ಬ್ರೇಕಿಂಗ್ ನ್ಯೂಸ್
14-03-24 09:15 pm Mangalore Correspondent ಕರಾವಳಿ
ಮಂಗಳೂರು, ಮಾ.14: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಮೊದಲ ದಿನವೇ ಕ್ಯಾ. ಬೃಜೇಶ್ ಚೌಟ ಹಲವು ದೇವಸ್ಥಾನ, ದೈವಸ್ಥಾನಗಳಿಗೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದಿದ್ದಾರೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರ, ಮಂಗಳೂರಿನ ಕಾಳಿಕಾಂಬ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಕದ್ರಿ ಮಂಜುನಾಥ ದೇವಸ್ಥಾನ, ಮಂಗಳಾದೇವಿ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.






ಇದಲ್ಲದೆ, ಬೃಜೇಶ್ ಚೌಟ ತಾನು ಪ್ರತಿನಿಧಿಸುವ ರಥಬೀದಿ ಮತಗಟ್ಟೆ ವ್ಯಾಪ್ತಿಯ ಪಕ್ಷದ ಬೂತ್ ಅಧ್ಯಕ್ಷರ ಮನೆಗೆ ಭೇಟಿಯಿತ್ತು ಕಾರ್ಯಕರ್ತರನ್ನು ಹುರಿದುಂಬಿಸುವ ಕೆಲಸ ಮಾಡಿದ್ದಾರೆ. ಇದರ ಬೆನ್ನಲ್ಲೇ ಬೃಜೇಶ್ ಚೌಟ ಅವರ ಮಾರ್ಗದರ್ಶಕರೂ ಆದ ನಿಟ್ಟೆ ಯುನಿವರ್ಸಿಟಿ ಚಾನ್ಸಲರ್ ವಿನಯ ಹೆಗ್ಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಮಂಗಳೂರಿನಲ್ಲಿ ಕಾಲಿಗೆ ಚಕ್ರ ಕಟ್ಟಿದಂತೆ ತಿರುಗಿದ ಚೌಟರು, ಮಾಜಿ ಸಚಿವ ಕೃಷ್ಣ ಪಾಲೆಮಾರ್ ಮತ್ತು ಮಾಜಿ ಶಾಸಕ ಯೋಗೀಶ್ ಭಟ್ ಮನೆಗೆ ಭೇಟಿ ಕೊಟ್ಟು ಆಶೀರ್ವಾದ ಪಡೆದಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮತ್ತು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಮನೆಗೂ ತೆರಳಿ ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಸಹಕಾರ ಕೋರಿದ್ದಾರೆ. ಸಂಜೆಯ ವೇಳೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮನೆಗೆ ತೆರಳಿ ಆಶೀರ್ವಾದ ಪಡೆದಿದ್ದಲ್ಲದೆ, ಚುನಾವಣೆ ಎದುರಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಸಂಜೆಯಾಗುತ್ತಿದ್ದಂತೆ ಪುತ್ತೂರಿಗೆ ತೆರಳಿದ್ದು ಭಾರೀ ಸಂಖ್ಯೆಯಲ್ಲಿ ಸೇರಿದ ಪಕ್ಷದ ಕಾರ್ಯಕರ್ತರು ಬೃಜೇಶ್ ಚೌಟ ಅವರನ್ನು ಸ್ವಾಗತಿಸಿದ್ದಾರೆ. ಸಿಹಿ ತಿಂಡಿ ಹಂಚಿ ಸಂಭ್ರಮಿಸಿದ್ದಾರೆ. ಇದೇ ವೇಳೆ, ಪುತ್ತೂರು ಸೈನಿಕರ ಭವನಕ್ಕೆ ತೆರಳಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಇದೇ ವೇಳೆ, ಮಾಧ್ಯಮದವರು ಪುತ್ತಿಲ ಪರಿವಾರದ ಕುರಿತು ಪ್ರಶ್ನೆ ಮಾಡಿದ್ದಕ್ಕೆ, ಈಗಾಗಲೇ ಜಿಲ್ಲಾಧ್ಯಕ್ಷರು ಆ ಬಗ್ಗೆ ಹೇಳಿದ್ದಾರೆ. ಮಾತುಕತೆಯ ಎಲ್ಲ ದ್ವಾರಗಳು ತೆರೆದಿವೆ. ಜಿಲ್ಲಾಧ್ಯಕ್ಷರೇ ನಮಗೆಲ್ಲ ಸುಪ್ರೀಂ. ಅವರು ಹೇಳಿದಾಗೆ ನಾವೆಲ್ಲ ಕೆಲಸ ಮಾಡೋದು ಅಂತ ಹೇಳಿದರು.
In an exclusive interview with India Today's Shiv Aroor, BJP's Dakshina Kannada Lok Sabha candidate Capt. Brijesh Chowta said that his objective is to work towards Prime Minister Narendra Modi's Viksit Bharat Sankalp.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 02:18 pm
HK News Staffer
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm