ಬ್ರೇಕಿಂಗ್ ನ್ಯೂಸ್
09-03-24 12:33 pm Mangalore Correspondent ಕರಾವಳಿ
ಮಂಗಳೂರು, ಮಾ.9: ಬೆಂಗಳೂರು ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ಪರಾರಿಯಾಗುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತೀರ ಪ್ರದೇಶದಲ್ಲಿ ಹೈ ಎಲರ್ಟ್ ಮಾಡಿದ್ದಾರೆ.
ಬಾಂಬರ್ ಟ್ರಾಕ್ ಮಾಡಿ ಬೆನ್ನು ಬಿದ್ದಿರುವ ರಾಜ್ಯ ಪೊಲೀಸ್ ಅಧಿಕಾರಿಗಳು ಹಾಗು ಎನ್ಐಎ ಅಧಿಕಾರಿಗಳು ಕರಾವಳಿ ಭಾಗದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಬಳ್ಳಾರಿಯಿಂದ ಶಿವಮೊಗ್ಗದ ಮೂಲಕ ಭಟ್ಕಳಕ್ಕೆ ಬಂದಿದ್ದಾನೆ ಎಂಬ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ಬಳಸದೆ, ವೇಷ ಬದಲಿಸುತ್ತಿರುವ ಆರೋಪಿ ಕರಾವಳಿಯಿಂದ ಸಮುದ್ರ ಮಾರ್ಗದಲ್ಲಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎನ್ನುವ ಶಂಕೆ ಇದೆ.

ಆಳ ಸಮುದ್ರಕ್ಕೆ ಮೀನುಗಾರಿಕೆ ತೆರಳುವ ಬೋಟ್ ನಲ್ಲಿ ಆರೋಪಿ ಪರಾರಿಯಾಗಲು ಯತ್ನಿಸುತ್ತಿರುವ ಮಾಹಿತಿ ಆಧರಿಸಿ ರಾಜ್ಯದ ಮೂರು ಜಿಲ್ಲೆಗಳ ವ್ಯಾಪ್ತಿಯ 320 ಕಿಮೀ ಉದ್ದದ ಕಡಲ ತೀರದಲ್ಲಿ ಹೈ ಅಲರ್ಟ್ ಮಾಡಲಾಗಿದೆ. ರಾಜ್ಯ ಕರಾವಳಿ ಕಾವಲು ಪಡೆ ಪೊಲೀಸರು ಸಮುದ್ರದಲ್ಲಿ ಗಸ್ತು ನಡೆಸುತ್ತಿದ್ದು ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್ ಗಳಲ್ಲಿ ಕರಾವಳಿ ಕಾವಲು ಪಡೆ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ.
ಸಮುದ್ರದಲ್ಲಿ ಯಾವುದೇ ಸಂಶಯಾಸ್ಪದ ನಡೆ ಕಂಡುಬಂದರೆ ಅಥವಾ ಬೋಟ್ ಗಳಲ್ಲಿ ಅಪರಿಚಿತ ವ್ಯಕ್ತಿಗಳು ಪತ್ತೆಯಾದರೆ ಮಾಹಿತಿ ನೀಡುವಂತೆ ಕರಾವಳಿ ಪಡೆಯವರು ಸೂಚನೆ ನೀಡಿದ್ದಾರೆ. ಭಟ್ಕಳದಲ್ಲಿ ಹಿಂದೆ ಗೋಲ್ಡ್ ಸ್ಮಗ್ಲಿಂಗ್ ಇನ್ನಿತರ ಕಳ್ಳಸಾಗಾಟಕ್ಕೆ ರಹದಾರಿ ಇದೆ. ಅಲ್ಲಿಂದ ನೇರವಾಗಿ ಪಾಕಿಸ್ತಾನ ಸಂಪರ್ಕದ ದಾರಿಯೂ ಆಳ ಸಮುದ್ರದ ಮೂಲಕ ಇದೆ ಎನ್ನಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಬಾಂಬರ್ ಆರೋಪಿ ಭಟ್ಕಳದ ನಂಟು ಮೂಲಕ ವಿದೇಶಕ್ಕೆ ಪರಾರಿಯಾಗಲು ಯತ್ನಿಸಿರಬಹುದು ಎಂಬ ಶಂಕೆಯಲ್ಲಿ ಪೊಲೀಸರಿದ್ದಾರೆ.
Bangalore cafe blast, bomber to have travelled by boat, high alert in karvali regions, coast gaurd surveillance.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm