ಬ್ರೇಕಿಂಗ್ ನ್ಯೂಸ್
16-03-24 04:55 pm Mangalore Correspondent ಕರಾವಳಿ
ಮಂಗಳೂರು, ಮಾ.16: ಹಿರಿಯ ಪತ್ರಕರ್ತ ತಾರನಾಥ ಗಟ್ಟಿ ಕಾಪಿಕಾಡ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ರಾಜ್ಯ ಸರಕಾರ ನೇಮಕ ಮಾಡಿದೆ. ಅಕಾಡೆಮಿ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಪೃಥ್ವಿರಾಜ್, ಕುಂಬ್ರ ದುರ್ಗಾಪ್ರಸಾದ್ ರೈ, ಮೋಹನದಾಸ್ ಕೊಟ್ಟಾರಿ, ಅಕ್ಷಯಾ ಆರ್. ಶೆಟ್ಟಿ, ಶೈಲೇಶ್ ಸುವರ್ಣ, ಕಿಶೋರ್ ಗೌಡ, ಬೂಬ ಪೂಜಾರಿ, ರೋಹಿತಾಶ್ವ ಕಾಪಿಕಾಡ್, ನಾಗೇಶ್ ಕುಮಾರ್ ಉದ್ಯಾವರ ಮತ್ತು ಉಡುಪಿ ಜಿಲ್ಲೆಯಿಂದ ಸಂತೋಷ್ ಶೆಟ್ಟಿ ಅವರನ್ನು ಸದಸ್ಯರನ್ನಾಗಿ ಮಾಡಲಾಗಿದೆ. ಇವರ ಅವಧಿ ಮೂರು ವರ್ಷಗಳ ವರೆಗೆ ಇರುತ್ತದೆ.
ಇದೇ ವೇಳೆ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಜೋಕಿಂ ಸ್ಟಾನ್ಲಿ ಆಲ್ವಾರಿಸ್ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅಕಾಡೆಮಿ ಸದಸ್ಯರಾಗಿ ಬೆಂಗಳೂರಿನ ಪ್ರಕಾಶ್ ಮಾಡ್ತಾ, ದಕ್ಷಿಣ ಕನ್ನಡ ಜಿಲ್ಲೆಯಿಂದ ರೊನಾಲ್ಡ್ ಕ್ರಾಸ್ತಾ, ಡಾ.ವಿಜಯಲಕ್ಷ್ಮೀ ನಾಯಕ್, ನವೀನ್ ಲೋಬೊ, ಸಪ್ನಾ ಕ್ರಾಸ್ತಾ, ಸಮರ್ಥ ಭಟ್, ಯಲ್ಲಾಪುರದ ಸುನಿಲ್ ಸಿದ್ಧಿ, ಉತ್ತರ ಕನ್ನಡ ಜಿಲ್ಲೆಯ ಜೇಮ್ಸ್ ಲೋಪಿಸ್, ಕಾರ್ಕಳ ತಾಲೂಕಿನ ದಯಾನಂದ ಮುಡ್ಕೇಕರ್, ಚಿಕ್ಕಮಗಳೂರಿನ ಪ್ರಮೋದ್ ಪಿಂಟೋ ಅವರನ್ನು ನೇಮಕ ಮಾಡಲಾಗಿದೆ.
ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಮಂಗಳೂರಿನ ಲೇಖಕ, ಪತ್ರಕರ್ತ ಉಮ್ಮರ್ ಯು.ಎಚ್ ಅವರನ್ನು ನೇಮಕ ಮಾಡಲಾಗಿದೆ. ಅಕಾಡೆಮಿ ಸದಸ್ಯರಾಗಿ ಚಿಕ್ಕಮಗಳೂರಿನ ಬಿ.ಎಸ್. ಮೊಹಮ್ಮದ್, ಬೆಂಗಳೂರಿನ ಹಫ್ಸಾ ಬಾನು, ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾರಾ ಅಲಿ ಪರ್ಲಡ, ಶಮೀರಾ ಜಹಾನ್, ಯುಎಚ್ ಖಾಲಿದ್ ಉಜಿರೆ, ತಾಜುದ್ದೀನ್, ಅಬುಬಕ್ಕರ್ ಅನಿಲಕಟ್ಟೆ, ಅಬ್ದುಲ್ ಶರೀಫ್, ಅಮೀದ್ ಹಸನ್ ಮಾಡೂರು, ಉಡುಪಿ ಜಿಲ್ಲೆಯಿಂದ ಶಮೀರ್ ಮುಲ್ಕಿ ಅವರನ್ನು ನೇಮಿಸಲಾಗಿದೆ.
ಯಕ್ಷಗಾನ ಅಕಾಡೆಮಿಗೆ ಅಧ್ಯಕ್ಷರಾಗಿ ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ನೇಮಿಸಲಾಗಿದೆ. ಅಕಾಡೆಮಿ ಸದಸ್ಯರಾಗಿ ರಾಘವ ಎಚ್., ಕೃಷ್ಣಪ್ಪ ಪೂಜಾರಿ, ಗುರುರಾಜ ಭಟ್, ವಿನಯಕುಮಾರ್ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ ಮುಲ್ಕಿ, ಮೋಹನ ಕೊಪ್ಪಳ, ಸತೀಶ್ ಅಡಪ ಸಂಕಬೈಲು, ರಾಜೇಶ್ ಕಳಾಯಿ, ದಯಾನಂದ ಪಿ, ಜಿವಿಎಸ್ ಉಳ್ಳಾಲ್ ಅವರನ್ನು ನೇಮಕ ಮಾಡಲಾಗಿದೆ.
ಇದೇ ವೇಳೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರನ್ನು ನೇಮಕ ಮಾಡಲಾಗಿದೆ. ಸದಸ್ಯರಾಗಿ ಪ್ರೊ.ರಾಮಚಂದ್ರಪ್ಪ, ಡಾ.ಪಿವಿ ನಿರಂಜನಾರಾಧ್ಯ, ಟಿ.ಗುರುರಾಜ್, ಡಾ.ರವಿಕುಮಾರ್ ನೀಹ, ಶ್ರೀಮತಿ ದಾಕ್ಷಾಯಿಣಿ ಹುಡೇದ, ಯಾಕೂಬ್ ಖಾದರ್, ವಿರೂಪಾಣ್ಣ ಕಲ್ಲೂರು ಅವರನ್ನು ನೇಮಿಸಲಾಗಿದೆ.
Mangalore Tharanath kapikad Gatty appointed as tulu academy president, Stany Alvares for Konkani, Ummer U H for Beary. The president and members of Karnataka Tulu Sahitya Academy and Karnataka Konkani Sahitya academy were appointed. The president of Byari Sahitya Academy was also appointed.
10-08-25 06:27 pm
Bangalore Correspondent
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm