ಬ್ರೇಕಿಂಗ್ ನ್ಯೂಸ್
06-04-24 04:14 pm Mangalore Correspondent ಕರಾವಳಿ
ಮಂಗಳೂರು, ಎ.6: ಬಜರಂಗದಳ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು ಅವರನ್ನು ಚುನಾವಣೆ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದ ಆಗಬಾರದೆಂದು ಮೈಸೂರಿಗೆ ಗಡಿಪಾರು ಮಾಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರ ವರೆಗೆ ದ.ಕ. ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಉಪ ವಿಭಾಗದ ದಂಡಾಧಿಕಾರಿ ಹರ್ಷವರ್ಧನ ಎಸ್.ಜೆ. ಆದೇಶ ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಭರತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರು ಆದೇಶವನ್ನು ರದ್ದುಪಡಿಸಿದೆ.
ಬಂಟ್ವಾಳ ತಾಲೂಕು ಪುದು ಗ್ರಾಮದ ನಿವಾಸಿ ಭರತ್ ಕುಮ್ಡೇಲು ಬಜರಂಗದಳ ಜಿಲ್ಲಾ ಸಂಯೋಜಕ ಜವಾಬ್ದಾರಿಯಲ್ಲಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಹೊಂದಿದ್ದು ವೆಹಿಕಲ್ ಸೀಝರ್ ಇನ್ನಿತರ ಕೆಲಸ ಮಾಡಿಕೊಂಡಿದ್ದಾರೆ. ಬಜರಂಗದಳ ಕಾರ್ಯಕರ್ತನಾಗಿದ್ದು ತನ್ನ ಸಹಚರರೊಂದಿಗೆ ಸೇರಿ ಫರಂಗಿಪೇಟೆ, ಕಡೆಗೋಳಿ, ಬಿಸಿರೋಡ್ ಹಾಗೂ ಬಂಟ್ವಾಳ ಪರಿಸರದಲ್ಲಿ ಕೊಲೆ, ಕೊಲೆಯತ್ನ, ದೊಂಬಿ, ಹಲ್ಲೆ, ಗಲಭೆ ಇತ್ಯಾದಿಗಳನ್ನು ನಡೆಸಿ ಸಾರ್ವಜನಿಕ ಶಾಂತಿಭಂಗ ಕೃತ್ಯಗಳಲ್ಲಿ ತೊಡಗಿದ್ದು ಸಾಮಾಜಿಕ ಸಾಮರಸ್ಯಕ್ಕೆ ತೊಡಕು ಉಂಟುಮಾಡುವ ಪ್ರವೃತ್ತಿಯವರು ಎಂದು ಪೊಲೀಸರು ವರದಿ ನೀಡಿದ್ದರು.
ಇದರಂತೆ, ಪೊಲೀಸ್ ಕಾಯ್ದೆ ಕಲಂ 55(ಬಿ)ಯಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡುವಂತೆ ಬಂಟ್ವಾಳ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಮಂಗಳೂರು ಉಪವಿಭಾಗದ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಅದರಂತೆ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ)ಮತ್ತು 55(ಬಿ) ಅಡಿಯಲ್ಲಿ ಭರತ್ ಕುಮ್ಡೇಲು ಅವರನ್ನು ಮಾ.28ರಿಂದ ಜೂ.30ರ ವರೆಗೆ ದ.ಕ. ಜಿಲ್ಲೆಯಿಂದ ಮೈಸೂರಿಗೆ ಗಡಿಪಾರು ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ಉಪವಿಭಾಗದ ದಂಡಾಧಿಕಾರಿ ಹರ್ಷವರ್ಧನ ಎಸ್.ಜೆ. ಆದೇಶ ಮಾಡಿದ್ದರು. ಭರತ್ ಕುಮ್ಡೇಲು ಪರವಾಗಿ ಹೈಕೋರ್ಟಿನಲ್ಲಿ ಅರುಣ್‌ಶ್ಯಾಮ್ ಹಾಗೂ ಸುಯೋಗ್ ಹೇರಳೆ ವಕಾಲತ್ತು ವಹಿಸಿದ್ದರು.
Mangalore Bharath Kumdel from Bajrang Dal exile notice, court brings stay.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm