ಬ್ರೇಕಿಂಗ್ ನ್ಯೂಸ್
04-05-24 08:45 pm Mangalore Correspondent ಕರಾವಳಿ
ಪುತ್ತೂರು, ಮೇ.4: ಎಪಿಎಂಸಿ ಸಹಾಯಕ ಕಾರ್ಯದರ್ಶಿಯೊಬ್ಬರು ತನ್ನ ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಅಲ್ಲಿಯೇ ಕೆಲಸಕ್ಕೆ ಹಾಜರಾದ ದಿನವೇ ಅಮಾನತುಗೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕರ್ನಾಟಕ ಕೃಷಿ ಮಾರಾಟ ಇಲಾಖೆ ನಿರ್ದೇಶಕ ಎಂ.ಗಂಗಾಧರ ಸ್ವಾಮಿ ಆದೇಶ ಹೊರಡಿಸಿದ್ದಾರೆ.
ರಾಮಚಂದ್ರ ಅವರು ತರಕಾರಿ ವ್ಯಾಪಾರಸ್ಥರಿಗೆ ಕಿರುಕುಳ ನೀಡುತ್ತಿದ್ದಾರೆ. ತರಕಾರಿ ವಾಹನಗಳ ಒಳಪ್ರವೇಶವನ್ನು ನಿರಾಕರಿಸುತ್ತಿದ್ದು, ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ನಿಗದಿತ ಸಮಯಕ್ಕೆ ಸರಿಯಾಗಿ ಪರವಾನಗಿ ನೀಡದೆ ಇರುವುದರಿಂದ ವ್ಯಾಪಾರದಲ್ಲಿ ನಷ್ಟ ಆಗಿದೆ ಎಂದು ಪುತ್ತೂರು ಎಪಿಎಂಸಿ ಪ್ರಾಂಗಣದ ತರಕಾರಿ ವ್ಯಾಪಾರಸ್ಥರು ಜನವರಿ 4ರಂದು ಕೃಷಿ ಮಾರಾಟ ಇಲಾಖೆ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.
ದೂರಿನ ತನಿಖೆಗಾಗಿ ಅಧಿಕಾರಿಗಳ ತಂಡ ರಚಿಸಲಾಗಿತ್ತು. ಈ ಮಧ್ಯೆ ರಾಮಚಂದ್ರ ಅವರನ್ನು ಜ.16ರಿಂದ ಎರಡು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಆದೇಶ ಮಾಡಿದ್ದರು. ಆನಂತರ, ಅವರನ್ನು ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಖಾಲಿಯಿದ್ದ ಹಿರಿಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗೆ ವರ್ಗಾಯಿಸಿ ಕೃಷಿ ಮಾರಾಟ ಇಲಾಖೆ ಆದೇಶ ಮಾಡಿತ್ತು. ಆದರೆ, ರಾಮಚಂದ್ರ ಅವರು ರಾಯಚೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗದೆ ವರ್ಗಾವಣೆ ಆದೇಶದ ವಿರುದ್ಧ ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯಕ್ಕೆ (ಕೆಎಟಿಗೆ) ದೂರು ಸಲ್ಲಿಸಿದ್ದರು. ತನ್ನ ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ಪಡೆಯುತ್ತಲೇ ಗುರುವಾರ ಬೆಳಗ್ಗೆ ಅವರು ಪುತ್ತೂರಿನಲ್ಲೇ ಎಪಿಎಂಸಿ ಸಹಾಯಕ ಕಾರ್ಯದರ್ಶಿ ಹುದ್ದೆಯ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ಕರ್ತವ್ಯಕ್ಕೆ ಹಾಜರಾದ ಕೆಲ ಹೊತ್ತಿನಲ್ಲೇ ಮಧ್ಯಾಹ್ನ 12 ಗಂಟೆ ವೇಳೆಗೆ ಕರ್ನಾಟಕ ಕೃಷಿ ಮಾರುಕಟ್ಟೆ ಇಲಾಖೆ ನಿರ್ದೇಶಕರು ಅಮಾನತು ಮಾಡಿದ್ದಾರೆ. ಕರ್ತವ್ಯ ಲೋಪದ ಆರೋಪದಲ್ಲಿ ಇಲಾಖಾ ತನಿಖೆ ನಡೆಯುತ್ತಿರುವಾಗಲೇ ಅದೇ ಜಾಗಕ್ಕೆ ಬಂದು ಕರ್ತವ್ಯಕ್ಕೆ ಹಾಜರಾಗಿದ್ದಕ್ಕೆ ಪ್ರತಿಯಾಗಿ ಸಸ್ಪೆಂಡ್ ಮಾಡಿದ್ದಾರೆ.
Vegetable vendor complaint, apmc officer suspended in puttur. The suspended officer is Ramachandra.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm