ್ದ ಕಾರಣ ಘಟನೆ ನಡೆದಿದೆ. ತಕ್ಷಣವೇ ಮೂವರನ್ನು ತನಿಖೆಗೆ ಒಳಪಡಿಸಿ ಮೃತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಸ್ಥಳೀಯ ನಿವಾಸಿ ಶೇಖರ್ ಕನೀರುತೋಟ ಆಗ್ರಹಿಸಿದ್ದಾರೆ.
Mangalore accident, 48 year old man killed after jeep rams near Kolya Narayana Guru mandir. Youths who were drunk have said to rammed the two wheeler. The deceased has been identified as Santosh from Kolya kannirthota.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 02:42 pm
Mangalore Correspondent
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm