ಬ್ರೇಕಿಂಗ್ ನ್ಯೂಸ್
27-04-24 06:40 pm Mangalore Correspondent ಕರಾವಳಿ
ಮಂಗಳೂರು, ಎ.27: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಟಪವಿತ್ರ ನಾಗಮಂಡಲ ಸೇವೆ ಉತ್ಸವದಲ್ಲಿ ಪಾಲ್ಗೊಂಡು ತುಳುವಿನಲ್ಲಿ ಮಾತನಾಡಿ ಭಾಷಾ ಪ್ರೀತಿಯನ್ನು ತೋರಿಸಿದ್ದಾರೆ.
ಸಂಜೆಯ ವೇಳೆಗೆ ಶಿಬರೂರಿಗೆ ಬಂದಿದ್ದು ಅವರನ್ನು ಪೂರ್ಣಕುಂಭ, ಕೊಂಬು ಕಹಳೆಯೊಂದಿಗೆ ಸ್ವಾಗತ ನೀಡಲಾಯಿತು. ಬ್ರಹ್ಮಕಲಶ ಸಲುವಾಗಿ ರಾತ್ರಿ ನಡೆದ ಸಮಾರಂಭದಲ್ಲಿ ಶಿಲ್ಪಾ ಶೆಟ್ಟಿ ತುಳುವಿನಲ್ಲಿ ಮಾತನಾಡಿದ್ದಾರೆ. ನಾನು ಕೂಡ ತುಳುವ ನಾಡಿನ ಹೆಣ್ಣು. ತುಳುವ ಹೆಣ್ಣು ಎಂಬ ಹೆಮ್ಮೆಯೂ ನನಗಿದೆ. ನಾನು ರಾಜ್ ಕುಂದ್ರಾ ಅವರನ್ನು ಮದುವೆಯಾದರೂ ನನ್ನ ಶೆಟ್ಟಿ ಸರ್ ನೇಮ್ ಬದಲು ಮಾಡಿಕೊಳ್ಳಲ್ಲ. ನನಗೆ ಶೆಟ್ಟಿ ಎನ್ನುವುದೇ ತುಳುನಾಡಿನ ಹೆಗ್ಗುರುತು. ನನ್ನ ತುಳು ಭಾಷೆಯಲ್ಲಿ ತಪ್ಪುಗಳಿದ್ದರೆ ಕ್ಷಮಿಸಿ. ಮುಂದೆಯೂ ಕೊಡಮಣಿತ್ತಾಯ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ ಎಂದರು.





ನಟಿ ಶಿಲ್ಪಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್, ಸಮಿಷಾ, ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿದ್ದರು. ಕಟೀಲು ಮೂಲದ ಶಿಲ್ಪಾ ಶೆಟ್ಟಿ ಪ್ರತಿ ವರ್ಷ ಕುಟುಂಬದ ಕಾರ್ಯಕ್ರಮಗಳಿಗೆ ಬರುತ್ತಾರೆ. ಕಳೆದ ವರ್ಷ ಎಪ್ರಿಲ್ ನಲ್ಲಿ ಪತಿ ರಾಜ್ ಕುಂದ್ರಾ ಜೊತೆಗೆ ಊರಿಗೆ ಬಂದಿದ್ದ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ಸೀರೆ ಹರಕೆಯಿತ್ತು ತೆರಳಿದ್ದರು.
ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದ್ದು ಸುದ್ದಿಯಾಗಿತ್ತು.
Actress Shilpa Shetty visits Shibaroor Kodamanithaya temple in Mangalore with family. She said i am proud to be a Tuluva girl, I have never changed the surname Shetty she added. She came along with her son Viyan and her mother Sunanda Shetty.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm