ಬ್ರೇಕಿಂಗ್ ನ್ಯೂಸ್
16-03-24 12:52 pm Mangalore Correspondent ಕರಾವಳಿ
ಮಂಗಳೂರು, ಮಾ.16: ಅರುಣ್ ಪುತ್ತಿಲ ಅವರು ಪಕ್ಷದ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮತ್ತೆ ಸೇರ್ಪಡೆ ಎನ್ನುವ ವಿಚಾರವೇ ಬರುವುದಿಲ್ಲ. ಆ ವಿಚಾರದಲ್ಲಿ ಪುತ್ತೂರಿನ ಕಾರ್ಯಕರ್ತರಲ್ಲಿ ಗೊಂದಲ ಆಗಿರುವುದು ಸತ್ಯ. ಅದನ್ನು ನಾವು ಸರಿಪಡಿಸುತ್ತೇವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ನಗರದಲ್ಲಿ ಪಕ್ಷದ ಚುನಾವಣಾ ಕಚೇರಿಯಲ್ಲಿ ಸತೀಶ್ ಕುಂಪಲ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, ಪುತ್ತಿಲ ಸೇರ್ಪಡೆ ಎನ್ನುವಂಥ ವಿಚಾರದಲ್ಲಿ ನಮ್ಮಲ್ಲಿ ಗೊಂದಲ ಇಲ್ಲ. ಅದೆಲ್ಲ ಮುಗಿದ ಪ್ರಕ್ರಿಯೆ. ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಪಕ್ಷ ಸೇರ್ಪಡೆಯಾಗಿದ್ದಾರೆ. ಅರುಣ್ ಪುತ್ತಿಲ ಅವರೇ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು, ಆ ನಿಟ್ಟಿನಲ್ಲಿ ಬೇಷರತ್ತಾಗಿ ಪಕ್ಷದ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಈಗ ಪುತ್ತಿಲ ಅವರಿಗೂ ಸ್ಪಷ್ಟ ಇದೆ, ಪಕ್ಷ ಸೇರ್ಪಡೆ ವಿಚಾರದಲ್ಲಿ ಗೊಂದಲ ಅನ್ನುವುದು ಉದ್ಭವಿಸುವುದಿಲ್ಲ ಎಂದಿದ್ದಾರೆ.
ಪುತ್ತೂರಿನಲ್ಲಿ ಕೆಲವು ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದು, ಆ ಬಗ್ಗೆ ಅವರಲ್ಲಿ ಮಾತುಕತೆ ನಡೆಸಿದ್ದೇನೆ. ಜಿಲ್ಲಾಧ್ಯಕ್ಷನಾಗಿ ಕಾರ್ಯಕರ್ತರ ಭಾವನೆಗಳನ್ನು ತಿಳಿಯುವುದು, ಗೊಂದಲ ಬಗೆಹರಿಸುವುದು ನನ್ನ ಕರ್ತವ್ಯ. ಅವರಲ್ಲಿನ ಗೊಂದಲವನ್ನು ಸರಿಪಡಿಸುತ್ತೇನೆ. ಪಕ್ಷ ಸೇರ್ಪಡೆ ಎನ್ನುವ ವಿಚಾರದಲ್ಲಿ ನಮ್ಮಲ್ಲಿ ಗೊಂದಲ ಇಲ್ಲ. ಪುತ್ತಿಲ ಪರಿವಾರ ವಿಸರ್ಜನೆ ಮಾಡಿಕೊಂಡೇ ಪಕ್ಷದ ಜೊತೆಗಿರುತ್ತಾರೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಆಗಿದೆ, ಅದನ್ನು ಸರಿಪಡಿಸುವ ಕೆಲಸ ಆಗಿದೆ. ಸಣ್ಣ ಗೊಂದಲ ಇರುವುದು ಸಹಜ. ಪುತ್ತಿಲ ಪಕ್ಷಕ್ಕೆ ಬರಬಾರದು ಅಂತ ಯಾರೂ ಹೇಳಿಲ್ಲ. ರಾಜ್ಯಾಧ್ಯಕ್ಷರ ಜೊತೆ ಮಾತುಕತೆ ನಡೆಸಿ ಪಕ್ಷ ಸೇರಿದ ಬಳಿಕ ಮತ್ತೆ ಧ್ವಜ ಕೊಟ್ಟು ಸ್ವಾಗತಿಸಬೇಕೆಂದು ಇಲ್ಲ. ರಾಜ್ಯಾಧ್ಯಕ್ಷರ ಸೂಚನೆಯೇ ನಮಗೆ ಅಂತಿಮ ಎಂದು ಸತೀಶ್ ಕುಂಪಲ ಹೇಳಿದ್ದಾರೆ.
ಅರುಣ್ ಪುತ್ತಿಲ ಪಕ್ಷ ಸೇರ್ಪಡೆ ವಿಚಾರದಲ್ಲಿ ಪುತ್ತೂರಿನ ಒಂದಷ್ಟು ಕಾರ್ಯಕರ್ತರು ಬಿಜೆಪಿ ಕಚೇರಿಗೆ ಬಾಗಿಲು ಹಾಕಿ ಜಿಲ್ಲಾಧ್ಯಕ್ಷರ ಜೊತೆಗೆ ಚರ್ಚೆ ನಡೆಸಿದ್ದರು. ಬಾಗಿಲು ಹಾಕಿ ಚರ್ಚೆ ನಡೆಸಿದ್ದು ತಪ್ಪು ಅಭಿಪ್ರಾಯಕ್ಕೆ ಕಾರಣವಾಗಿತ್ತು. ಅರುಣ್ ಪುತ್ತಿಲ ಪಕ್ಷ ಸೇರ್ಪಡೆಗೆ ಕಾರ್ಯಕರ್ತರ ವಿರೋಧ ಎನ್ನುವಂತೆ ಸಂದೇಶ ರವಾನೆಯಾಗಿತ್ತು. ರಾತ್ರಿ 8.30ರ ವೇಳೆಗೆ ಪಕ್ಷದ ಕಚೇರಿಯಿಂದ ಹೊರಬಂದಿದ್ದ ಸತೀಶ್ ಕುಂಪಲ, ಪುತ್ತಿಲ ಪಕ್ಷ ಸೇರ್ಪಡೆ ಕುರಿತ ಪ್ರಶ್ನೆಗೆ ಗೊಂದಲ ನೀವು ಮಾಧ್ಯಮದವರು ಸೃಷ್ಟಿಸಿದ್ದು ಎಂದು ಹೇಳಿ ಹೊರನಡೆದಿದ್ದರು. ಇದರಿಂದಾಗಿ ಪುತ್ತಿಲ ಪರಿವಾರದ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದಲ್ಲದೆ, ಜಾಲತಾಣದಲ್ಲಿ ಅರುಣ್ ಪುತ್ತಿಲ ಪಕ್ಷೇತರ ಸ್ಪರ್ಧಿಸಬೇಕೆಂದು ಒತ್ತಾಯ ಮಾಡಿದ್ದರು.
Arun Puttila met the party's state president and joined the party. There is no question of re-joining. It is true that there is confusion among the activists of Puttur on that issue. We will fix it," bjp district president Satish Kumpala said.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 08:06 pm
HK News Desk
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am