ಬ್ರೇಕಿಂಗ್ ನ್ಯೂಸ್
11-04-24 12:36 pm Mangaluru Correspondent ಕರಾವಳಿ
ಮಂಗಳೂರು, ಎ.11: ಅಡ್ಯಾರ್ ಎಳನೀರಿನ ಐಸ್ ಕ್ರೀಂ ಫ್ಯಾಕ್ಟರಿ ಒಂದರಲ್ಲಿ ಎಳನೀರು ಕುಡಿದು 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ ಎಂಬ ಆರೋಪದ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಎಳನೀರು ಸ್ಯಾಂಪಲನ್ನು ವಶಕ್ಕೆ ಪಡೆದು ಪರಿಶೀಲನೆಗೆ ಲ್ಯಾಬ್ ಗೆ ಕಳಿಸಿದ್ದಾರೆ.
ಎರಡು ದಿನಗಳ ಹಿಂದೆ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಖರೀದಿಸಿ ಕುಡಿದಿದ್ದ ಅಡ್ಯಾರ್, ಕಣ್ಣೂರು ಆಸುಪಾಸಿನ ನಿವಾಸಿಗಳಿಗೆ ಆರೋಗ್ಯ ತೊಂದರೆ ಕಾಣಿಸಿಕೊಂಡಿತ್ತು ಎನ್ನಲಾಗಿದೆ. 12 ಮಂದಿ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದು ಮೂವರು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫ್ಯಾಕ್ಟರಿಯಲ್ಲಿ ನೀಡುತ್ತಿರುವ ಎಳನೀರು ಕುಡಿದು ತೊಂದರೆಯಾಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ.
ಅಸ್ವಸ್ಥರಾದವರು ವಾಂತಿ ಭೇದಿಯಿಂದ ಬಳಲಿದ್ದು ಕಾಲರಾ ರೋಗ ಆಗಿರಬೇಕೆಂದು ಭೀತಿಗೆ ಒಳಗಾಗಿದ್ದರು. ಚಿಕಿತ್ಸೆ ಬಳಿಕ ಕಾಲರಾ ಅಲ್ಲವೆಂದು ವೈದ್ಯರು ದೃಢಪಡಿಸಿದ್ದಾರೆ. ಫ್ಯಾಕ್ಟರಿಯಲ್ಲಿ 40 ರೂ.ಗೆ ಒಂದು ಲೀಟರ್ ಎಳನೀರು ಸಿಗುತ್ತಿದ್ದು ಅದನ್ನು ಸಾರ್ವಜನಿಕರು ಬೇಸಗೆಯ ಬಿಸಿಲಿನಲ್ಲಿ ಮುಗಿಬಿದ್ದು ಖರೀದಿಸುತ್ತಾರೆ. ಆರೋಗ್ಯ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು ತಾತ್ಕಾಲಿಕ ಸ್ಥಗಿತಕ್ಕೆ ಸೂಚನೆ ನೀಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಡಿಎಚ್‌ಒ ‘ಆರೋಗ್ಯ ಇಲಾಖೆ ತಂಡದಿಂದ ಎಳನೀರು ಪ್ಯಾಕ್ಟರಿಗೆ ಭೇಟಿ ನೀಡಿದ್ದೇವೆ. ಸುಮಾರು 15 ಲೀಟರ್ ಎಳನೀರನ್ನು ಪರೀಕ್ಷಾರ್ಥ ಸಂಗ್ರಹಿಸಿದ್ದು ಪ್ರಯೋಗಾಲಯಕ್ಕೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ, ಮಂಗಳೂರು ಸುತ್ತಮುತ್ತ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದೆ. ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ತಿಳಿಸಿದ್ದಾರೆ.
ತುಂಬೆ ಮತ್ತು ಅಡ್ಯಾರ್ ಪ್ರದೇಶದ ನಿವಾಸಿಗಳಲ್ಲಿ ವಾಂತಿ ಭೇದಿ ಕಂಡುಬಂದಿರುವ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಳನೀರು ಫ್ಯಾಕ್ಟರಿಯ ಐಸ್ ಕ್ರೀಮ್ ಮತ್ತು ಎಳನೀರು ಕುಡಿದ ಬಳಿಕ ಜನರಲ್ಲಿ ವಾಂತಿ ಭೇದಿ ಕಂಡು ಬಂದಿರುವುದಾಗಿ ತಿಳಿದುಬಂದಿದೆ. ಎಳನೀರು ಸೇವಿಸಿದ ಬಳಿಕ ಆರೋಗ್ಯದಲ್ಲಿ ಏರುಪೇರಾಗಿರುವ ಕುರಿತು ನಿವಾಸಿಗಳ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಆಹಾರ ಸುರಕ್ಷತಾ ಅಧಿಕಾರಿಯವರು ಫ್ಯಾಕ್ಟರಿಗೆ ಭೇಟಿ ನೀಡಿ ಎಳನೀರು ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿರುತ್ತಾರೆ. ಇಡೀ ಫ್ಯಾಕ್ಟರಿಯನ್ನ ಬಂದ್ ಮಾಡಿ ಶುಚಿಗೊಳಿಸಲಾಗಿದೆ. ಸಾರ್ವಜನಿಕರ ಆರೋಗ್ಯ ಕಾಳಜಿ ಬಗ್ಗೆ ನಿಗಾ ಇಡುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸಾರ್ವಜನಿಕರು ಕಾಲರಾ ಎಂಬ ವದಂತಿಗೆ ಕಿವಿಗೊಡಬಾರದೆಂದು ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
On Monday, April 8, residents of Adyar Kannur and Thumbe areas purchased tender coconut water by the liter from the Bonda Factory of Lands Flavor in Adyar. However, on April 9, they experienced vomiting and diarrhea from morning till evening. Adyar Bonda factory contaminated tender coconut, three admitted to the hospital, 15 fall sick in Mangalore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am