ಬ್ರೇಕಿಂಗ್ ನ್ಯೂಸ್
19-04-24 09:55 pm Mangalore Correspondent ಕರಾವಳಿ
ಮಂಗಳೂರು, ಎ.19: ರಸ್ತೆ ದಾಟುತ್ತಿದ್ದ ಯುವಕನೊಬ್ಬ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದು ಆತನ ಮೇಲೆ ಟ್ಯಾಂಕರ್ ಲಾರಿ ಹರಿದ ಘಟನೆ ನಗರದ ಕೊಟ್ಟಾರ ಚೌಕಿ ಬಳಿ ನಡೆದಿದ್ದು ಸ್ಥಳದಲ್ಲೇ ಯುವಕ ದಾರುಣ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಬಳಿಯ ಕೋಡಿಕಲ್ ಕ್ರಾಸ್ ನಲ್ಲಿ ಘಟನೆ ನಡೆದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಬ್ಲಾಕ್ ಆಗಿ ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದವು. ಯುವಕ ಸ್ಥಳದಲ್ಲೇ ಸಾವು ಕಂಡಿದ್ದರಿಂದ ಆತನ ಗುರುತು ಪತ್ತೆಯಾಗಿರಲಿಲ್ಲ. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವಕನ ಕಿಸೆಯಲ್ಲಿ ಐಡಿ ಕಾರ್ಡ್ ಇದೆಯಾ ಎಂದು ಹುಡುಕಾಟ ನಡೆಸುತ್ತಿದ್ದರು. ಬಳಿಕ ಆತನ ಜೊತೆಗೆ ಕೆಲಸ ನಿರ್ವಹಿಸುತ್ತಿದ್ದವರು ಬಂದು ಗುರುತು ಹೇಳಿದ್ದಾರೆ.
ಕೋಡಿಕಲ್ ಕ್ರಾಸ್ ಆಗುವಲ್ಲಿ ಅತಿ ವೇಗದಿಂದ ಈ ಕಡೆಯಿಂದ ವಾಹನಗಳು ಸಾಗುವುದರಿಂದ ನಿರಂತರ ಅಪಘಾತಕ್ಕೆ ಕಾರಣವಾಗುತ್ತಿದೆ. ಅಸಮರ್ಪಕ ಹೆದ್ದಾರಿ ನಿರ್ಮಾಣವೂ ಇದಕ್ಕೆ ಕಾರಣ. ಯುವಕನಿಗೆ ಬೈಕ್ ತಾಗಿದ್ದರಿಂದ ಸವಾರನೂ ನೆಲಕ್ಕೆ ಬಿದ್ದು ಗಾಯಗೊಂಡಿದ್ದ. ಆದರೆ ಪಾದಚಾರಿ ಯುವಕನ ಮೇಲೆ ಹರಿದ ಟ್ಯಾಂಕರ್ ಲಾರಿ ಆತನ ಪ್ರಾಣ ಕಸಿದು ಬಿಟ್ಟಿದೆ. ಬೆಳಗ್ಗೆ ಆಗಿದ್ದರಿಂದ ಸ್ಥಳದಲ್ಲಿ ಪೊಲೀಸರೂ ಇಲ್ಲದೆ ಟ್ರಾಫಿಕ್ ಸರಿಪಡಿಸುವುದಕ್ಕೂ ಯಾರೂ ಇರಲಿಲ್ಲ. ಸ್ಥಳೀಯರೇ ಸೇರಿಕೊಂಡು ಟ್ರಾಫಿಕ್ ಸರಿಪಡಿಸಲು ಮುಂದಾಗಿದ್ದರು.
Mangalore accident worker from UP run over by tanker in Kulur. The deceased is identified as Guddu Yadav, 29, from Uttar Pradesh.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm