ಬ್ರೇಕಿಂಗ್ ನ್ಯೂಸ್
20-04-24 12:12 pm Mangalore Correspondent ಕರಾವಳಿ
ಮಂಗಳೂರು, ಎ.20: ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಕಡೆ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಂಗಳೂರು ನಗರ ಭಾಗದಲ್ಲಿ ನಸುಕಿನ ನಾಲ್ಕರಿಂದ 5 ಗಂಟೆ ವೇಳೆಗೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆಯಾಗಿದೆ. ಭಾರೀ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ ಮಳೆಯಿಂದ ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.
ಸಿಡಿಲಿನ ಅಬ್ಬರಕ್ಕೆ ಮಂಗಳೂರಿನಲ್ಲಿ ವಿದ್ಯುತ್ ಕಡಿತಗೊಂಡಿತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ಮುಂದಿನ ಮೂರು ದಿನ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸುಳ್ಯ ಕಲ್ಮಡ್ಕ ಗ್ರಾಮದ ಮುಚ್ಚಿಲ ಕಜೆ ಅಬ್ಬಾಸ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು ಹಟ್ಟಿಯಲ್ಲಿದ್ದ ಕರು ಬಲಿಯಾಗಿದೆ. ಮನೆಯ ವಯರಿಂಗ್, ಸ್ವಿಚ್ ಬೋರ್ಡ್ ಗಳು ಸಂಪೂರ್ಣ ಸುಟ್ಟು ಹೋಗಿದೆ. ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ.
ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರಿನ ಬಹುತೇಕ ಭಾಗದಲ್ಲಿ ಸಿಡಿಲು ಸಹಿತ ಉತ್ತಮ ಮಳೆಯಾಗಿತ್ತು. ಬೆಳ್ತಂಗಡಿಯ ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಮಳೆಯಿಂದಾಗಿ ಕೆಸರು ರಸ್ತೆಯಲ್ಲೇ ಜನ ಪರದಾಡುವ ಸ್ಥಿತಿಯಾಗಿದೆ.
ಮಂಗಳೂರಿನಲ್ಲಿ ಹಂಪನಕಟ್ಟೆ ಬಳಿ ಭಾರಿ ಗಾತ್ರದ ಮರ ನೆಲಕ್ಕೆ ಉರುಳಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಜಖಂಗೊಂಡಿವೆ. ವಾಹನದಲ್ಲಿ ಯಾರೂ ಇಲ್ಲದೇ ಇರೋದರಿಂದ ಜನಸಾಮಾನ್ಯರಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ.
Various parts of Mangalore, Udupi receive first summer showers and heavy lightening. Residents of Dakshina Kannada and Udupi districts breathed a sigh of relief as substantial rainfall graced the region in the early hours of Saturday, April 20.
22-09-25 10:54 am
HK News Desk
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
22-09-25 10:50 am
HK News Desk
ಮಲಯಾಳಂ ಸೂಪರ್ಸ್ಟಾರ್ ಮೋಹನ್ ಲಾಲ್ ಗೆ ದಾದಾ ಸಾಹೇಬ್...
20-09-25 11:03 pm
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm