ಬ್ರೇಕಿಂಗ್ ನ್ಯೂಸ್
24-03-24 12:14 pm Mangaluru Correspondent ಕರಾವಳಿ
Photo credits : Representational Image
ಪುತ್ತೂರು, ಮಾ.24: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಕಾಡಿನಂಚಿನ ಮನೆಗೆ ಶನಿವಾರ ಸಂಜೆ ಮೂವರು ನಕ್ಸಲರು ಆಗಮಿಸಿದ್ದು ಅಕ್ಕಿ ಕೇಳಿ ಪಡೆದು ಒಂದು ತಾಸು ಕಾಲ ಮಾತುಕತೆ ನಡೆಸಿದ್ದಾರೆ.
ನಿನ್ನೆ ಸಂಜೆ ಮಳೆಯಾಗುತ್ತಿದ್ದ ಸಂದರ್ಭ ನಕ್ಸಲರು ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ. ಮನೆಯವರ ಜೊತೆ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದು ತಮ್ಮ ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ತೆರಳಿದ್ದಾರೆ. ಬಂದಿದ್ದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದ ಬಗ್ಗೆ ಮಾಹಿತಿಯಿದ್ದು ಬಟ್ಟೆಯಿಂದ ಸುತ್ತಿಕೊಂಡಿದ್ದರು. ಮನೆಯವರ ಬಳಿ ಎರಡು ಕೇಜಿಯಷ್ಟು ಅಕ್ಕಿ, ದಿನಸಿ ಸಾಮಗ್ರಿ ಪಡೆದು ಅರಣ್ಯದತ್ತ ತೆರಳಿದ್ದಾರೆ. ಮೂವರ ತಂಡ ಮನೆಯೊಳಗೆ ಬಂದಿದೆ ಎನ್ನಲಾಗಿದ್ದರೂ ತಂಡದಲ್ಲಿ ನಾಲ್ವರು ಅಥವಾ ಐವರು ಇದ್ದಿರುವ ಶಂಕೆಯಿದೆ. ಈ ಬಗ್ಗೆ ಮಾಹಿತಿ ಪಡೆದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ವಾರದ ಹಿಂದೆ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಕೂಜಿಮಲೆಯ ಎಸ್ಟೇಟ್ ಬಳಿಗೆ ಬಂದಿದ್ದ ನಾಲ್ವರು ನಕ್ಸಲರು ಅಲ್ಲಿನ ಅಂಗಡಿಯಿಂದ 25 ಕೇಜಿ ಅಕ್ಕಿ ಸೇರಿ 3500 ರೂ. ಮೌಲ್ಯದ ದಿನಸಿ ಸಾಮಗ್ರಿ ಖರೀದಿಸಿ ತೆರಳಿದ್ದರು. ಕೂಜಿಮಲೆ ಮತ್ತು ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದ್ದು ಈ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ದಳ ನಿರಂತರ ಕೂಂಬಿಗ್ ನಡುವೆಯೂ ನಕ್ಸಲರು ಮತ್ತೆ ಪ್ರತ್ಯಕ್ಷಗೊಂಡಿದ್ದಾರೆ.
ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಕೊಡಗಿನ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು ಸಂಪರ್ಕಿಸಲು ದಾರಿಯಿದೆ. ಅಲ್ಲಿಂದ ಸಂಪಾಜೆ ಗಡಿ ಮೂಲಕ ಕೇರಳದ ಅರಣ್ಯದೊಳಗೆ ಸೇರಲು ಸಾಧ್ಯವಿದೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ನಕ್ಸಲರ ತಂಡ ಮತ್ತೆ ಕೇರಳದ ಕಡೆ ಸಾಗುತ್ತಿರುವ ಸಾಧ್ಯತೆಯಿದೆ.
Mangalore a team of three Naxals visit Inakidu village in kukke subramanya seek for rice. Following reports that Naxals were spotted in Koojumale Kadamakallu areas, the Anti-Naxal Force has arrived and has begun combing operations in three places.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am