ಬ್ರೇಕಿಂಗ್ ನ್ಯೂಸ್
28-03-24 03:25 pm Mangalore Correspondent ಕರಾವಳಿ
ಪುತ್ತೂರು, ಮಾ.28: ಕೊಡಗಿನ ಗಡಿಭಾಗ ಸುಳ್ಯ ತಾಲೂಕಿನ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ನಲ್ಲಿ ಮತ್ತೆ ಶಂಕಿತ ನಕ್ಸಲರ ಚಲನವಲನ ಕಂಡುಬಂದಿದೆ. ಅಪರಿಚಿತ ಮಹಿಳೆಯೊಬ್ಬರು ರಬ್ಬರ್ ಎಸ್ಟೇಟ್ ನಲ್ಲಿ ಕಾಣಿಸಿಕೊಂಡಿದ್ದು ನಕ್ಸಲ್ ನಿಗ್ರಹ ದಳಕ್ಕೆ ಮಾಹಿತಿ ನೀಡಲಾಗಿದೆ.
ಕೂಜಿಮಲೆ ಎಸ್ಟೆಟ್ ಕೊಡಗು ಜಿಲ್ಲೆಯ ವ್ಯಾಪ್ತಿಗೆ ಸೇರಿದ್ದು ಬುಧವಾರ ಅಪರಾಹ್ನ ಅಪರಿಚಿತ ಮಹಿಳೆ ಎಸ್ಟೇಟಿನ ರಬ್ಬರ್ ತೋಟದಲ್ಲಿ ಸಂಚರಿಸುತ್ತಿರುವುದನ್ನು ಸಿಬಂದಿ ನೋಡಿದ್ದಾರೆ. ಬಳಿಕ ನಕ್ಸಲ್ ನಿಗ್ರಹ ಪಡೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದು ಶೋಧ ನಡೆಸಿದ್ದಾರೆ. ಶಂಕಿತ ಮಹಿಳೆ ರಬ್ಬರ್ ತೋಟದಿಂದ ಅರಣ್ಯ ಭಾಗದತ್ತ ತೆರಳಿದ್ದಾಳೆ ಎನ್ನಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಸಿಬಂದಿ ಕಳೆದ ಒಂದು ವಾರದಿಂದ ಐನೆಕಿದು, ಕೂಜಿಮಲೆ ಆಸುಪಾಸಿನಲ್ಲೇ ಶೋಧ ಕಾರ್ಯ ನಡೆಸುತ್ತಿದ್ದಾರೆ. ಶಂಕಿತ ಮಹಿಳೆ ಕಾಣಿಸಿಕೊಂಡ ಮಾಹಿತಿ ಲಭ್ಯವಾದ ಕೂಡಲೇ ಎಎನ್‌ಎಫ್ ತಂಡ ಎಸ್ಟೇಟ್ ಪ್ರದೇಶಕ್ಕೆ ತೆರಳಿ ಶೋಧ ಕಾರ್ಯ ಆರಂಭಿಸಿದೆ. ಮಾರ್ಚ್ 16ರಂದು ನಾಲ್ವರು ಶಂಕಿತ ನಕ್ಸಲರು ಕೂಜಿಮಲೆ ಎಸ್ಟೇಟ್ ಬಳಿಯ ಅಂಗಡಿಯೊಂದಕ್ಕೆ ಭೇಟಿ ನೀಡಿ ಸಾಮಗ್ರಿ ಖರೀದಿಸಿ ಅರಣ್ಯದತ್ತ ತೆರಳಿದ್ದರು. ಆನಂತರ, ಮಾ.23ರಂದು ನಾಲ್ವರು ಶಂಕಿತರು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಭೇಟಿ ನೀಡಿ ಊಟ, ಆಹಾರ ಸಾಮಗ್ರಿ ಪಡೆದು ತೆರಳಿದ್ದರು.
ಮಾ.27ರಂದು ಮತ್ತೆ ಕೂಜಿಮಲೆ ಎಸ್ಟೇಟ್ ಪ್ರದೇಶದಲ್ಲಿ ಅಪರಿಚಿತ ಮಹಿಳೆ ಕಾಣಿಸಿಕೊಂಡಿದ್ದಾಳೆ. ಮಾ.18ರಿಂದ ವಿವಿಧೆಡೆ ನಕ್ಸಲ್ ನಿಗ್ರಹ ಪಡೆ ನಿರಂತರ ಶೋಧ ನಡೆಸುತ್ತಿದ್ರೂ ನಕ್ಸಲರ ಬಗ್ಗೆ ಯಾವುದೇ ಸುಳಿವು ದೊರಕಿಲ್ಲ.
An unidentified woman was reportedly spotted multiple times in the Koojimale estate area on Wednesday, prompting a search amid suspicions that she may be affiliated with Naxalites.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm