ಬ್ರೇಕಿಂಗ್ ನ್ಯೂಸ್
25-03-24 10:21 am Mangalore Correspondent ಕರಾವಳಿ
ಉಳ್ಳಾಲ, ಮಾ.25: ಅಸೈಗೋಳಿಯ ತಿಬ್ಲೆ ಪದವಿನ ರಾಜ್ಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದ ಬೈಕಿನಿಂದ ಎಸೆಯಲ್ಪಟ್ಟ ಸಹ ಸವಾರೆ ಗೃಹಿಣಿಯೋರ್ವರು ದಾರುಣ ಮೃತಪಟ್ಟ ಘಟನೆ ಆದಿತ್ಯವಾರ ಸಂಜೆ ನಡೆದಿದೆ. ಅಪಘಾತದ ದೃಶ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಡ್ಯಾಷ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೋಂದೆಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ನಿಧಿ(29) ಮೃತಪಟ್ಟ ಮಹಿಳೆ. ಬೈಕ್ ಸವಾರ ಯತೀಶ್ ದೇವಾಡಿಗ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಧಿ ಆದಿತ್ಯವಾರ ಮುಡಿಪುವಿನಲ್ಲಿ ನಡೆದಿದ್ದ ಗೃಹ ಪ್ರವೇಶವೊಂದರಲ್ಲಿ ಭಾಗವಹಿಸಿ ಯತೀಶ್ ಜೊತೆ ಬೈಕಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಸಂಜೆ 7.25 ಸಮಯದಲ್ಲಿ ತಿಬ್ಲೆ ಪದವು ಎಂಬಲ್ಲಿ ಅಪಘಾತ ನಡೆದಿದೆ. ಅತಿ ವೇಗದಿಂದ ಧಾವಿಸುತ್ತಿದ್ದ ಬೈಕ್ ಡಿವೈಡರ್ ನೆಗೆದು ಪಕ್ಕದ ರಸ್ತೆಗೆ ಬಿದ್ದಿದೆ. ಅಪಘಾತದ ತೀವ್ರತೆಗೆ ಬೈಕ್ ಚಾಲಕ ಯತೀಶ್ ಮತ್ತು ಸಹ ಸವಾರೆ ನಿಧಿ ರಸ್ತೆಗೆಸೆಯಲ್ಪಟ್ಟಿದ್ದಾರೆ.
ಅಪಘಾತ ಸಂದರ್ಭದಲ್ಲಿ ಇನ್ನೊಂದು ಬದಿಯ ರಸ್ತೆಗೆ ಮಹಿಳೆ ಮತ್ತು ಯುವಕ ಬಿದ್ದಿದ್ದು ಒಬ್ಬರ ಮೇಲಿನಿಂದಲೇ ಕಾರು ಚಲಿಸಿರುವ ಸಾಧ್ಯತೆಯಿದೆ. ಬೈಕ್ ಮತ್ತು ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದರೂ ಕಾರು ಚಾಲಕ ನೇರವಾಗಿ ಚಲಿಸಿದ್ದು ಹಿಂಬದಿಯ ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ತೀವ್ರ ಗಾಯಗೊಂಡಿದ್ದ ಮಹಿಳೆಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಯುವಕನೂ ಗಂಭೀರ ಸ್ಥಿತಿಯಲ್ಲಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Following a bike ramming on a divider in #Mangalore, the women with the pillion rider died instantly. Nidhi(29) has been identified as the dead. They were on their way back home after a house inauguration ceremony. #liveaccident #mangaloreaccident pic.twitter.com/d0gui6dfH5
— Headline Karnataka (@hknewsonline) March 25, 2024
Mangalore Asaigoli accident, pillion rider wife dies on spot after bike rams on divider. The deceased has been identified as Nidhi(29). They were returning home after a house opening ceremony in Mangalore.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm