ಬ್ರೇಕಿಂಗ್ ನ್ಯೂಸ್
27-11-20 11:58 pm Mangaluru Correspondent ಕರಾವಳಿ
ಮಂಗಳೂರು, ನ.27: ನಗರದಲ್ಲಿ ಅಪಾರ್ಟ್‌ಮೆಂಟ್‌ನ ಆವರಣಗೋಡೆಯಲ್ಲಿ ಉಗ್ರ ಸಂಘಟನೆಗಳ ಪರ ಬರಹ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಸರ್ಕೀಟ್ ಹೌಸ್ ಮುಂಭಾಗ ಶುಕ್ರವಾರ ಸಂಜೆ ಪ್ರತಿಭಟನೆ ನಡೆಸಿದರು.
ಉಗ್ರರ ಪರ ಬರಹ ಬರೆದರವನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು ದೊಂದಿ ಹಿಡಿದು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭ ಮಾತನಾಡಿದ ಎಬಿವಿಪಿ ನಗರ ಕಾರ್ಯದರ್ಶಿ ಮಣಿಕಂಠ ಕಳಸ, ಪಾಕಿಸ್ತಾನದ ಲಷ್ಕರ್ ಇ ತೊಯ್ಬಾ ಉಗ್ರರ ಕೃತ್ಯದಿಂದ ಮುಂಬೈ ಮಹಾನಗರದಲ್ಲಿ ಸೈನಿಕರು, ಪೊಲೀಸರು ಸೇರಿ ಹಲವಾರು ಮಂದಿ ಮೃತಪಟ್ಟ ದಿನವಾದ ನ.26ರಂದು ದೇಶದ್ರೋಹಿಗಳು ಉಗ್ರರ ಪರ ಬರಹ ಪ್ರಕಟಿಸಿರುವುದು ಖಂಡನೀಯ. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಾದ ದಿನ ಉಗ್ರರ ಪರ ಗೋಡೆ ಬರಹದ ಮೂಲಕ ದೇಶದ್ರೋಹಿಗಳು ಮಂಗಳೂರಿನ ಶಾಂತಿ ಕದಡುವ ವಿಕೃತಿ ಮೆರೆದಿದ್ದಾರೆ. ಘಟನೆಯ ಹಿಂದೆ ಇರುವವರನ್ನು ತಕ್ಷಣ ಬಂಧಿಸದೇ ಇದ್ದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಿ ದೊಡ್ಡ ಅನಾಹುತವೇ ಸಂಭವಿಸಬಹುದು. ಈ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್, ಜಿಲ್ಲಾ ಸಂಚಾಲಕ ಹರ್ಷಿತ್ ಕೊಯ್ಲ, ನಗರ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು, ರಾಜ್ಯ ಕಾರ್ಯಕಾರಿಣಿ ಸದಸ್ಯ ನಿಷಾನ್ ಆಳ್ವ, ವಿದ್ಯಾರ್ಥಿ ನಾಯಕರಾದ ದಿನೇಶ್, ಅಖಿಲೇಶ್, ಆದಿತ್ಯ ಕೆ.ಆರ್., ಕಿರಣ್, ಸಂತೋಷ್, ಆದಿತ್ಯ ಶೆಟ್ಟಿ, ಕೀರ್ತನ್, ಆಕಾಶ್ ಮುಂತಾದವರು ಉಪಸ್ಥಿತರಿದ್ದರು.
Pro-Terror Graffiti on apartment compound wall in Kadri, ABVP Mangalore held a protest demanding for the quick arrest of the miscreants.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm