ಬ್ರೇಕಿಂಗ್ ನ್ಯೂಸ್
15-03-24 07:21 pm Mangalore Correspondent ಕರಾವಳಿ
ಮಂಗಳೂರು, ಮಾ.15: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂ ಹೆಚ್ಚು ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ. ಇದಕ್ಕಾಗಿ ಮಾರ್ಚ್ 31 ಮತ್ತು ಎಪ್ರಿಲ್ 14ರಂದು ಪ್ರವೇಶ ಪರೀಕ್ಷೆ ಏರ್ಪಡಿಸಿದೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಡಾ.ಮೋಹನ ಆಳ್ವಾ, ಹತ್ತನೇ ತರಗತಿಯಲ್ಲಿ ಸಿಬಿಎಸ್ ಇ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್ ಇ (ಭಾರತೀಯ ಪ್ರೌಢ ಶಿಕ್ಷಣ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಉದ್ದೇಶದ ಪರೀಕ್ಷೆಯನ್ನು ಬರೆಯಬಹುದು. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ಅರ್ಹತೆ ಪಡೆದ ವಿದ್ಯಾರ್ಥಿಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಉಚಿತ ಶಿಕ್ಷಣ ಪಡೆಯಲು ಅರ್ಹತೆ ಪಡೆಯಲಿದ್ದಾರೆ ಎಂದು ತಿಳಿಸಿದರು.
ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಜ್ಞಾನ ಕುರಿತು 100 ನಿಮಿಷಗಳ ಪ್ರವೇಶ ಪರೀಕ್ಷೆ ಇರಲಿದೆ. ಮಾರ್ಚ್ 31ರಂದು ಸಿಬಿಎಸ್ ಇ ಹಾಗೂ ಐಸಿಎಸ್ಇ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುತ್ತದೆ. ಎಪ್ರಿಲ್ 14ರಂದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎರಡೂ ಪರೀಕ್ಷೆಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ. ಸಿಬಿಎಸ್ ಇ ಹಾಗೂ ಐಸಿಎಸ್ ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನವಾಗಿರುತ್ತದೆ. ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಎಪ್ರಿಲ್ 10ರ ವರೆಗೆ ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ವೆಬ್ ಸೈಟ್ https://scholarship.alvas.org/puc/login.php ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇದಲ್ಲದೆ, ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ ಅಂಕದ ಜೊತೆಗೆ ಪ್ರತಿ ವರ್ಷದಂತೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಅಂಕವನ್ನು ಪರಿಗಣಿಸಿ ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶೇಷ ಆದ್ಯತೆಯ ಮೇಲೆ ಆಯ್ಕೆಗಳು ನಡೆಯುತ್ತವೆ. ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸಮಾಲೋಚನೆ ನಡೆಸಲಿದ್ದಾರೆ. ಮೇಲು-ಕೀಳು, ಲಿಂಗ ತಾರತಮ್ಯ ಇಲ್ಲದೆ ಅರ್ಹ ಮಕ್ಕಳಿಗೆ ಅತ್ಯುತ್ತಮ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದಲ್ಲಿ ಪ್ರವೇಶ ಪರೀಕ್ಷೆ ಕೈಗೊಳ್ಳಲಾಗುತ್ತಿದ್ದು ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 8884477588, 6366377827, 6366377823 ಸಂಪರ್ಕಿಸಬಹುದು.
Mangalore moodbidri Alvas educational trust announes 10 crore Rs free Scholarosip, apply now.
26-11-24 11:52 am
HK News Desk
ಜೆಡಿಎಸ್ ನಲ್ಲಿ ಭವಿಷ್ಯ ಇಲ್ಲ, ದೇವೇಗೌಡರಿಗೆ ಜನ ಗೌರ...
25-11-24 05:51 pm
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
Bjp, D K Shivakumar : ಚನ್ನಪಟ್ಟಣ ಗೆಲ್ಲಲು ಬಿಜೆಪ...
24-11-24 08:39 pm
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
25-11-24 11:14 pm
Mangalore Correspondent
Vithoba Rukumai temple case, Mangalore: ವಿಠೋಬ...
25-11-24 10:39 pm
Ullal Dargah, Mangalore: ಎಪ್ರಿಲ್ 24 ರಿಂದ ಮೇ...
25-11-24 02:44 pm
Kukke Subrahmanya Temple, Mangalore: ನ.27ರಿಂದ...
24-11-24 09:13 pm
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
25-11-24 06:17 pm
HK News Desk
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm