ಬ್ರೇಕಿಂಗ್ ನ್ಯೂಸ್
04-04-24 09:53 pm Mangalore Correspondent ಕರಾವಳಿ
ಮಂಗಳೂರು, ಎ.4: ಸಮಾಜದ ಮುಖ್ಯವಾಹಿನಿಯಲ್ಲಿ ಕೆಲಸ ಮಾಡುವ ವಕೀಲರು, ತಾವು ಅರಿತಿರುವ ವಿಚಾರವನ್ನು ಸಮಾಜಕ್ಕೆ ತಿಳಿಸುವ ಕೆಲಸ ಆಗಬೇಕಿದೆ. ಅಭಿವೃದ್ಧಿ ಪರ ಕೆಲಸ ಮಾಡುವವರಿಗೆ ಬೆಂಬಲ ನೀಡಬೇಕಾದ ಅಗತ್ಯವಿದೆ ಎಂದು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.
ಬುಧವಾರ ಸಂಜೆ ಓಷಿಯನ್ ಪರ್ಲ್'ನಲ್ಲಿ ನಡೆದ ವಕೀಲರ ಜೊತೆಗಿನ ಸಂವಾದದಲ್ಲಿ ಅವರು ಮಾತನಾಡಿದರು. ದೇಶಾದ್ಯಂತ ಏನಾಗುತ್ತಿದೆ ಎಂಬ ವಿಚಾರ ನಿಮಗೆ ತಿಳಿದಿದೆ. ಇದನ್ನೆಲ್ಲಾ ನೋಡಿಕೊಂಡು ಸುಮ್ಮನೆ ಕೂರಬಾರದು. ಹಾಗೆಂದು ಮಾತನಾಡಿದರೆ, ದೇಶದ್ರೋಹಿಗಳು ಎಂಬಂತೆ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮಂತಹವರ ಪ್ರಯತ್ನ ತುಂಬಾ ಅಗತ್ಯ. ಹಾಗೆಂದು ಅಪಪ್ರಚಾರದ ಅವಶ್ಯಕತೆ ನಮಗಿಲ್ಲ. ಇದ್ದ ವಿಚಾರವನ್ನು ಜನರ ಮುಂದಿಡುವ ಕೆಲಸವನ್ನು ಮಾಡಬೇಕು ಎಂದರು.
ಈ ಬಾರಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ತನ್ನನ್ನು ಘೋಷಿಸಿದೆ. ಇದು ವಕೀಲ ಸಮುದಾಯಕ್ಕೆ ಸಿಕ್ಕ ಅವಕಾಶ. ನಿಮ್ಮ ಬೇಡಿಕೆಗಳನ್ನು ಆದ್ಯತೆ ಮೇಲೆ ಈಡೇರಿಸಲಾಗುವುದು. ಅದರಲ್ಲೂ ಮಂಗಳೂರಿಗೆ ಹೈಕೋರ್ಟ್ ಪೀಠ ಬೇಕೆಂಬ ಬೇಡಿಕೆ ಇದ್ದು, ಇದರ ಬಗ್ಗೆ ತಾನು ಉತ್ಸಾಹಿತನಾಗಿದ್ದೇನೆ ಎಂದರು.

ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಭಾರತದಲ್ಲಿ ಏನಾಗುತ್ತಿದೆ ಎಂಬ ಪ್ರಶ್ನೆ ವಿಶ್ವಾದ್ಯಂತ ಇದೆ. ಇದನ್ನು ಪ್ರಶ್ನಿಸುವ ಮನೋಭಾವ ನಮ್ಮಲ್ಲಿ ಬೆಳೆಯಬೇಕಿದೆ. ಆದ್ದರಿಂದ ಜನರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದರು.
ವರ್ತಮಾನದ ಅರಿವು ವಕೀಲರಿಗಿದೆ
ಜಿಲ್ಲಾ ಚುನಾವಣಾ ಉಸ್ತುವಾರಿ ಬಿ. ರಮಾನಾಥ ರೈ ಮಾತನಾಡಿ, ವಕೀಲ ಸಮುದಾಯ ವರ್ತಮಾನದ ಆಗು ಹೋಗುಗಳ ಬಗ್ಗೆ ಅರಿವು ಹೊಂದಿರುವವರು. ಇಂದು ಮಾತನಾಡಲು ಭಯ ಆಗುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಅರಿವು ಇದ್ದವರು ಮಾತನಾಡಬೇಕು ಎಂದರು.
ಎ.ಐ.ಎಲ್.ಯು. ವಕೀಲರ ಸಂಘದ ಯಶವಂತ್ ಮರೋಳಿ ಮಾತನಾಡಿ, ನಾವು ವಿಷಮ ಪರಿಸ್ಥಿತಿಯಲ್ಲಿದ್ದೇವೆ. ಸಂವಿಧಾನದ ಮೇಲೆ ಪ್ರಹಾರ ಆಗ್ತಾ ಇದೆ. ಇದೇ ಕಾರಣಕ್ಕೆ ವಕೀಲರ ವೇಗ ಕಡಿಮೆ ಆಗ್ತಾ ಇದೆ ಎಂದರು. ವಕೀಲ ಹನೀಫ್ ಮಾತನಾಡಿ, ಕಾಂಗ್ರೆಸಿನ ಮತ ನೋಟಾಗೆ ಹೋಗದಂತೆ ಎಚ್ಚರ ವಹಿಸಬೇಕು ಎಂದರು.
ಪದ್ಮರಾಜ್ ಅವರಿಗೆ ವಕೀಲರ ಬೆಂಬಲ
ಬಾರ್ ಅಸೋಸಿಯೇಷನ್ನಿನ ಮಾಜಿ ಕಾರ್ಯದರ್ಶಿ ದಿನಕರ ಶೆಟ್ಟಿ ಮಾತನಾಡಿ, ವಕೀಲರೆಲ್ಲರ ಬೆಂಬಲ ಪದ್ಮರಾಜ್ ಅವರಿಗೆ ಇದೆ. ಸಂವಿಧಾನವನ್ನು ರಕ್ಷಿಸುವ ನಿಟ್ಟಿನಲ್ಲಿ ವಕೀಲರಿಗೂ ಚುನಾವಣೆಯ ಕೆಲ ಜವಾಬ್ದಾರಿ ನೀಡಬೇಕು ಎಂದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮೂಸಾ ಕುಂಞ ಉಪಸ್ಥಿತರಿದ್ದರು.
Congress mp candidate Padmaraj speaks in conversation with lawyers in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm