ಬ್ರೇಕಿಂಗ್ ನ್ಯೂಸ್
17-03-24 03:27 pm Mangalore Correspondent ಕರಾವಳಿ
ಉಳ್ಳಾಲ, ಮಾ.17: ಹಿಂದೂ ಸಮಾಜದ ಐಕ್ಯತೆ ಮತ್ತು ಲೋಕ ಕಲ್ಯಾಣಾರ್ಥವಾಗಿ ಮಂಗಳೂರು ವಿಶ್ವ ಹಿಂದು ಪರಿಷತ್ ನೇತೃತ್ವದಲ್ಲಿ ಭಾನುವಾರ ಕದ್ರಿ ಮಂಜುನಾಥೇಶ್ವರ ಕ್ಷೇತ್ರದಿಂದ ಕುತ್ತಾರು ದೆಕ್ಕಾಡಿನ ಕೊರಗಜ್ಜನ ಆದಿ ಸ್ಥಳಕ್ಕೆ "ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ" ಹೆಸರಿನಲ್ಲಿ ನಡೆದ ನಾಲ್ಕನೇ ವರ್ಷದ ಬೃಹತ್ ಪಾದಯಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡರು. ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಧಾರ್ಮಿಕ ಸಭೆಯನ್ನು ರದ್ದುಗೊಳಿಸಲಾಗಿದೆ.
ಭಾನುವಾರ ಬೆಳಗ್ಗೆ ಕದ್ರಿ ಮಂಜುನಾಥೇಶ್ವರ ಕ್ಷೇತ್ರದಿಂದ ಹೊರಟ ಪಾದಾಯಾತ್ರೆಯಲ್ಲಿ ಸಹಸ್ರಾರು ಮಂದಿ ಕೊರಗಜ್ಜನ ಭಕ್ತರು ಪಾಲ್ಗೊಂಡಿದ್ದರು. ನಿನ್ನೆ ಕೇಂದ್ರ ಚುನಾವಣಾ ಆಯೋಗವು ಲೋಕಸಭೆ ಚುನಾವಣಾ ದಿನಾಂಕವನ್ನು ಪ್ರಕಟಿಸಿದ್ದು ಜಿಲ್ಲೆಯೆಲ್ಲಿ ಇಂದಿನಿಂದಲೇ ನೀತಿಸಂಹಿತೆ ಜಾರಿಯಾದ ಕಾರಣ ಕೊರಗಜ್ಜನ ಆದಿ ಕ್ಷೇತ್ರದ ಬಳಿ ಹಮ್ಮಿಕೊಂಡಿದ್ದ ಧಾರ್ಮಿಕ ಸಭೆಯನ್ನ ದಿಢೀರ್ ರದ್ದುಗೊಳಿಸಲಾಗಿದೆ. ಧಾರ್ಮಿಕ ಸಭೆಯಲ್ಲಿ ಧಾರ್ಮಿಕ ಮುಂದಾಳು ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರು ಧಾರ್ಮಿಕ ಉಪನ್ಯಾಸ ನೀಡಲಿದ್ದರು. ಕದ್ರಿಯಿಂದ ಕೊರಗಜ್ಜನ ಆದಿಕ್ಷೇತ್ರಕ್ಕೆ ಬಂದ ಅತಿಥಿಗಳು, ವಿಶ್ವ ಹಿಂದು ಪರಿಷತ್ ಮುಖಂಡರು ಕೊರಗಜ್ಜನ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶ್ರೀಕಾಂತ್ ಶೆಟ್ಟಿ ಅವರು ಪ್ರಭು ಶ್ರೀ ರಾಮಚಂದ್ರರು ಮತ್ತು ಶಂಕರಾಚಾರ್ಯರು ಪಾದಯಾತ್ರೆ ಮೂಲಕವೇ ಭಾರತವನ್ನ ಸಂಘಟಿಸಿದ್ದರು. ಜಿಲ್ಲೆಯ ವಿವಿಧೆಡೆಯಲ್ಲಿ ಕೊರಗಜ್ಜನ ಕ್ಷೇತ್ರವನ್ನು ಅಪವಿತ್ರಗೊಳಿಸಿದಾಗ ಹಿಂದೂ ಸಮಾಜವು ಒಗ್ಗಟ್ಟಾಗಿ ಅಜ್ಜನ ಆದಿಕ್ಷೇತ್ರಕ್ಕೆ ಪಾದಯಾತ್ರೆ ನಡೆಸಿ ಸಾತ್ವಿಕ ಹೋರಾಟ ನಡೆಸಿತ್ತು. ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದವರ ಬಂಧನವೂ ಆಗಿ ಪಾದಯಾತ್ರೆ ಯಶಸ್ವಿಗೊಂಡ ಫಲವಾಗಿ ಈಗಲೂ ಪ್ರತೀ ವರುಷವೂ ನಿರಂತರವಾಗಿ ಸಹಸ್ರಾರು ಮಂದಿ ಭಕ್ತಿ, ಶ್ರದ್ಧೆಯಿಂದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.
ಮುಂಬೈ ಉದ್ಯಮಿ ವಿವೇಕ್ ಶೆಟ್ಟಿ ಬೊಳ್ಯಗುತ್ತು, ಮಾಜಿ ಶಾಸಕರಾದ ಜಯರಾಮ ಶೆಟ್ಟಿ, ವಿ.ಹಿಂ.ಪ ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾಧ್ಯಕ್ಷರಾದ ಹೆಚ್.ಕೆ ಪುರುಷೋತ್ತಮ, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ, ಪ್ರಾಂತ ಸಹಸೇವಕ್ ಪ್ರಮುಖ್ ಗೋಪಾಲ ಕುತ್ತಾರು, ಜಿಲ್ಲಾ ಸೇವಾ ಪ್ರಮುಖ್ ಪ್ರವೀಣ್ ಕುತ್ತಾರು, ಕಾರ್ಯಕ್ರಮದ ಸಂಚಾಲಕ ಜಗದೀಶ ಶೇಣವ, ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷ ನಾರಾಯಣ ಕುಂಪಲ, ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೆತ್ತಬೈಲು, ಪಂಜಂದಾಯ, ಬಂಟ, ವೈದ್ಯನಾಥ ಕೊರಗಜ್ಜ ಆದಿ ಸ್ಥಳದ ಟ್ರಸ್ಟ್ ನ ಅಧ್ಯಕ್ಷರಾದ ಜಯರಾಮ ಭಂಡಾರಿ ಮಾಗಣ್ತಡಿ, ಉಪಾಧ್ಯಕ್ಷರಾದ ಮಹಾಬಲ ಶೆಟ್ಟಿ ಮಾಗಣತ್ತಡಿ, ಟ್ರಸ್ಟಿಗಳಾದ ವಿದ್ಯಾಚರಣ್ ಭಂಡಾರಿ, ಪ್ರಮುಖರಾದ ಕುತ್ತಾರ ಗುತ್ತು ರತ್ನಾಕರ ಕಾವ, ಬೊಲ್ಯ ಗುತ್ತು ವಿನೋದ್ ಶೆಟ್ಟಿ, ದೈವದ ಮೂಲ್ಯಣ್ಣ ಬಾಲಕೃಷ್ಣ ಕಂಪ, ದೈವ ಪಾತ್ರಿ ಮಾಯಿಲ ಮೊದಲಾದವರು ಉಪಸ್ಥಿತರಿದ್ದರು.
Mangalore Election comission effect, Koragajja padayatre at ullal Kotekar cancelled.Thousands of devotees participated in the fourth annual grand padayatra under the leadership of Mangaluru Vishwa Hindu Parishad under the leadership of Mangalore Vishwa Hindu Parishad on Sunday from Kadri Manjunatheshwar constituency to Koragajjana Adi place in Kuttaru Dekkad under the name of "Our Walk to Koragajjana Adikshetra". The religious meeting was canceled due to the implementation of the Election Code of Conduct.
26-11-24 11:52 am
HK News Desk
ಜೆಡಿಎಸ್ ನಲ್ಲಿ ಭವಿಷ್ಯ ಇಲ್ಲ, ದೇವೇಗೌಡರಿಗೆ ಜನ ಗೌರ...
25-11-24 05:51 pm
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
Bjp, D K Shivakumar : ಚನ್ನಪಟ್ಟಣ ಗೆಲ್ಲಲು ಬಿಜೆಪ...
24-11-24 08:39 pm
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
25-11-24 11:14 pm
Mangalore Correspondent
Vithoba Rukumai temple case, Mangalore: ವಿಠೋಬ...
25-11-24 10:39 pm
Ullal Dargah, Mangalore: ಎಪ್ರಿಲ್ 24 ರಿಂದ ಮೇ...
25-11-24 02:44 pm
Kukke Subrahmanya Temple, Mangalore: ನ.27ರಿಂದ...
24-11-24 09:13 pm
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
25-11-24 06:17 pm
HK News Desk
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm