ಬ್ರೇಕಿಂಗ್ ನ್ಯೂಸ್
27-03-24 09:11 pm Mangaluru Correspondent ಕರಾವಳಿ
ಮಂಗಳೂರು, ಮಾ.27: ಪ್ರಧಾನಿ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಹತಾಶೆಯ ಭಾವನೆಯಿಂದ ಕೂಡಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೂ ಮೊದಲೇ ಕಾಂಗ್ರೆಸ್ ಸೋಲೊಪ್ಪಿಕೊಂಡಿರುವುದು ವೇದ್ಯವಾಗುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಲೇವಡಿ ಮಾಡಿದ್ದಾರೆ.
ಸಚಿವ ತಂಗಡಗಿ ಹೇಳಿಕೆಯನ್ನು ಬಿಜೆಪಿ ತೀಕ್ಷ್ಣವಾಗಿ ಖಂಡಿಸುತ್ತದೆ. ಅವರಿಗೆ ತಾಕತ್ತಿದ್ದರೆ ಮೊದಲು ಕಾಂಗ್ರೆಸ್ ಸರಕಾರವನ್ನು ಸರಿದಾರಿಗೆ ತರಲಿ. ಸ್ವತಃ ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದೂ ದಲಿತ, ಹಿಂದುಳಿದ ವರ್ಗದವರ ಕುರಿತ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ಧೋರಣೆಯನ್ನು ಸರಿಪಡಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ಸರಕಾರ ತನ್ನ ಗ್ಯಾರಂಟಿ ಭಾಗ್ಯಗಳಿಗೆ ಹಣ ಹೊಂದಿಸಲು ದಲಿತ, ಹಿಂದುಳಿದ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನೂ ದುರ್ಬಳಕೆ ಮಾಡಿಕೊಂಡಿದೆ. ಕಳೆದ ವರ್ಷ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ 11 ಸಾವಿರ ಕೊಟಿ ರೂ. ಹಾಗೂ ಈ ವರ್ಷ 14 ಸಾವಿರ ಕೋಟಿ ರೂ.ಗಳನ್ನು ಬಿಟ್ಟಿ ಭಾಗ್ಯಗಳಿಗೆ ದುರ್ಬಳಕೆ ಮಾಡಿಕೊಂಡಿದೆ. ಆಮೂಲಕ ಹಿಂದುಳಿದ ವರ್ಗಗಳ ಬಗ್ಗೆ ತನಗೆಷ್ಟು ಕಾಳಜಿ ಇದೆ ಎಂಬುದನ್ನು ತಾನೇ ಬಹಿರಂಗಪಡಿಸಿದೆ ಎಂದು ಶಾಸಕ ಹರೀಶ್ ಪೂಂಜ ಟೀಕಿಸಿದರು.
ನಗರದ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎಂಬಂತಾಗಿದೆ ಕಾಂಗ್ರೆಸ್ ಪರಿಸ್ಥಿತಿ. ಅಂದು ಸೋನಿಯಾ ಗಾಂಧಿ ಮೋದಿಯವರನ್ನು ಸಾವಿನ ವ್ಯಾಪಾರಿ ಎಂದಿದ್ದರು. ಬಳಿಕ ಮಲ್ಲಿಕಾರ್ಜುನ ಖರ್ಗೆ ಮೋದಿಯವರನ್ನು ವಿಷ ಸರ್ಪ ಎಂದಿದ್ದರು. ಸಿದ್ದರಾಮಯ್ಯ ಅವರಂತೂ ಏಕವಚನದಲ್ಲಿ ಮಾತನಾಡುತ್ತಾರೆ. ಅದರ ಮುಂದುವರೆದ ಭಾಗವಾಗಿ ಈಗ ಸಚಿವ ಶಿವರಾಜ್ ತಂಗಡಗಿ ಮೋದಿಯವರಿಗೆ ಬೆಂಬಲಿಸುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದಾರೆ. ಚುನಾವಣಾ ಸೋಲಿನ ವಾಸನೆ ಬರುತ್ತಿದ್ದಂತೆ ಕಾಂಗ್ರೆಸ್ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತದೆ, ದೇಶದಲ್ಲಿ ಪಾತಾಳಕ್ಕೆ ತಲುಪಿರುವ ಕಾಂಗ್ರೆಸ್, ರಾಜ್ಯದಲ್ಲೂ ಪಾತಾಳಕ್ಕೆ ಕುಸಿಯುವ ಭಯದಿಂದ ಈ ರೀತಿ ಹೇಳಿಕೆಗಳನ್ನು ನೀಡುತ್ತಿದೆ ಎಂದು ಹರೀಶ ಪೂಂಜ ಹೇಳಿದರು.
ಸುಮಾರು 1.84 ಕೋಟಿ ಮೊದಲ ಬಾರಿಗೆ ಮತ ಚಲಾಯಿಸುವವರು ಮೋದಿಯವರ ಜೊತೆಗಿದ್ದಾರೆ. 20- 29 ವರ್ಷ ವಯಸ್ಸಿನ ಯುವಕರು 19.74 ಕೋಟಿ ಮತದಾರರು ಮೋದಿಯವರ ಬಗ್ಗೆ ಒಳ್ಳೆಯ ಮಾತನಾಡುತ್ತಿದ್ದಾರೆ, ಅದಕ್ಕಾಗಿಯೇ ಕಾಂಗ್ರೆಸ್ ಹೆದರುತ್ತಿದೆ. ಮೋದಿಯವರ ಪರ ಘೋಷಣೆ ಕೂಗಿದವರಿಗೆ ಕಪಾಳಮೋಕ್ಷ ಮಾಡುವ ಸಚಿವರ ಕರೆ ಗಾಂಧಿಯವರ ಅಹಿಂಸಾತ್ಮಕ ಆದರ್ಶಗಳಿಗೆ ವಿರುದ್ಧವಾಗಿದೆ. ಇದು ಕಾಂಗ್ರೆಸ್ ಪಕ್ಷದ ನೀತಿಯಲ್ಲಿ ಆತಂಕಕಾರಿ ಬದಲಾವಣೆಯನ್ನು ಸೂಚಿಸುತ್ತದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಇಂತಹ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳುತ್ತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸವಾಲೆಸೆಯುವಂತಿದೆ ಎಂದು ಪೂಂಜ ನುಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಕೊಟ್ಯಾಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ, ಯುವಮೋರ್ಚಾ ಉಪಾಧ್ಯಕ್ಷ ಅಶ್ರಿತ್ ನೋಂಡ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ ಪೂಜಾರಿ, ಮಾಧ್ಯಮ ಸಹ ಸಂಚಾಲಕ ಮನೋಹರ್ ಶೆಟ್ಟಿ ಕದ್ರಿ ಉಪಸ್ಥಿತರಿದ್ದರು.
Bjp MLA Harish poonja slams remarks made by Shivaraj Tangadagi. BJP condemns statement made by Shivaraj Tangadagi. Tangadagi on Monday stoked a major controversy by saying that youths and students chanting ‘Modi, Modi’ slogans should be slapped. The statement garnered sharp reactions from the opposition party, to which the former CM said, “Wait for some time, people will slap the Congress party through voting.”
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm