ಬ್ರೇಕಿಂಗ್ ನ್ಯೂಸ್
03-04-24 07:04 pm Mangalore Correspondent ಕರಾವಳಿ
ಮಂಗಳೂರು, ಎ.3: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಎ.4ರಂದು ನಾಮಪತ್ರ ಸಲ್ಲಿಸಲು ಸಿದ್ಧತೆ ನಡೆಸಿರುವಾಗಲೇ ಮೀನುಗಾರ ಮಹಿಳೆಯರು, ಹೂವು ಮಾರುವ ಮಹಿಳೆಯರು ಬಿಜೆಪಿ ಕಚೇರಿಗೆ ಬಂದು ವಿಶೇಷ ರೀತಿಯಲ್ಲಿ ಹಾರೈಕೆ ಮಾಡಿದ್ದಾರೆ.
ಬಂಟ್ಸ್ ಹಾಸ್ಟೆಲಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಬಡ ಮೀನುಗಾರ ಮಹಿಳೆಯರು, ಹೂವು ಮಾರುವ ಮಹಿಳೆಯರು ಮತ್ತು ಬೀದಿ ನಾಯಿಗಳಿಗೆ ಆಹಾರ ನೀಡುವ ರಜನಿ ಶೆಟ್ಟಿ ಮತ್ತಿತರರು ಸೇರಿ ಬೃಜೇಶ್ ಚೌಟ ಅವರಿಗೆ ಆರತಿ ಎತ್ತಿ ಹಣೆಗೆ ಕುಂಕುಮ ಇಟ್ಟು ಆಶೀರ್ವಾದ ಮಾಡಿದ್ದಾರೆ. ಅಲ್ಲದೆ, ತಾವೇ ದುಡಿದು ಸಂಗ್ರಹಿಸಿದ ಇಡುಗಂಟನ್ನು ಅಭ್ಯರ್ಥಿಗೆ ನೀಡಿದ್ದು ಇದೇ ಹಣವನ್ನು ನಾಮಪತ್ರ ಸಲ್ಲಿಕೆಗೆ ಬಳಸುವಂತೆ ಹೇಳಿದ್ದಾರೆ. ಹತ್ತು ಮಂದಿ ಬಡ ಮಹಿಳೆಯರು ತಾವು ದುಡಿದಿಟ್ಟ ಹಣವನ್ನು ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಸೈನಿಕನ ಚುನಾವಣಾ ಠೇವಣಿಯೆಂದು ನೀಡಿದ್ದು ವಿಶೇಷ.


ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ.ಬೃಜೇಶ್ ಚೌಟ, ಇಂದು ಹಿಂದೂ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪುಣ್ಯತಿಥಿ. ಶಿವಾಜಿ ಮಹಾರಾಜರ ಪ್ರೇರಣೆಯಂತೆ ಹಿಂದುತ್ವದ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರವನ್ನು ಪ್ರತಿನಿಧಿಸಲು ಮಾಜಿ ಸೈನಿಕನಿಗೆ ಅವಕಾಶ ನೀಡಿದ್ದಾರೆ. ನಾರೀಶಕ್ತಿ, ಮಾತೃಶಕ್ತಿಯನ್ನು ಗೌರವಿಸುವ ಬಿಜೆಪಿಗೆ ಇಂದು ಮಾತೆಯರು ಆಶೀರ್ವಾದ ಮಾಡುವ ಮೂಲಕ ನಾರೀ ಶಕ್ತಿಯನ್ನು ಪ್ರಶ್ನಿಸಿದವರಿಗೆ ಸೂಕ್ತ ಉತ್ತರ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ.
ಇದೇ ವೇಳೆ ಮಾತನಾಡಿದ ಸಮಾಜ ಸೇವಕಿ ರಜನಿ ಶೆಟ್ಟಿ, ಯೋಧನಾಗಿ ದೇಶ ಸೇವೆ ಮಾಡಿದ್ದ ಬೃಜೇಶ್ ಚೌಟರನ್ನು ಭಾರತ ಮಾತೆ ತನ್ನ ಸೇವೆಗಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಈಗ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿ ಸಂಸದರನ್ನಾಗಿಸಬೇಕು. ಈ ಕಾರಣಕ್ಕೆ ನಾವು ದುಡಿದ ಹಣವನ್ನು ದೇಣಿಗೆಯಾಗಿ ನೀಡಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ಪಕ್ಷದ ಚುನಾವಣಾ ಪ್ರಭಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಪೂಜಾ ಪೈ, ಪಕ್ಷದ ಕೋಶಾಧಿಕಾರಿ ಸಂಜಯ ಪ್ರಭು, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಹಿರಿಯ ನಾಯಕರಾದ ಜಗದೀಶ ಶೇಣವ ಉಪಸ್ಥಿತರಿದ್ದರು.


ಚೌಟ ದಕ್ಕೆಗೆ ಹೋದ ವಿಡಿಯೋ ವೈರಲ್
ಎರಡು ದಿನಗಳ ಹಿಂದೆ ಮಂಗಳೂರಿನ ಮೀನುಗಾರಿಕಾ ದಕ್ಕೆಗೆ ತೆರಳಿದ್ದ ಬೃಜೇಶ್ ಚೌಟ ಅವರು ಮೀನುಗಾರ ಮಹಿಳೆಯರು, ಅಲ್ಲಿನ ಕಾರ್ಮಿಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮೀನುಗಾರಿಕೆಯಲ್ಲಿ ತೊಡಗಿದ್ದ ಇತರ ಕಾರ್ಮಿಕರನ್ನೂ ಕಂಡು ಮಾತನಾಡಿಸಿದ್ದರು. ಹಲವರು ಚೌಟರ ಜೊತೆಗೆ ನಿಂತು ಸೆಲ್ಫಿ ಫೋಟೊ ಕ್ಲಿಕ್ಕಿಸಿದ್ದರೆ, ಕೆಲವು ಹಿರಿಯ ಮಹಿಳೆಯರು ಆತ್ಮೀಯವಾಗಿ ಅಪ್ಪಿಕೊಂಡು ಹರಸಿದ್ದರು. ಇದರ ವಿಡಿಯೋ ಭಾರೀ ವೈರಲ್ ಆಗಿತ್ತು.
Fishermen women take arati at Brijesh Chowta at BJP office in Mangalore ae he will be filing his nomination on april 4th.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm