ಬ್ರೇಕಿಂಗ್ ನ್ಯೂಸ್
12-03-24 07:13 pm Mangalore Correspondent ಕರಾವಳಿ
ಮಂಗಳೂರು, ಮಾ.12: ಸಹ ಪ್ರಾಧ್ಯಾಪಕರಾಗಿ ಸೇವಾ ಪದೋನ್ನತಿಯನ್ನು ಹೊಂದಿದ ಸಹಾಯಕ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯ ನೀಡುವಂತೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಆದೇಶ ನೀಡಿದೆ. ಇದು ಸ್ವಾಗತಾರ್ಹ ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಾಧ್ಯಾಪಕರಿಗೆ ಅವರ ಅರ್ಹತಾ ದಿನಾಂಕದಿಂದಲೇ ಆರ್ಥಿಕ ಸೌಲಭ್ಯವನ್ನು ನೀಡಲು ಸೂಕ್ತ ಕ್ರಮ ವಹಿಸಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್.ಆರ್ ಹರೀಶ್ ಆಚಾರ್ಯ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಕರ್ನಾಟಕ ಆಡಳಿತ ನ್ಯಾಯ ಮಂಡಳಿ ನೀಡಿರುವ ಈ ತೀರ್ಮಾನವು ಅತ್ಯಂತ ಸಮಂಜಸವಾಗಿದೆ. ಇದು ಸಹಜ ನ್ಯಾಯದ ತತ್ವವನ್ನು ಪಾಲಿಸುತ್ತದೆ.
ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ವೃತ್ತಿ ಪ್ರಗತಿ ಯೋಜನೆ ನಿಯಮಾವಳಿ ಅನುಸಾರ ಅರ್ಹತೆಯನ್ನು ಹೊಂದಿರುವ ಸರ್ಕಾರಿ ಕಾಲೇಜುಗಳು ಹಾಗೂ ಅನುದಾನಿತ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ದೈಹಿಕ ಶಿಕ್ಷಣ ನಿರ್ದೇಶಕರು, ಗ್ರಂಥಪಾಲಕರು ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನಿಯಮಾವಳಿಯಂತೆ ತಾಂತ್ರಿಕ ಶಿಕ್ಷಣ ಇಲಾಖೆಯಡಿ ಬರುವ ಎಲ್ಲ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ಅರ್ಹ ಪ್ರಾಧ್ಯಾಪಕರುಗಳಿಗೆ ಇದು ಅನ್ವಯವಾಗುತ್ತದೆ. ಆದುದರಿಂದ ಇಂತಹ ಅರ್ಹ ಪ್ರಾಧ್ಯಾಪಕರುಗಳಿಗೆ ಅವರು ಅರ್ಹತೆ ಹೊಂದಿದ ದಿನಾಂಕದಿಂದಲೇ ಆರ್ಥಿಕ ಸೌಲಭ್ಯಗಳನ್ನು ನೀಡಲು ಸೂಕ್ತ ಕ್ರಮವಿಡುವಂತೆ ಸಂಬಂಧಪಟ್ಟವರಿಗೆ ನಿರ್ದೇಶನವನ್ನು ನೀಡಬೇಕೆಂದು ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
Financial facility to the promoted Assistant Professors from the date of eligibility is needed says Harish Acharya in Mangalore
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 04:31 pm
Mangalore Correspondent
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm