ಬ್ರೇಕಿಂಗ್ ನ್ಯೂಸ್
06-04-24 12:29 pm Mangalore Correspondent ಕರಾವಳಿ
ಉಳ್ಳಾಲ, ಎ.6: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ಅವರು ಉಳ್ಳಾಲದಲ್ಲಿ ಮತಯಾಚನೆ ನಡೆಸಿದರು. ಈ ವೇಳೆ ಹಿರಿಯರು, ಮಾಜಿ ಶಾಸಕರಾದ ಶಕುಂತಳಾ ಶೆಟ್ಟಿಯವರು ಪದ್ಮರಾಜ್ ಅವರನ್ನ ಆಶೀರ್ವದಿಸಿ ಸಲಹೆ ನೀಡಿದರು.
ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಪ್ರತಿನಿಧಿಸುವ ಮಂಗಳೂರು (ಉಳ್ಳಾಲ) ಕ್ಷೇತ್ರದ ಕಲ್ಲಾಪು ಗ್ಲೋಬಲ್ ಮಾರ್ಕೆಟ್ ಗೆ ಇಂದು ಬೆಳಗ್ಗೆ ಪದ್ಮರಾಜ್ ಭೇಟಿ ನೀಡಿ ವರ್ತಕರು, ಗ್ರಾಹಕರಲ್ಲಿ ಮತಯಾಚನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾರುಕಟ್ಟೆಯ ವರ್ತಕರು ನನಗೆ ನೀಡಿದ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಮಂಗಳೂರು ಸೆಂಟ್ರಲ್ ಮಾರುಕಟ್ಟೆಯ ಸಮಸ್ಯೆಯಿಂದ ವರ್ತಕರು ಯಾವ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ ಎನ್ನುವುದನ್ನು ಅರಿತಿದ್ದೇನೆ. ಮಂಗಳೂರು ನಗರ ದೇಶದ ಬಲಿಷ್ಠ ನಗರಗಳಲ್ಲಿ ಒಂದಾಗಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಸುಸಜ್ಜಿತ ಅಂತಾರಾಷ್ಟ್ರೀಯ ಮಾದರಿಯ ಮಾರುಕಟ್ಟೆ ನಿರ್ಮಾಣಕ್ಕೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಮಂಗಳೂರಿನಲ್ಲಿ ನಲ್ವತ್ತು ವರುಷಗಳ ಕಾಲ ಕಾಂಗ್ರೆಸ್ ಸಂಸದರಿದ್ದರು. ನಂತರ ಬಿಜೆಪಿಯವರು ಸುಳ್ಳು ಹೇಳಿ ಜಯ ಗಳಿಸಿದರೆ ಹೊರತು ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿಲ್ಲ. ಈಗಾಗಲೇ ನಾನು ಬಹುತೇಕ ಮತದಾರರನ್ನ ತಲುಪಿದ್ದೇನೆ. ಮುಂದಿನ ಹದಿನೈದು ದಿವಸಗಳಲ್ಲಿ ಎಲ್ಲ ಮತದಾರರನ್ನು ಮುಟ್ಟುವ ಪ್ರಯತ್ನ ನಡೆಸುತ್ತೇನೆ. ಮತದಾರ ಪ್ರಭುಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ನಮಗೆ ಸ್ಟಾರ್‌ಗಳೇ ಹೊರತು ಮಂಗಳೂರಿಗೆ ಸ್ಟಾರ್ ಪ್ರಚಾರಕರ ಅಗತ್ಯ ಇಲ್ಲ ಎಂದರು.
ಮಾಜಿ ಶಾಸಕಿ ಆಶೀರ್ವಾದ
ಪದ್ಮರಾಜ್ ಅವರು ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಕುತ್ತಾರಿನ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಶಕುಂತಳಾ ಶೆಟ್ಟಿಯವರು ಮೂವತ್ತು ವರ್ಷದ ಬಳಿಕ ಮಂಗಳೂರಿನಲ್ಲಿ ಮತ್ತೊಮ್ಮೆ ಕಾಂಗ್ರೆಸ್‌ನ ಗತ ವೈಭವವನ್ನು ಕಾಣುವಂತೆ ಮಾಡಬೇಕು. ಮಾಜಿ ಸಚಿವರಾದ ಜನಾರ್ಧನ ಪೂಜಾರಿಯವರಂತೆ ಆರ್ಥಿಕವಾಗಿ ಹಿಂದುಳಿದವರ ಸೇವೆ ಮಾಡಬೇಕು ಎಂದು ಹಾರೈಸಿದರು.
ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳ, ಕುತ್ತಾರು ಆದಿಸ್ಥಳ ಶ್ರೀ ರಕ್ತೇಶ್ವರಿ, ಬೆರ್ಮೆರ್, ಏಳ್ವೆರ್ ಸಿರಿಗಳು, ಕೊರಗಜ್ಜ ಕ್ಷೇತ್ರ, ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಕೊಲ್ಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿದ ಪದ್ಮರಾಜ್ ಗೆಲುವಿಗಾಗಿ ಪ್ರಾರ್ಥಿಸಿದರು. ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರು, ಸೋಮೇಶ್ವರ ಪುರಸಭೆ ಸದಸ್ಯ ದೀಪಕ್ ಪಿಲಾರ್, ತಾ.ಪಂ ನಿಕಟಪೂರ್ವ ಅಧ್ಯಕ್ಷ ಮಹಮ್ಮದ್ ಮೋನು, ಉಳ್ಳಾಲ ನಗರಸಭಾ ಮಾಜಿ ಸದಸ್ಯ ಉಸ್ಮಾನ್ ಕಲ್ಲಾಪು, ಗ್ಲೋಬಲ್ ಮಾರುಕಟ್ಟೆಯ ಪ್ರಮುಖರಾದ ಎ.ಜೆ.ಶೇಖರ್, ಹಾಶೀರ್, ವಿಲ್ಮಾ ಡಿಸೋಜ, ಪ್ರಭಾವತಿ ಶೆಟ್ಟಿ, ನಂದಿನಿ, ಮುನ್ನೂರು ಪಂಚಾಯತ್ ಮಾಜಿ ಅಧ್ಯಕ್ಷ ವಿಲ್ಪ್ರೆಡ್ ಡಿ ಸೋಜ, ಸದಸ್ಯರಾದ ನವೀನ್ ಡಿಸೋಜ ಮೊದಲಾದವರಿದ್ದರು.
Mangalore Congress candidate Padmaraj campaigns at ullal, visit temple.
25-11-24 05:51 pm
Bangalore Correspondent
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
Bjp, D K Shivakumar : ಚನ್ನಪಟ್ಟಣ ಗೆಲ್ಲಲು ಬಿಜೆಪ...
24-11-24 08:39 pm
CM Siddaramaiah, BJP, Congress ಆರ್. ಅಶೋಕ್ ಕಾ...
23-11-24 07:43 pm
B Y Vijayendra, DK Shivkumar: ವಿಜಯೇಂದ್ರಗೆ ತೀವ...
23-11-24 02:15 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
25-11-24 11:14 pm
Mangalore Correspondent
Vithoba Rukumai temple case, Mangalore: ವಿಠೋಬ...
25-11-24 10:39 pm
Ullal Dargah, Mangalore: ಎಪ್ರಿಲ್ 24 ರಿಂದ ಮೇ...
25-11-24 02:44 pm
Kukke Subrahmanya Temple, Mangalore: ನ.27ರಿಂದ...
24-11-24 09:13 pm
Hariprasad, Mangalore, Congress: ಮಹಾರಾಷ್ಟ್ರದಲ...
24-11-24 05:16 pm
25-11-24 06:17 pm
HK News Desk
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm