ಬ್ರೇಕಿಂಗ್ ನ್ಯೂಸ್
24-03-24 11:12 pm Mangalore Correspondent ಕರಾವಳಿ
ಮಂಗಳೂರು, ಮಾ.25: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ ಜ್ವಲಂತ ಸಾಕ್ಷಿ ಎಂದು ಮುಡಾ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರು ಹೇಳಿದ್ದಾರೆ.
ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣಾ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಂಚಗುಳಿತನ, ಭ್ರಷ್ಟಾಚಾರದ ಮತ್ತೊಂದು ಹೆಸರೇ ಕಾಂಗ್ರೆಸ್ ಎಂದು ಟೀಕಿಸಿದರು. ಮನ್ಸೂರ್ ಆಲಿ ಅವರು ಮುಡಾ ಆಯುಕ್ತರಾಗಿ ಬಂದಾಗಲೇ ಅವರ ಬಗ್ಗೆ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ಕಾಂಗ್ರೆಸ್ ಸರಕಾರ ಹಣ ಪಡೆದು ಅಧಿಕಾರಿಗಳನ್ನು ಆಯಕಟ್ಟಿನ ಜಾಗಕ್ಕೆ ನೇಮಿಸಿರುವ ಬಗ್ಗೆ ಆಗಲೇ ಅಪಸ್ವರಗಳು ಬಂದಿದ್ದವು. ಜನತೆಗೆ ಸುಲಲಿತವಾಗಿ ಸರರಕಾರಿ ಸೇವೆಗಳನ್ನು ಒದಗಿಸುವ ಬದಲು ಅಲ್ಲಲ್ಲಿ ಅಡೆತಡೆಗಳನ್ನು ಒಡ್ಡಿ ಮಧ್ಯವರ್ತಿಗಳಿಗೆ ಅವಕಾಶ ಕಲ್ಪಿಸಿ, ಆ ಮೂಲಕ ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡುವುದು ಕಾಂಗ್ರೆಸ್ ಆಡಳಿತದ ಕಾರ್ಯಶೈಲಿ ಎಂದು ರವಿಶಂಕರ ಮಿಜಾರು ಆಪಾದಿಸಿದರು.
ತಾವು ಮುಡಾ ಅಧ್ಯಕ್ಷರಾಗಿದ್ದಾಗ ಸಾರ್ವಜನಿಕರು ಅಧಿಕಾರಿಗಳಿಂದ ಸುಲಭವಾಗಿ ಕೆಲಸಗಳನ್ನು ಮಾಡಿಸಿಕೊಳ್ಳಲು ಅನುಕೂಲವಾಗುವಂತೆ ಹೆಲ್ಪ್ ಡೆಸ್ಕ್ ಆರಂಭಿಸಲಾಗಿತ್ತು. ಪ್ರತಿ ಸಭೆಯಲ್ಲೂ ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡುವ ಕಾರ್ಯ ಮಾಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರಕಾರ ಬಂದಾಗಿನಿಂದ ಹೆಲ್ಪ್‌ಡೆಸ್ಕ್ ಕಾರ್ಯ ನಿರ್ವಹಿಸುತ್ತಿಲ್ಲ, ಬದಲಾಗಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಅವರು ಹೇಳಿದರು.
ಉದ್ಯಮಿಯೊಬ್ಬರು ತಮ್ಮ ಜಾಗವನ್ನು ಸರಕಾರಕ್ಕೆ ಬಿಟ್ಟುಕೊಟ್ಟಿದ್ದು, ಅದಕ್ಕೆ ಪ್ರತಿಯಾಗಿ ಸರಕಾರ ಕೊಡುವ ಟಿಡಿಆರ್ ಗೆ ಅನುಮೋದನೆ ಪಡೆದುಕೊಳ್ಳುವ ಪ್ರಯತ್ನದಲ್ಲಿದ್ದರು. ಇದಕ್ಕಾಗಿ ಆಯುಕ್ತ ಮನ್ಸೂರ್ ಆಲಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಇದರ ವಿರುದ್ಧ ಉದ್ಯಮಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು, ದಕ್ಷಿಣ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗಡೆ, ಲಲ್ಲೇಶ್, ಮಾಜಿ ಕಾರ್ಪೊರೇಟರ್ ರಾಧಾಕೃಷ್ಣ, ಜಿಲ್ಲಾ ಮಾಧ್ಯಮ ಪ್ರಮುಖ ಕದ್ರಿ ಮನೋಹರ ಶೆಟ್ಟಿ ಉಪಸ್ಥಿತರಿದ್ದರು.
Mangaluru Urban Development Authority (MUDA) Commissioner Mansoor Ali has donated Rs 25 lakh. Former MUDA Chairman Ravishankar Mijaru said that being caught red-handed by the Lokayukta police while accepting bribe is a glaring testimony to the corruption being carried out by the Congress government in the state.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am