ಬ್ರೇಕಿಂಗ್ ನ್ಯೂಸ್
11-03-24 08:26 pm Mangalore Correspondent ಕರಾವಳಿ
ಮಂಗಳೂರು, ಮಾ.11: ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಬಿಲ್ಲವ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್ ಕೋಟ್ಯಾನ್, ಇತರೇ ಸಮುದಾಯದ ನಾಯಕರಿಗೆ ಇಲ್ಲದ ಹಿಂಜರಿಕೆ ಬಿಲ್ಲವ ಸಮುದಾಯಕ್ಕಿದೆ, ಅದಕ್ಕಾಗಿ ಬಿಲ್ಲವ ಸಮುದಾಯ ಸಮಾಜದಲ್ಲಿ ಬಹಳಷ್ಟು ಹಿಂದುಳಿದಿದೆ. ಬಿಲ್ಲವ ನಾಯಕರು ಯಾರೇ ನಿಂತರೂ ಪಕ್ಷ ಭೇದ ಮರೆತು ಬೆಂಬಲ ನೀಡಬೇಕಾಗಿದೆ. ಕೇವಲ ನೈತಿಕ ಬೆಂಬಲ ಅಲ್ಲ, ಹಣಕಾಸು ಬೆಂಬಲವನ್ನೂ ನೀಡಬೇಕಾಗಿದೆ ಎಂದಿದ್ದಾರೆ.
ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳು ಯಾವ ಪಕ್ಷದಲ್ಲಿದ್ದರೂ, ಪಕ್ಷ ಯಾವುದಾದರೂ ಪರವಾಗಿಲ್ಲ. ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಆಗ ಮಾತ್ರ ಸಮುದಾಯ ಬಲಿಷ್ಟವಾಗುತ್ತೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲು, ಉಳ್ಳಾಲದಲ್ಲಿ ಬಿಲ್ಲವ ನಾಯಕ ಸತೀಶ್ ಕುಂಪಲ ಸೋಲಿನ ಬಗ್ಗೆ ಉಲ್ಲೇಖಿಸಿದ ಉಮಾನಾತ್ ಕೋಟ್ಯಾನ್, ಈ ಜಿಲ್ಲೆಯಲ್ಲಿ ಬಿಲ್ಲವರು ಅತಿ ಹೆಚ್ಚು ಇದ್ದಾರೆ. ಆದರೂ ಬಿಲ್ಲವ ಅಭ್ಯರ್ಥಿ ಸೋಲುತ್ತಾರೆ ಯಾಕೆಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ. ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ ಇದೆ. ಕಾಂಗ್ರೆಸ್ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ನಮಗೆ ತೊಂದರೆಯಾಗುತ್ತಾ ಎಂಬ ಭಯ ಇದೆ. ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ? ಬಿಲ್ಲವ ಸಮಾಜದವರಿಗೆ ಯಾಕೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ, ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು. ಅದರಿಂದ ಸಮಾಜಕ್ಕೆ ಒಳಿತಾಗುತ್ತದೆ ಎಂದು ಹೇಳಿದ್ದಾರೆ.
ಉಮಾನಾಥ ಕೋಟ್ಯಾನ್ ಬಿಜೆಪಿ ಶಾಸಕರಾಗಿದ್ದರೂ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಚರ್ಚೆಗೆ ಗ್ರಾಸವಾಗಿಸಿದೆ.
Support Billava candidates, don't discriminate them says Umanatha Kotian in Mangalore.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm