ಬ್ರೇಕಿಂಗ್ ನ್ಯೂಸ್
25-03-24 03:29 pm Mangalore Correspondent ಕರಾವಳಿ
ಉಳ್ಳಾಲ, ಮಾ. 25: ದೇರಳಕಟ್ಟೆ ಸಮೀಪದ ಅಸೈಗೋಳಿ ತಿಬ್ಲೆಪದವು ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರಳಾಗಿದ್ದ ವಿವಾಹಿತ ಮಹಿಳೆ ಮೃತಪಟ್ಟಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರನೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾನೆ.
ಮಂಗಳೂರಿನ ಪಚ್ಚನಾಡಿ ನಿವಾಸಿ ಯತೀಶ್ ದೇವಾಡಿಗ(29) ಸಾವನ್ನಪ್ಪಿದ ಯುವಕ. ನಿನ್ನೆ ಸಂಜೆ ತಿಬ್ಲೆಪದವು ರಾಜ್ಯ ಹೆದ್ದಾರಿಯಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಇನ್ನೊಂದು ಬದಿಯ ರಸ್ತೆಗೆ ಬಿದ್ದಿತ್ತು. ಸವಾರ ಯತೀಶ್ ಮತ್ತು ಸಹ ಸವಾರೆ ಶ್ರೀನಿಧಿ(30) ರಸ್ತೆಗೆಸೆಯಲ್ಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಪಡೀಲ್ ನಿವಾಸಿ ದೀಕ್ಷಿತ್ ಎಂಬವರ ಪತ್ನಿ ಹಳೆಯಂಗಡಿ ತೋಕೂರು ಬಳಿಯ ನಿವಾಸಿ ಶ್ರೀನಿಧಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿಯೇ ಸಾವನ್ನಪ್ಪಿದ್ದರು.
ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯತೀಶ್ ಇಂದು ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಆದಿತ್ಯವಾರ ಶ್ರೀನಿಧಿ ಅವರು ಮುಡಿಪುವಿನಲ್ಲಿ ನಡೆದಿದ್ದ ಗೃಹ ಪ್ರವೇಶ ಸಮಾರಂಭದಲ್ಲಿ ಭಾಗವಹಿಸಿದ್ದರು. ಸಂಜೆ ಯತೀಶ್ ಜೊತೆ ಬೈಕಿನಲ್ಲಿ ಮಂಗಳೂರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ತೋಕೂರಿನ ತವರು ಮನೆಯಲ್ಲೇ ಉಳಿದಿದ್ದ ಶ್ರೀನಿಧಿಗೆ ಇಬ್ಬರು ಪುಟ್ಟ ಮಕ್ಕಳಿದ್ದು ಮನೆ ಮಗಳ ಸಾವಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಯತೀಶ್ ದೇವಾಡಿಗನೂ ಪೋಷಕರಿಗೆ ಏಕೈಕ ಪುತ್ರನಾಗಿದ್ದು ಆತನ ಅಕಾಲಿಕ ಅಗಲಿಕೆಯಿಂದ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
ಆರಂಭದಲ್ಲಿ ಬೈಕ್ ಸವಾರರು ಡಿವೈಡರ್ಗೆ ಬಡಿದಿದ್ದರು ಎಂದು ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಹೆಡ್ ಲೈನ್ ಕರ್ನಾಟಕಕ್ಕೆ ಲಭಿಸಿದ ಕಾರೊಂದರ ಡ್ಯಾಷ್ ಕ್ಯಾಮೆರಾ ಫೂಟೇಜಿಂದ ಅಪಘಾತದ ನೈಜ ಚಿತ್ರಣ ವರದಿಯಾಗಿತ್ತು. ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದಿದ್ದು ಪಕ್ಕದ ರಸ್ತೆಯಲ್ಲಿ ಎಸೆಯಲ್ಪಟ್ಟ ಸವಾರರ ಮೇಲೆ ಕಾರೊಂದು ಹರಿದಿತ್ತು. ಕಾರ್ ಡ್ಯಾಷ್ ಕ್ಯಾಮೆರಾ ಫೂಟೇಜ್ ಬೆನ್ನತ್ತಿದ್ದ ಪೊಲೀಸರು ಬೈಕ್ ಸವಾರರ ಮೇಲೆ ಹರಿದಿದ್ದ ಕಾರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
Following a bike ramming on a divider in #Mangalore, the women with the pillion rider died instantly. Nidhi(29) has been identified as the dead. They were on their way back home after a house inauguration ceremony. #liveaccident #mangaloreaccident pic.twitter.com/d0gui6dfH5
— Headline Karnataka (@hknewsonline) March 25, 2024
Mangalore Asaigoli accident, bike rider dies within few hours of pillon riders death. The deceased has been identified as Yatish Devadiga. Soon after the accident he was rushed to the private hospital but as he did not respond to the treatment he has breathed his last. The accident video was captured in a dashcam of a car.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm