ಬ್ರೇಕಿಂಗ್ ನ್ಯೂಸ್
03-04-24 04:58 pm Mangalore Correspondent ಕರಾವಳಿ
ಮಂಗಳೂರು, ಎ.3: ದೇಶದಲ್ಲಿ ಕಾನೂನಾತ್ಮಕ ರೀತಿಯಲ್ಲಿ ಭ್ರಷ್ಟಾಚಾರ ಮಾಡಿರುವುದು ಬಿಜೆಪಿ. ಅತಿ ಹೆಚ್ಚು ಭ್ರಷ್ಟಾಚಾರ ಮಾಡಿರುವ ಪಾರ್ಟಿ ಇದ್ದರೆ ಅದು ಬಿಜೆಪಿ. ಕಾನೂನನ್ನು ದುರುಪಯೋಗ ಮಾಡಿಕೊಂಡು ಬಿಜೆಪಿ 12 ಸಾವಿರ ಕೋಟಿಯನ್ನು ಲೂಟಿ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆಗಮಿಸಿದ್ದ ಸಚಿವರು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು. ಐಟಿ, ಇಡಿಯಂತಹ ತನಿಖಾ ಸಂಸ್ಥೆಗಳನ್ನು ಮುಂದಿಟ್ಟು ನೀವು ಹಣ ಕೊಡದೇ ಇದ್ದರೆ ರೈಡ್ ಮಾಡ್ತೀವಿ ಎಂದು ಹೇಳಿ ಕೇಸು ಹಾಕಿಸಿ, ಬಳಿಕ ಹಣ ಕೊಟ್ಟ ಮೇಲೆ ಕೇಸನ್ನು ಮುಚ್ಚಿ ಹಾಕಿದ್ದಾರೆ. ಇದನ್ನೆಲ್ಲ ದೇಶದ ಜನರು ನೋಡುತ್ತಿದ್ದು, ಈ ಬಾರಿ ಉತ್ತರ ನೀಡಲಿದ್ದಾರೆ. ಈ ಸಲದ ಚುನಾವಣೆ ಅತ್ಯಂತ ಅಸಮಂಜಸ ಸ್ಥಿತಿಯಲ್ಲಿ ನಡೆಯುತ್ತಿದ್ದು, ಈ ಹಿಂದೆ ಯಾವತ್ತೂ ಈ ರೀತಿ ಆಗಿದ್ದು ಇಲ್ಲ.
ಕಾಂಗ್ರೆಸಿಗೆ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರದ ಕೆಲಸಗಳು ಮತ್ತು ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ. ಗ್ಯಾರಂಟಿ ಯೋಜನೆಯ ಲಾಭ ಪಡೆದವರು ನಮ್ಮ ಕೈಹಿಡಿಯಲಿದ್ದಾರೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಮೇಲೆ ವಿಶ್ವಾಸ, ನಂಬಿಕೆ ಬಂದಿದೆ. ಬಿಜೆಪಿಯವರು ಗ್ಯಾರಂಟಿ ಭರವಸೆಗಳನ್ನು ಹೇಳಿದ್ದು ಬಿಟ್ಟರೆ ಉಳಿಸಿಕೊಂಡಿಲ್ಲ.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಂದಿದ್ದನ್ನು ಮಾಡಿದ್ದಾರೆಯೇ.. ಡಾಲರಿಗೆ 45 ರೂಪಾಯಿ ಮಾಡ್ತೀವಿ ಎಂದಿದ್ದರು, ಈಗ ಡಾಲರಿಗೆ 83 ರೂ. ಆಗಿದೆ. ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಎಂದಿದ್ದರು. ರೈತರ ಸ್ಥಿತಿ ಏನಾಗಿದೆ, ಇವರು ಯಾವ್ದಾದ್ರೂ ಹೇಳಿದ್ದನ್ನು ಮಾಡಿದ್ದು ಇದೆಯೇ.. ಬಿಜೆಪಿ ಗ್ಯಾರಂಟಿಗೆ ಬೆಲೆ ಇಲ್ಲ, ಕಾಂಗ್ರೆಸ್ ಗ್ಯಾರಂಟಿಗೆ ಬೆಲೆ ಇದೆ ಎಂದು ಹೇಳಿದರು. ನಿನ್ನೆ ಅಮಿತ್ ಷಾ ಬಂದು ಸುಳ್ಳನ್ನೇ ಹೇಳಿಕೊಂಡು ಹೋಗಿದ್ದಾರೆ. ಬರ ಪರಿಹಾರ ಕೊಡದೆ ಸುಳ್ಳು ಹೇಳಿ ನಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
Mangalore Dinesh Gundu Rao says no guarantee works of BJP, no worth BJP gaurnatees in state, only congress gaurnatees are worth he slammed speaking to media persons in Mangalore.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm