ಬ್ರೇಕಿಂಗ್ ನ್ಯೂಸ್
11-04-24 10:06 pm Mangaluru Correspondent ಕರಾವಳಿ
ಮಂಗಳೂರು, ಎ.11: ಅಡ್ಯಾರಿನ ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ಅಸ್ವಸ್ಥರಾದ ಪ್ರಕರಣ ಸಂಬಂಧಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ಮಾಡಿದ್ದಾರೆ. ಅಲ್ಲದೆ, ಮುಂದಿನ ಆದೇಶದ ವರೆಗೆ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟಿಸ್ ನೀಡಿದ್ದಾರೆ.
ಇಲಾಖೆ ಅಧಿಕಾರಿಗಳು ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ಮುಂದಿನ ಆದೇಶದ ವರೆಗೆ ತಾತ್ಕಾಲಿಕವಾಗಿ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟೀಸ್ ನೀಡಿದರು. ಆನಂತರ ತುಂಬೆಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರಸ್ತೆಯ ಪರ್ಲಿಯಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಬಂಟವಾಳ, ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆ, ಮಂಗಳೂರು ನಗರದ ಹೈಲ್ಯಾಂಡ್ , ಯುನಿಟಿ, ಕಣಚೂರು, ಯೆನೆಪೋಯ, ಇಂಡಿಯಾನ, ಕೊಲಾಸೊ ಹಾಗೂ ಇತರೆ ವಿವಿಧ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತಂಡಗಳಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದುವರೆಗೆ 137 ಮಂದಿ ಎಳನೀರು ಕುಡಿದಿರುವುದರಿಂದ ಅಸ್ವಸ್ಥರಾಗಿದ್ದು ಕಂಡುಬಂದಿದೆ. ಹೊರ ರೋಗಿಗಳಾಗಿ 84, ಒಳರೋಗಿಗಳಾಗಿ 53 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿರುತ್ತಾರೆ. ಆಸ್ಪತ್ರೆಯಲ್ಲಿರುವ ಎಲ್ಲರ ಆರೋಗ್ಯವು ಸ್ಥಿರವಾಗಿದ್ದು ಚೇತರಿಕೆ ಹೊಂದಿದ್ದಾರೆ. ಆರೋಗ್ಯ ಇಲಾಖೆಯಿಂದ ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
Bonda Factory Mangalore to be temporarily closed after 137 people fell sick drinking tender coconut. People of Adyar Valachil area were taken ill after they reportedly consumed tender coconut water sold by a Bonda factory at Adyar. On Wednesday following a complaint to the District Health Officer and District Food Safety Officer, officials visited the Bonda Factory and initiated measures to shut it down temporarily and to undertake cleaning operation.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
11-08-25 08:55 pm
HK News Desk
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm