ಬ್ರೇಕಿಂಗ್ ನ್ಯೂಸ್
05-04-24 01:53 pm Mangalore Correspondent ಕರಾವಳಿ
ಮಂಗಳೂರು, ಏ.5 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಕು. ಆಕಾಂಕ್ಷಾ ರಂಜನ್ ಅವರನ್ನು ನೇಮಿಸಿದ್ದು ಅವರು ಜಿಲ್ಲೆಗೆ ಆಗಮಿಸಿದ್ದಾರೆ.
ಚುನಾವಣಾ ಸಾಮಾನ್ಯ ವೀಕ್ಷಕರು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆ ಮೇಲೆ ನಿಗಾ ಇಡಲಿದ್ದು, ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ದೂರು ಅಥವಾ ಅಹವಾಲು ಇದ್ದಲ್ಲಿ ಸಾರ್ವಜನಿಕರು ಸಾಮಾನ್ಯ ವೀಕ್ಷಕರಿಗೆ ಸಲ್ಲಿಸಬಹುದಾಗಿದೆ.

ಅವರ ಸಂಪರ್ಕ ವಿವರ ಇಂತಿದೆ: ಅವರ ಮೊಬೈಲ್ ಸಂಖ್ಯೆ- 9482698817. ಸ್ಥಿರ ದೂರವಾಣಿ- 0824-2001594. ಇಮೇಲ್ ವಿಳಾಸ: generalobserverdk17@gmail.com ಆಗಿದ್ದು ಚುನಾವಣಾ ಸಾಮಾನ್ಯ ವೀಕ್ಷಕರು ಕೇಂದ್ರ ಸ್ಥಾನದಲ್ಲಿ ಇರುವ ಸಂದರ್ಭದಲ್ಲಿ ಬೆಳಿಗ್ಗೆ 10 ರಿಂದ 11 ಗಂಟೆಯ ವರೆಗೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮಾನ್ಯ ವೀಕ್ಷಕರಾದ ಕು. ಆಕಾಂಕ್ಷಾ ರಂಜನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ ಹಾಗೂ ಸಾಮಾಜಿಕ ಜಾಲತಾಣ ನಿರ್ವಹಣಾ ಸಮಿತಿ ಕಚೇರಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿ, ಕೆಲವು ಸಲಹೆ ಸೂಚನೆಗಳನ್ನು ನೀಡಿದರು.
ಪೊಲೀಸ್ ವೀಕ್ಷಕರಾಗಿ ಬಿನಿತಾ ಠಾಕೂರ್
ಇದೇ ವೇಳೆ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಪೊಲೀಸ್ ವೀಕ್ಷಕರಾಗಿ ಶ್ರೀಮತಿ ಬಿನಿತಾ ಠಾಕೂರ್ ಅವರನ್ನು ಕೇಂದ್ರ ಚುನಾವಣಾ ಆಯೋಗ ನಿಯೋಜಿಸಿದೆ. ಅವರನ್ನು ಸಾರ್ವಜನಿಕರು ಮೊಬೈಲ್ ಸಂಖ್ಯೆ: 9483651817, ಸ್ಥಿರ ದೂರವಾಣಿ ಸಂಖ್ಯೆ 0824- 2001597.
ಇ-ಮೇಲ್: policeobserverdk17@gmail.com ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Dakshina Kannada Akanksha Ranjan appointed as Election Observer, Binita Thakur as Police Observer in Mangalore
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm