ಬ್ರೇಕಿಂಗ್ ನ್ಯೂಸ್
21-04-24 09:56 pm Mangalore Correspondent ಕರಾವಳಿ
ಉಳ್ಳಾಲ, ಎ.21: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವ ಮರಳಿ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ರಾಣಿ ಅಬ್ಬಕ್ಕ ವೃತ್ತದ ವರೆಗೆ ನಡೆದ ಬೃಹತ್ ರೋಡ್ ಶೋನಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.



ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.
Congress MP Candidate Padmaraj road show in kolya, Thokottu, Ullal in Mangalore with large number of congress followers.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm