ಬ್ರೇಕಿಂಗ್ ನ್ಯೂಸ್
24-04-24 02:49 pm Mangalore Correspondent ಕರಾವಳಿ
ಉಳ್ಳಾಲ, ಎ.24: ಬಿಜೆಪಿಯವರು ಕಾಂಗ್ರೆಸ್ ಮುಕ್ತ ಭಾರತ ಮಾಡ್ತೇವೆ ಅಂತ ಹೇಳಿ ಅಧಿಕಾರಕ್ಕೆ ಬಂದರು. ಬಿಜೆಪಿಯಿಂದ ಕಾಂಗ್ರೆಸ್ ಮುಕ್ತಗೊಳಿಸಲು ಈ ಜನ್ಮದಲ್ಲೇ ಸಾಧ್ಯವಿಲ್ಲ. ಜನರ ಉಸಿರಿನಲ್ಲಿ ಕಾಂಗ್ರೆಸ್ ಇದೆ. ಕರಾವಳಿಯ ಕೃಷ್ಣ ಮತ್ತು ರಾಣಿ ಅಬ್ಬಕ್ಕನ ನಾಡಿನಲ್ಲೂ ಈ ಬಾರಿ ಬದಲಾವಣೆ ಆಗಿ ಹೊಸ ಚರಿತ್ರೆ ಸೃಷ್ಟಿಯಾಗಲಿದೆ ಎಂದು ಕಾಂಗ್ರೆಸ್ ನಾಯಕಿ ತೇಜಸ್ವಿನಿ ಗೌಡ ಹೇಳಿದರು.
ಮುಡಿಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮುಡಿಪು ಜಂಕ್ಷನ್ ನಲ್ಲಿ ಮಂಗಳವಾರ ಸಂಜೆ ನಡೆದ ಚುನಾವಣಾ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷ ಎಂದರೆ ಮರದ ಬೇರು. ಆ ಬೇರು ನಮಗೆ ಕಾಣದೇ ಇದ್ದರೂ ಇಡೀ ಮರಕ್ಕೆ ಶಕ್ತಿ ತುಂಬುವುದೇ ಆ ಬೇರು. ಈ ದೇಶದ ಅಭಿವೃದ್ಧಿಗಾಗಿ ಇಂದಿರಾಗಾಂಧಿ ಸೇರಿದಂತೆ ಅನೇಕರ ಕೊಡುಗೆ ಇದೆ. ನಮ್ಮ ಕರಾವಳಿ ಪ್ರದೇಶ ಅಭಿವೃದ್ಧಿಯಾಗಬೇಕಾದರೆ ಪದ್ಮರಾಜ್ ಅವರು ವಿಜಯಿಯಾಗಬೇಕಿದೆ. ಒಂದು ಓಟಿನಲ್ಲಿ ಏನೇನೋ ಮಾಡುವ ಶಕ್ತಿ ಇದೆ. ನಾವು ಒತ್ತುವ ಮತ ಯಂತ್ರದ ಒಂದು ಗುಂಡಿ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ಗ್ಯಾರಂಟಿ ಕೊಟ್ಟ ಮೇಲೆ ಹೆಣ್ಮಕ್ಕಳು ದಾರಿ ತಪ್ಪಿದ್ರು ಎಂದು ಕುಮಾರಸ್ವಾಮಿಯವರು ಹೇಳಿದ್ರು. ನಿಜವಾಗಿ ದಾರಿ ತಪ್ಪಿದ ಮಗ ಅವರೇ. ಅವರು ದಾರಿ ತಪ್ಪಿ ಎಷ್ಟೋ ವರ್ಷವಾಯಿತು. ದಾರಿ ತಪ್ಪದ ಮಗ ಹೇಗಿರಬೇಕು ಎಂಬುದನ್ನು ಯು.ಟಿ.ಖಾದರ್ ಅವರನ್ನು ನೋಡಿ ಕುಮಾರಸ್ವಾಮಿ ಅವರು ಕಲಿಯಬೇಕು ಎಂದರು.
ಕಾಂಗ್ರೆಸ್ ಮುಖಂಡರಾದ ದಿನೇಶ್ ಗುಂಡುರಾವ್ ಮಾತನಾಡಿ, ಕಳೆದ ಹತ್ತು ವರ್ಷಗಳ ಕಾಲ ಜನ ಬಿಜೆಪಿಗೆ ಅಧಿಕಾರ ಕೊಟ್ಟಿದ್ದರು. ಆದರೆ ಹತ್ತು ವರ್ಷಗಳಿಂದ ಬಿಜೆಪಿ ಜನರ ಅಭಿವೃದ್ಧಿಗಾಗಿ ಏನೂ ಮಾಡಿಲ್ಲ. 2047ಕ್ಕೆ ರಾಷ್ಟ್ರ ಅಭಿವೃದ್ಧಿಯಾಗಲಿದೆ ಎಂದು ಜನರನ್ನು ಮೋಸ ಮಾಡಲು ಹೊರಟಿದ್ದಾರೆ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಾತನಾಡಿ, ಬಡವರ ಪರವಾದ ಪಕ್ಷ ಎಂದರೆ ಅದು ಕಾಂಗ್ರೆಸ್ ಪಕ್ಷ ಮಾತ್ರ. ಐದು ಗ್ಯಾರಂಟಿಗಳ ಮೂಲಕ ಬಡವರಿಗೆ ಶಕ್ತಿ ತುಂಬಿ ನುಡಿದಂತೆ ನಡೆದಿದೆ. ನಮ್ಮ ಜಿಲ್ಲೆಯಲ್ಲಿ ಕೋಮು ದ್ವೇಷವನ್ನು ಹರಡಿ ಅಧಿಕಾರ ಪಡೆಯುವ ಬದಲು ಅಭಿವೃದ್ಧಿಯ ಮೂಲಕ ಅಧಿಕಾರ ಪಡೆಯೋಣ ಎಂದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಉಳ್ಳಾಲ ಕಾಂಗ್ರೆಸ್ ಚುನಾವಣಾ ಸಮಿತಿ ಕಾರ್ಯಾಧ್ಯಕ್ಷ ಇಫ್ತಿಕಾರ್ ಆಲಿ ಫರೀದ್, ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿಗಳಾದ ಜೆ.ಆರ್ ಲೋಬೊ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ನಿಗಮದ ಅಧ್ಯಕ್ಷ ಮಮತಾ ಡಿ.ಎಸ್ ಗಟ್ಟಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನಾಸಿರ್ ನಡುಪದವು, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಇರಾ ಗ್ರಾ.ಪಂ. ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ 20 ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.
BJP cannot eliminate congress in their life time slams Tejashwini Gowda at Ullal in Mangalore. In the town of Rani Abakka their will be absolute change she added.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm