ಬ್ರೇಕಿಂಗ್ ನ್ಯೂಸ್
18-03-24 10:40 pm Mangalore Correspondent ಕರಾವಳಿ
ಮಂಗಳೂರು, ಮಾ.19: ಮಾಜಿ ಶಾಸಕ ಮೊಯ್ದೀನ್ ಬಾವಾ ಲೋಕಸಭೆ ಚುನಾವಣೆಗೆ ಪಕ್ಷೇತರ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಮಾ.21ರಂದು ಕಂಕನಾಡಿಯ ಅಲ್ ರಹಬಾ ಸಭಾಂಗಣದಲ್ಲಿ ಅಭಿಮಾನಿಗಳ ಸಭೆ ಕರೆದಿದ್ದಾರೆ. ಬೆಂಬಲಿಗರು ಪಕ್ಷೇತರ ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ಅಭಿಮಾನಿಗಳ ಸಭೆ ಕರೆದು ಅವರ ನಿರ್ಧಾರದಂತೆ ಮುಂದುವರಿಯುತ್ತೇನೆ ಎಂದು ಮೊಯ್ದೀನ್ ಬಾವಾ ಹೇಳಿದ್ದಾರೆ.
ಕಳೆದ ಅಸೆಂಬ್ಲಿ ಚುನಾವಣ ಸಂದರ್ಭದಲ್ಲಿ ಮಂಗಳೂರು ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಬಾವಾ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಸೇರಲು ರೆಡಿಯಾಗುತ್ತಿದ್ದಾರೆ. ಮತ್ತೆ ಕಾಂಗ್ರೆಸ್ ಸೇರುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ಕಾಂಗ್ರೆಸ್ ನಾಯಕರು ಆಹ್ವಾನಿಸಿದರೆ ರೆಡಿ ಇದ್ದೇನೆ ಎಂದಿದ್ದಾರೆ. ನಾಲ್ಕು ಮಕ್ಕಳು ನದಿಗೆ ಬಿದ್ದು ಸಾವನ್ನಪ್ಪಿದಾಗ ನಮ್ಮ ಶಾಸಕರು ಗೃಹ ಸಚಿವರಿಗೆ ಪತ್ರ ಬರೆದು ಪರಿಹಾರಕ್ಕೆ ಆಗ್ರಹಿಸುತ್ತೇನೆ ಎಂದು ಹೇಳಿಕೆ ಕೊಟ್ಟಿದ್ದರು. ಅವರ ಮನೆಗೂ ಭೇಟಿ ಕೊಟ್ಟಿರಲಿಲ್ಲ. ಪರಿಹಾರ ಕೊಡಿಸುವ ಕೆಲಸವನ್ನೂ ಮಾಡಿಲ್ಲ. ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಕೊಟ್ಟು ತಲಾ 2 ಲಕ್ಷ ರೂ. ಪರಿಹಾರ ಕೊಡಿಸಿದ್ದೇನೆ. ಕೇವಲ ಹೇಳಿಕೆ ಕೊಟ್ಟರೆ ಪರಿಹಾರ ಸಿಗುವುದಿಲ್ಲ. ಫಾಲೋ ಅಪ್ ಕೆಲಸ ಮಾಡಬೇಕು ಎಂದು ಪರೋಕ್ಷವಾಗಿ ಶಾಸಕ ಭರತ್ ಶೆಟ್ಟಿಗೆ ಟಾಂಗ್ ಇಟ್ಟಿದ್ದಾರೆ.
ನಾಲ್ಕು ಕುಟುಂಬಗಳಲ್ಲಿ ಇಬ್ಬರು ಮಕ್ಕಳಿಗೆ ತಂದೆ ಇರಲಿಲ್ಲ. ಹಿಂದುಗಳ ಬಡ ಕುಟುಂಬದವರು. ವಿಷಯ ತಿಳಿದು ಕೂಡಲೇ ಪರಿಹಾರ ಕೊಡಿಸುವ ಕೆಲಸ ಮಾಡಿದ್ದೇನೆ. ಇದಲ್ಲದೆ, ಚಿಕಿತ್ಸಾ ವೆಚ್ಚ ಕಡಿತಗೊಳಿಸಲು, ಕಷ್ಟದ ಕಾಲದಲ್ಲಿ ಹಲವಾರು ಸಾರ್ವಜನಿಕರು ಫೋನ್ ಕರೆ ಮಾಡುತ್ತಾರೆ. ಅವರೆಲ್ಲರಿಗೂ ಸ್ಪಂದಿಸುತ್ತೇನೆ. ನನಗೆ ಯಾರೂ ಹೈಕಮಾಂಡ್ ಇಲ್ಲ, ನನ್ನ ಫೋನ್ ಮಾತ್ರ ಆಪ್ತಮಿತ್ರ ಎಂದರು. ನೀವು ಜೆಡಿಎಸ್ ನಲ್ಲಿದ್ದೀರಿ ಅಲ್ವಾ, ಬಿಜೆಪಿ ಸಪೋರ್ಟ್ ಮಾಡ್ತೀರಾ ಎಂದು ಕೇಳಿದರೆ, ಬಿಜೆಪಿ ಜೊತೆಗೆ ಕುಮಾರಣ್ಣ ಮೈತ್ರಿ ಮಾಡಿಕೊಂಡಿದ್ದಾರೆ. ಆದರೆ ನನಗೆ ನನ್ನ ಅಭಿಮಾನಿಗಳು, ಬೆಂಬಲಿಗರೇ ನಿರ್ಣಾಯಕ. ಅವರು ಹೇಳಿದಂತೆ ಕೇಳುತ್ತೇನೆ ಎಂದರು.
Mangalore Maiden bava all set to contest as independent candidate for lok sabha elections 2024.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm