ಬ್ರೇಕಿಂಗ್ ನ್ಯೂಸ್
12-03-24 09:07 pm Mangalore Correspondent ಕರಾವಳಿ
ಮಂಗಳೂರು, ಮಾ.12: ರಾಜ್ಯದಲ್ಲಿ ಹೆಚ್ಚಿನೆಲ್ಲ ನಿಗಮಗಳಿಗೆ ಅಧ್ಯಕ್ಷರ ನೇಮಕ ಮಾಡಲಾಗಿದ್ದರೂ, ಕರಾವಳಿಯಲ್ಲಿ ತುಳುವರನ್ನು ಪ್ರತಿನಿಧಿಸುವ ತುಳು ಸಾಹಿತ್ಯ ಅಕಾಡೆಮಿಗೆ ಇನ್ನೂ ಅಧ್ಯಕ್ಷರ ನೇಮಕ ಮಾಡಿಲ್ಲ. ಇದೀಗ ಗುರುಪುರ ಬ್ಲಾಕ್ ಕಾಂಗ್ರೆಸಿನಲ್ಲಿ ಪ್ರಮುಖರಾಗಿದ್ದುಕೊಂಡು ಜಲ್ಲಿ ಕ್ರಶರ್ ಉದ್ಯಮ ನಡೆಸುತ್ತಿರುವ ವ್ಯಕ್ತಿಯೊಬ್ಬರನ್ನು ತುಳು ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಲಾಗುತ್ತೆ ಎನ್ನುವ ಮಾತು ಕೇಳಿಬಂದಿದ್ದು, ಈ ಬಗ್ಗೆ ತಿಳಿದ ತುಳು ಸಂಘಟನೆಯ ಪ್ರಮುಖರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಾವು ತುಳು ಭಾಷೆ, ಸಂಸ್ಕೃತಿ, ಸಾಹಿತ್ಯ, ಸಂಶೋಧನೆ ಬಗ್ಗೆ ಅಪಾರ ಕಾಳಜಿ ಹೊಂದಿದ್ದು, ತುಳು ಸಾಹಿತ್ಯ ಅಕಾಡೆಮಿಗೆ ಅಧ್ಯಕ್ಷರ ನೇಮಕಾತಿ ಸಂಬಂಧಿಸಿದಂತೆ ನಡೆಯುತ್ತಿರುವ ವಿದ್ಯಮಾನ ಕಂಡು ಆತಂಕಗೊಂಡಿದ್ದೇವೆ. ತುಳು ಭಾಷೆ, ಸಂಸ್ಕೃತಿಗೆ ಯಾವುದೇ ಕೊಡುಗೆ ನೀಡದ ವ್ಯಕ್ತಿಯನ್ನು ಅಕಾಡೆಮಿ ಅಧ್ಯಕ್ಷ ಪದವಿಗೆ ನೇಮಕ ಮಾಡುತ್ತಿರುವುದಕ್ಕೆ ನಮ್ಮ ಆಕ್ಷೇಪ ಇದೆ. ಈ ರೀತಿಯ ಅನಪೇಕ್ಷಿತ ವ್ಯಕ್ತಿಯನ್ನು ನೇಮಕ ಮಾಡುವುದರಿಂದ ನಿಮ್ಮ ಸರಕಾರದ ಘನತೆಗೆ ಕುಂದು ಬರಲಿದೆ. ಭಾಷಾ ಅಕಾಡೆಮಿಗೆ ಆಯಾ ಕ್ಷೇತ್ರದ ಸಾಧಕರನ್ನು, ಅಧ್ಯಯನ ಆಸಕ್ತರನ್ನು, ಬರಹಗಾರರನ್ನು ನೇಮಿಸಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಮಂಗಳೂರಿನ ತುಳು ಸಂಘಟಕರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಇತ್ತೀಚೆಗೆ ಕರಾವಳಿಗೆ ಸಂಬಂಧಪಟ್ಟ ಮೂಡಾ, ಗೇರು ಅಭಿವೃದ್ಧಿ ನಿಗಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಸೇರಿ ಹಲವು ನಿಗಮಗಳಿಗೆ ಅಧ್ಯಕ್ಷರ ನೇಮಕ ಆಗಿತ್ತು. ಈ ಬಾರಿ ತುಳು ಅಕಾಡೆಮಿ ಅಧ್ಯಕ್ಷರಾಗುವುದಕ್ಕೆ ಹತ್ತಕ್ಕೂ ಹೆಚ್ಚು ಮಂದಿ ಆಸಕ್ತಿ ಹೊಂದಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕಾಂಗ್ರೆಸ್ ಯಾರನ್ನು ಶಿಫಾರಸು ಮಾಡುತ್ತೋ ಅವರನ್ನು ಆಯ್ಕೆ ಮಾಡುವುದು ವಾಡಿಕೆ. ಗುರುಪುರ ಬ್ಲಾಕ್ ಕಾಂಗ್ರೆಸಿನ ಪ್ರಮುಖರನ್ನು ಮಾಜಿ ಸಚಿವರೊಬ್ಬರು ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದ್ದು, ತುಳು ಭಾಷೆಯ ಬಗ್ಗೆ ಗಂಧಗಾಳಿ ತಿಳಿದಿಲ್ಲದ ವ್ಯಕ್ತಿಯನ್ನು ಭಾಷಾ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಮಾಡಿದರೆ ಅಕಾಡೆಮಿಗೇನು ಪ್ರಯೋಜನ ಎಂದು ತುಳು ಸಾಹಿತ್ಯಾಸಕ್ತರು ಪ್ರಶ್ನೆ ಮಾಡಿದ್ದಾರೆ.
Mangalore Tulu academy president post still vacant, Tulu activist write letter to cm siddaramaiah.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm