ಬ್ರೇಕಿಂಗ್ ನ್ಯೂಸ್
13-03-24 04:22 pm Mangalore Correspondent ಕರಾವಳಿ
ಪುತ್ತೂರು, ಮಾ.13: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಬಳಿಯ ಮಾರನಹಳ್ಳಿ ತಿರುವಿನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಸದ್ರಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಬುಧವಾರ ರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ಶಿರಾಡಿ ಘಾಟ್ ರಸ್ತೆಯಲ್ಲಿ ನಿಷೇಧಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಮಾಡಿದ್ದಾರೆ. ಇಂದು ಬೆಳಗ್ಗೆ ಮಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ವಾಹನ ಸಂಚಾರ ನಿಷೇಧಿಸಿದ್ದಾರೆ.
ಹಾಸನ ಸಕಲೇಶಪುರ ಮೂಲಕ ಮಂಗಳೂರಿಗೆ ತೆರಳುವ ವಾಹನಗಳು ಹಾನುಬಾಳು, ಮೂಡಿಗೆರೆ, ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಬದಲಿ ಮಾರ್ಗ ಸೂಚಿಸಲಾಗಿದೆ. ಅಲ್ಲದೆ, ಹಾಸನ, ಬೇಲೂರು, ಚಾರ್ಮಾಡಿ ಘಾಟ್ ಮೂಲಕವೂ ಸಂಚರಿಸಬಹುದು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳು ಸುಳ್ಯ, ಸಂಪಾಜೆ, ಮಡಿಕೇರಿ ಮೂಲಕ ಸಂಚರಿಸಲು ಡಿಸಿ ಆದೇಶ ಮಾಡಿದ್ದಾರೆ.
ತಿರುವಿನಲ್ಲಿ ಟ್ಯಾಂಕರ್ ಉರುಳಿ ಬಿದ್ದು ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಆಸುಪಾಸಿನಲ್ಲಿ ಬೆಂಕಿ ಹಚ್ಚದಂತೆ ಸೂಚಿಸಲಾಗಿದೆ. ಎರಡೂ ಕಡೆಯಲ್ಲಿ ಕಿಮೀ ಉದ್ದಕ್ಕೂ ವಾಹನ ನಿಂತಿದ್ದು ಪೂರ್ತಿ ಬ್ಲಾಕ್ ಆಗಿದೆ. ಮಂಗಳೂರಿನಿಂದ ತಜ್ಞರು ಬಂದು ಟ್ಯಾಂಕರ್ ತೆರವುಗೊಳಿಸಲು ಯತ್ನ ಮಾಡುತ್ತಿದ್ದಾರೆ.
A gas tanker overturned at Maranahalli turn near Shiradi Ghat on the Mangaluru-Bengaluru National Highway, disrupting vehicular traffic on the Sadri Ghat road.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm