ಬ್ರೇಕಿಂಗ್ ನ್ಯೂಸ್
31-03-24 08:23 pm Mangalore Correspondent ಕರಾವಳಿ
ಉಳ್ಳಾಲ, ಮಾ.31: ಮುಡಿಪು ಪೇಟೆಯ ರಾಜ್ಯ ಹೆದ್ದಾರಿಯಲ್ಲೇ ವಾಹನ ಸಂಚಾರಕ್ಕೆ ತೊಡಕುಂಟು ಮಾಡಿ ಇಫ್ತಾರ್ ಕೂಟ ನಡೆಸಿದ್ದ "ಆಟೋ ರಾಜಕನ್ಮಾರ್ " ಜಿಲ್ಲಾ ಆಟೋ ಚಾಲಕರ ಸಂಘಟನೆಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ರಾಷ್ಟ್ರೀಯವಾದಿ ಚಿಂತಕರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಇಫ್ತಾರ್ ಕೂಟದಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯು ಸಹಾಯಕ ಚುನಾವಣಾ ಅಧಿಕಾರಿಗೆ ದೂರು ನೀಡಿದೆ.
ಮುಡಿಪು ಜಂಕ್ಷನ್ನಲ್ಲಿ ಕಳೆದ ಶುಕ್ರವಾರ ಸಂಜೆ ರಿಕ್ಷಾ ಚಾಲಕರ "ಆಟೋ ರಾಜಕನ್ಮಾರ್" ಜಿಲ್ಲಾ ಸಂಘಟನೆಯು ರಾಜ್ಯ ಹೆದ್ದಾರಿಯಲ್ಲೇ ಸೌಹಾರ್ದ ಬೃಹತ್ ಇಫ್ತಾರ್ ಕೂಟ ಆಯೋಜಿಸಿತ್ತು. ಈ ಹಿಂದೆ ಖಾಸಗಿ ಸಭಾಂಗಣದಲ್ಲಿ ನಡೆಸಲಾಗುತ್ತಿದ್ದ ಇಫ್ತಾರ್ ಕೂಟವನ್ನ ಸಾರ್ವಜನಿಕ ರಸ್ತೆಯಲ್ಲೇ ನಡೆಸಿ ವಾಹನ ಸಂಚಾರಕ್ಕೆ ತೊಡಕುಂಟು ಮಾಡಿದ್ದ "ಆಟೋ ರಾಜಕನ್ಮಾರ್" ಸಂಘಟನೆ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ರಾಷ್ಟ್ರೀಯವಾದಿ ಚಿಂತಕರು ಸಾಮಾಜಿಕ ಜಾಲತಾಣಗಳಲ್ಲಿ ಇಫ್ತಾರ್ ಕೂಟದ ವೀಡಿಯೋ ಹಂಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಮಧ್ಯೆ ಮುಡಿಪು ವಲಯದ ಹಿಂದೂ ಜಾಗರಣಾ ವೇದಿಕೆಯು ರಸ್ತೆ ತಡೆದು ನಡೆಸಿದ್ದ ಇಫ್ತಾರ್ ಕೂಟದಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಸಹಾಯಕ ಚುನಾವಣಾಧಿಕಾರಿ, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ ಅವರಿಗೆ ಲಿಖಿತ ದೂರು ನೀಡಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿದ್ದರೂ ಮುಡಿಪು ಜಂಕ್ಷನ್ ನಲ್ಲಿ ರಸ್ತೆ ತಡೆದು ಸಾರ್ವಜನಿಕರಿಗೆ ತೊಂದರೆ ನೀಡಿ ಇಫ್ತಾರ್ ಕೂಟ ನಡೆಸಿದ್ದು ಇಫ್ತಾರ್ ಹೆಸರಲ್ಲಿ ಸಾರ್ವಜನಿಕರಿಗೆ ಸಹಭೋಜನದ ವ್ಯವಸ್ಥೆ ಮಾಡಿದ್ದಾರೆ. ಆಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಹಿಂ.ಜಾ.ವೇ. ಜಿಲ್ಲಾಧ್ಯಕ್ಷರಾದ ನರಸಿಂಹ ಮಾಣಿ ಹೇಳಿದ್ದಾರೆ.
ಹಿಂ.ಜಾ.ವೇ ಮಂಗಳೂರು ಸಂಪರ್ಕ ಪ್ರಮುಖ್ ಪ್ರಶಾಂತ್ ಶೆಟ್ಟಿ ಇರಾ, ತಾಲೂಕು ಸಹ ಸಂಚಾಲಕ ಪ್ರಶಾಂತ್ ಮುಡಿಪು, ಮುಡಿಪು ವಲಯ ಸಹ ಸಂಚಾಲಕ ಗುರುಕಿರಣ್, ಉಲ್ಲಾಸ್ ಮುಡಿಪು ಜತೆಯಲ್ಲಿದ್ದರು.
Iftar lunch hoisted at Mudipu junction in Mangalore goes viral, Hindu Jagrana vedike files complaint to election commision for violating election code of conduct.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am