ಬ್ರೇಕಿಂಗ್ ನ್ಯೂಸ್
25-03-24 07:06 pm HK NEWS ಕರಾವಳಿ
ಉಡುಪಿ, ಮಾ.25: ಬಾರ್ ನಲ್ಲಿ ಕುಳಿತು ಕುಡಿಯುತ್ತಿದ್ದಾಗ ಕಾಲು ತಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಣಿಪಾಲ ಸರಳೇಬೆಟ್ಟು ಪ್ರದೇಶದಲ್ಲಿ ನಡೆದಿದೆ.
ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿ, ಮುಂಬೈ ಮೂಲದ ಆರುಷ್ ಕುಮಾರ್ (21)ಹಲ್ಲೆಗೊಳಗಾದ ಯುವಕ. ಪುಂಡರ ತಂಡವು ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಮಾರು ಆರು ಮಂದಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದಾರೆ.
ಮದ್ಯ ಸೇವಿಸುತ್ತಿದ್ದಾಗ ಪುಂಡರ ತಂಡದ ಓರ್ವನಿಗೆ ಕಾಲು ತಾಗಿದ ಹಿನ್ನೆಲೆ ತಗಾದೆ ತೆಗೆದು ಹಲ್ಲೆ ನಡೆಸಿದ್ದಾರೆ. ಬಾರ್ ನಲ್ಲಿ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ, ಆತನನ್ನು ವಾಸವಿದ್ದ ಅಪಾರ್ಟ್ ಮೆಂಟ್ ವರೆಗೂ ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಅರುಷ್ ತನ್ನ ಅಪಾರ್ಟ್ ಮೆಂಟ್ ನಲ್ಲಿ ಒಬ್ಬನೇ ತಂಗಿದ್ದ. ಕೊಠಡಿಯ ವರೆಗೂ ಅಟ್ಟಾಡಿಸಿ ರೂಂ ಒಳಗೆ ಹೋಗಲು ಬಿಡದೆ ಎಳೆದು ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ರಕ್ಷಿಸಲು ಬಂದ ಆರುಷ್ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆಬಳಿಕ ಯುವಕನ ಮೊಬೈಲ್ ಗೆ ಕರೆ ಮಾಡಿ ಮತ್ತೊಮ್ಮೆ ಹಲ್ಲೆ ನಡೆಸುವುದಾಗಿ ಬೆದರಿಕೆ ಒಡ್ಡಿದ್ದಾರೆ. ಹಲ್ಲೆ ವೀಡಿಯೋ ಆಧರಿಸಿ ಅರುಷ್ ನನ್ನ ಕರೆಸಿ ಮಣಿಪಾಲ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸಿಸಿಟಿವಿ ಹಾಗೂ ಯುವಕರ ಮೊಬೈಲ್ ಸಂಖ್ಯೆ ಮೇಲೆ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
#Udupi #Manipal student thrashed for touching his leg in bar, #video goes viral #BREAKING_NEWS pic.twitter.com/4mce0NkEUz
— Headline Karnataka (@hknewsonline) March 25, 2024
Udupi Manipal student thrashed for touching strangers leg in bar, video goes viral
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm