ಬ್ರೇಕಿಂಗ್ ನ್ಯೂಸ್
25-03-24 07:39 pm Mangaluru Correspondent ಕರಾವಳಿ
ಮಂಗಳೂರು, ಮಾ.25: ಇಡೀ ದೇಶಕ್ಕೆ ಇರುವ ದೊಡ್ಡ ಗ್ಯಾರಂಟಿ ಪ್ರಧಾನ ಮಂತ್ರಿ ನರೇಂದ್ರ ಮೋದಿ. ಎಲ್ಲಾ ಗ್ಯಾರಂಟಿಗಳಿಗೂ ಗ್ಯಾರಂಟಿ ಪ್ರಧಾನಿ ಮೋದಿ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಹೇಳಿದ್ದಾರೆ.
ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಮಂದಿ ಕಾಂಗ್ರೆಸಿಗೆ ಗ್ಯಾರಂಟಿ ಯೋಜನೆ ಇದೆ, ನಿಮ್ಮದೇನು ಸ್ಟ್ರಾಟಜಿ ಇದೆಯೆಂಬ ಪ್ರಶ್ನೆಗೆ, ನರೇಂದ್ರ ಮೋದಿಯವರ ಸಾಧನೆಗಳು,10 ವರ್ಷದಲ್ಲಿ ದೇಶದಲ್ಲಿ ಅವರು ಮಾಡಿರುವ ಕೆಲಸ. ಮುಂದಿನ 25 ವರ್ಷಗಳ ಕಾಲ ವಿಕಸಿತ ಭಾರತದ ಕಲ್ಪನೆ, ಎಲ್ಲರೂ ಒಟ್ಟಾಗಿ ಒಂದಾಗಿ ಸೇರಿಕೊಂಡು ದೇಶದ ಅಭಿವೃದ್ಧಿ ಮಾಡಬೇಕು ಎಂಬ ಪರಿಕಲ್ಪನೆ. ಭಾರತ ದೇಶವನ್ನು ನಂಬರ್ ಒನ್ ಮಾಡಬೇಕು ಅನ್ನೋದೇ ನಮ್ಮ ಗ್ಯಾರೆಂಟಿ ಎಂದು ಹೇಳಿದರು.


ಕಾಂಗ್ರೆಸ್ ನ ಗ್ಯಾರೆಂಟಿ ಯಾವ ರೀತಿ ಆಗುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಕಳೆದ ಒಂದು ವರ್ಷದಿಂದ ಯಾವುದೇ ಅನುದಾನ, ಯಾವುದೇ ಶಿಲಾನ್ಯಾಸ ಮಾಡದ ಮುಖ್ಯಮಂತ್ರಿ ಅಂದ್ರೆ ಅದು ಸಿದ್ದರಾಮಯ್ಯ. ಯಾವುದೇ ಹೊಸ ಯೋಜನೆಗೆ ಶಿಲಾನ್ಯಾಸ ಮಾಡದ ಜಿಲ್ಲಾ ಉಸ್ತುವಾರಿ ಸಚಿವ ಅಂದ್ರೆ ಅದು ದಿನೇಶ್ ಗುಂಡೂರಾವ್. ಗ್ಯಾರಂಟಿಗೆ ದುಡ್ಡು ಕೊಟ್ಟು ಅಭಿವೃದ್ಧಿ ಯೋಜನೆಗಳಿಗೆ ಹಣ ಇಲ್ಲದ ಸ್ಥಿತಿಯಾಗಿದೆ ಎಂದು ಟಾಂಗ್ ಇಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ದೊಡ್ಡ ಕೊಡುಗೆಯನ್ನ ಕೊಟ್ಟಿದೆ. 5 ರಾಷ್ಟ್ರೀಕೃತ ಬ್ಯಾಂಕ್ ಗಳನ್ನ ದೇಶಕ್ಕೆ ಕೊಟ್ಟಿದೆ. ಇಂತಹ ಪ್ರಗತಿಶೀಲ ಜಿಲ್ಲೆಯನ್ನ ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದೇ ನನ್ನ ಭಾಗ್ಯ. ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಕಲ್ಪನೆಯಡಿಯಲ್ಲಿ ದೇಶದ ಅಭಿವೃದ್ಧಿ ಮಾಡುವ ಕೆಲಸ ಮಾಡುತ್ತೇನೆ ಎಂದು ಚೌಟ ಹೇಳಿದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯರ ಹೆಸರಿಡುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ನಾವು ತುಳುನಾಡಿನ ದೈವ ದೇವರನ್ನ ನಂಬುವಂತಹ ಪಾರ್ಟಿ. ಕೋಟಿ ಚೆನ್ನಯ್ಯರು ನಮ್ಮೆಲ್ಲರಿಗೂ ಪ್ರೇರಣಾ ಶಕ್ತಿ. ನಮ್ಮೆಲ್ಲರಿಗೂ ದೈವೀ ಸ್ವರೂಪವಾದ ಶಕ್ತಿ. ಕೋಟಿ ಚೆನ್ನಯ್ಯರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು. ಇಡೀ ರಾಜ್ಯದ ಜನರಿಗೆ ಪ್ರೇರಣಾದಾಯಿ ಹೆಸರಾಗಬೇಕು. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನ ಮಾಡುತ್ತೇವೆ.
ರಾಜ್ಯ ಸರಕಾರದಿಂದ ಈ ಪ್ರಸ್ತಾವನೆಯನ್ನ ಈಗಾಗಲೇ ಕೇಂದ್ರಕ್ಕೆ ಕಳುಹಿಸಲಾಗಿದೆ. ಅದನ್ನ ಬೆನ್ನು ಹಿಡಿದು ಕೆಲಸ ಆಗುವಂತೆ ಮಾಡುತ್ತೇನೆ ಎಂದು ಭರವಸೆ ಕೊಟ್ಟರು.
Making India no 1 is our guarantee says BJP Candidate Brijesh Chowta in Mangalore
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm