ಬ್ರೇಕಿಂಗ್ ನ್ಯೂಸ್
16-03-24 09:35 pm Mangalore Correspondent ಕರಾವಳಿ
ಮಂಗಳೂರು, ಮಾ.16: ಜಟಾಪಟಿ, ವಿರೋಧ, ಗೊಂದಲದ ಬಳಿಕ ಪುತ್ತಿಲ ಪರಿವಾರದ ಕಾರ್ಯಕರ್ತರು ಅರುಣ ಪುತ್ತಿಲ ನೇತೃತ್ವದಲ್ಲಿ ಬಿಜೆಪಿ ಜೊತೆಗೆ ಕೈಜೋಡಿಸಿದ್ದಾರೆ.
ಶನಿವಾರ ಸಂಜೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿಯ ಬಿಜೆಪಿ ಚುನಾವಣಾ ಕಚೇರಿಗೆ ನೂರಾರು ಬೆಂಬಲಿಗರ ಜೊತೆಗೆ ಬಂದಿದ್ದ ಅರುಣ್ ಪುತ್ತಿಲ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಬರಮಾಡಿಕೊಂಡರು. ಇದೇ ವೇಳೆ ಮಾತನಾಡಿದ ಸತೀಶ್ ಕುಂಪಲ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಾಗಿದೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಆಗಿಸುವುದಷ್ಟೇ ನಮ್ಮ ಗುರಿ. ಅರುಣ್ ಪುತ್ತಿಲ ಅವರು ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಪಕ್ಷ ಸೇರಿದ್ದಾರೆ. ಆದರೆ ಕೆಲವು ಕಾರ್ಯಕರ್ತರಿಗೆ ಇದರಲ್ಲಿ ಗೊಂದಲ ಇದೆ. ನಾವು ಪಕ್ಷದ ಪ್ರಮುಖರ ಸೂಚನೆಯಂತೆ ಕೆಲಸ ಮಾಡುವುದಾಗಿದ್ದು ಪಕ್ಷದ ಕೆಲಸ ಎನ್ನುವುದು ಜವಾಬ್ದಾರಿ. ನಿಮ್ಮಲ್ಲಿ ನೂರು ಚಿಂತನೆಗಳು ಇರಬಹುದು. ಜಿಲ್ಲಾಧ್ಯಕ್ಷನಾಗಿ ನಾನು ಪಕ್ಷದ ಎಲ್ಲ ಕಾರ್ಯಕರ್ತರನ್ನೂ ಜೋಡಿಸಿಕೊಂಡು ಹೋಗಬೇಕಾಗಿದೆ. ಎಲ್ಲರ ಮಾತು ಕೇಳುವುದು ನನ್ನ ಕರ್ತವ್ಯ ಎಂದರು.
ಅರುಣ ಪುತ್ತಿಲ ಮತ್ತು ನಮಗೆ ಯಾವುದೇ ಗೊಂದಲ ಇರಲಿಲ್ಲ. ಹಾಗಾಗಿ, ಕಾರ್ಯಕರ್ತರು ಗೊಂದಲಕ್ಕೆ ಒಳಗಾಗುವುದು, ಸೋಶಿಯಲ್ ಮೀಡಿಯಾದಲ್ಲಿ ಬರೆದು ಆಕ್ರೋಶ ತೀರಿಸಿಕೊಳ್ಳುವುದು ಸರಿಯಲ್ಲ. ರಾಜ್ಯಾಧ್ಯಕ್ಷರ ಸೂಚನೆಯಂತೆ ನಾವು ಕೆಲಸ ಮಾಡಬೇಕಾಗಿದೆ. ನಾವೆಲ್ಲ ಈಗ ಒಂದಾಗಿದ್ದು ನೀವು ಬೇರೆಯಲ್ಲ. ನಾವು ಬೇರೆಯಲ್ಲ. ನಿಮ್ಮ ಬೇಕು ಬೇಡಗಳನ್ನು ನಾವು ಕೇಳಬೇಕಾಗುತ್ತದೆ. ಅದು ನನ್ನ ಜವಾಬ್ದಾರಿ. ನಮ್ಮ ಗುರಿ ಇನ್ನು ಅತ್ಯಧಿಕ ಮತಗಳಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದು ಅಷ್ಟೇ ಎಂದು ಹೇಳಿದರು.
ಅರುಣ್ ಪುತ್ತಿಲ ಮಾತನಾಡಿ, ನಾವು ನರೇಂದ್ರ ಮೋದಿ ಅವರನ್ನು ಮತ್ತೆ ಹತ್ತು ವರ್ಷಗಳ ಕಾಲ ಪ್ರಧಾನಿ ಮಾಡುವ ಉದ್ದೇಶದಿಂದ ಜೊತೆಯಾಗಿದ್ದೇವೆ. ಹಿಂದಿನ ಕಹಿ ನೆನಪುಗಳನ್ನು ಮರೆತು ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು. ಇದೇ ವೇಳೆ, ಒಬ್ಬ ಕಾರ್ಯಕರ್ತ ನಮಗೆ ಕಿಶೋರ್ ಪುತ್ತೂರು ಜೊತೆಗೆ ಮಾತನಾಡಲಿಕ್ಕಿದೆ, ಮೀಡಿಯಾದವರು ಹೊರಗೆ ಹೋಗಿ ಎಂದು ಹೇಳಿದ್ದು ಸ್ವಲ್ಪ ಹೊತ್ತು ಗೊಂದಲಕ್ಕೆ ಕಾರಣವಾಯಿತು. ಪಕ್ಷದ ಜಿಲ್ಲಾ ಪ್ರಮುಖರು, ಪುತ್ತಿಲ ಪರಿವಾರದ ಪ್ರಮುಖರು ಇದ್ದರು. ಆನಂತರ, ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮತ್ತು ಹಿಂದಿನ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದ್ರೆ, ಅರುಣ ಪುತ್ತಿಲ ಸೇರಿದಂತೆ ಪರಿವಾರದ ಪ್ರಮುಖರಿಗೆ ಶಾಲು ಹೊದಿಸಿ ಪಕ್ಷಕ್ಕೆ ಸ್ವಾಗತಿಸಿದರು. ಅಲ್ಲದೆ, ಸಾಂಕೇತಿಕವಾಗಿ ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ಅರುಣ ಪುತ್ತಿಲರಿಗೆ ಕೊಟ್ಟು ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಂಡರು.
Arun Puthila welcomed at BJP office in Mangalore, district president Satish Kumpala welcomed him to the party office amid hundreds of members.
10-08-25 06:27 pm
Bangalore Correspondent
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm