ಯಡಿಯೂರಪ್ಪ ಆಪ್ತ ರವೀಂದ್ರ ಶೆಟ್ಟಿಗೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ 

30-11-20 10:06 pm       Mangaluru Correspondent   ಕರಾವಳಿ

ಕರ್ನಾಟಕ ರಾಜ್ಯದ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರನ್ನು ನೇಮಕ ಮಾಡಲಾಗಿದೆ. 

ಮಂಗಳೂರು, ನ. 30: ಕರ್ನಾಟಕ ರಾಜ್ಯದ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರನ್ನು ನೇಮಕ ಮಾಡಲಾಗಿದೆ. 

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೊತೆಗೆ ನಿಕಟ ಸಂಪರ್ಕ ಹೊಂದಿರುವ ಕಳ್ಳೆಕಾರು ಗುತ್ತು ರವೀಂದ್ರ ಶೆಟ್ಟಿ ಉಳಿದೊಟ್ಟು ಅವರನ್ನು ಸಿಎಂ ಯಡಿಯೂರಪ್ಪ ಅವರೇ ನಿಗಮ ಅಧ್ಯಕ್ಷ ಸ್ಥಾನಕ್ಕೆ ಏರಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿದ್ದ ರವೀಂದ್ರ ಶೆಟ್ಟರು ಶಿಕ್ಷಣ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾಗಿರುವ ಅವರು ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೆ ರಿಯಾಯಿತಿ ಶುಲ್ಕದಲ್ಲಿ ಶಿಕ್ಷಣ ನೀಡುವುದರ ಜೊತೆಗೆ ಅಶಕ್ತರಿಗೆ ಉಚಿತ ಶಿಕ್ಷಣವನ್ನೂ ನೀಡುತ್ತಿದ್ದಾರೆ.

Ravindra Shetty selected as Alemari Are Alemari Development corporation president from Mangalore.