ಬ್ರೇಕಿಂಗ್ ನ್ಯೂಸ್
04-05-24 11:20 am Bangalore Correspondent ಕರಾವಳಿ
ಸುಳ್ಯ, ಮೇ.4: ಹತ್ತು ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಮನೆಯಂಗಳದಲ್ಲೇ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದರ್ (34) ಮೃತ ದುರ್ದೈವಿ. ಶುಕ್ರವಾರ ಸಂಜೆ ಸುಳ್ಯ ಮತ್ತು ಕಡಬ ತಾಲೂಕಿನ ವಿವಿಧ ಕಡೆ ಮಳೆಯಾಗಿತ್ತು. ಮಳೆ ಆರಂಭಕ್ಕೂ ಮೊದಲು ಸಿಡಿಲು, ಮಿಂಚು ಸಹಿತ ಗಾಳಿ ಬೀಸಿತ್ತು. ಮಳೆಗೆ ಅಡಿಕೆ ಒದ್ದೆಯಾಗುತ್ತದೆ ಎಂದು ಸೋಮಸುಂದರ್ ಮನೆಯಂಗಳದಲ್ಲಿ ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದರು. ಇದೇ ಇವರಿಗೆ ಸಿಡಿಲು ಬಡಿದಿದ್ದು ತೀವ್ರ ಶಾಕ್ ಆಗಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಕಡಬ ಸಮುದಾಯ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಇವರು ಸುಬ್ರಹ್ಮಣ್ಯದಲ್ಲಿ ಕಾರು ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಹತ್ತು ದಿನಗಳ ಹಿಂದೆ ಮದುವೆಯಾಗಿದ್ದು ಹೊಸ ಬಾಳಿನ ಹೊಂಗನಸಿನಲ್ಲಿದ್ದರು. ಅಷ್ಟರಲ್ಲೇ ವಿಧಿಯ ಕರಾಳ ಆಟಕ್ಕೆ ತುತ್ತಾಗಿದ್ದಾರೆ. ಮೃತರು ತಾಯಿ, ತಂಗಿ ಮತ್ತು ಪತ್ನಿಯನ್ನು ಅಗಲಿದ್ದಾರೆ.
A youth, who had entered wedlock 10 days ago, died after being struck by lightning in the courtyard of his house at Subramanya in Kadaba taluk.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm