ಬ್ರೇಕಿಂಗ್ ನ್ಯೂಸ್
05-05-24 01:26 pm Mangalore Correspondent ಕರಾವಳಿ
ಉಳ್ಳಾಲ, ಮೇ.5: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದ್ದು, ವಿದ್ಯುತ್ ಕಂಬದ ಸಲಾಕೆಗಳು ಕಾರೊಳಗೆ ನುಗ್ಗಿದರೂ ಕಾರಲ್ಲಿದ್ದ ವೈದ್ಯರಿಬ್ಬರು ಪವಾಡ ಸದೃಶ ಅಪಾಯದಿಂದ ಪಾರಾಗಿರುವ ಘಟನೆ ಕುತ್ತಾರು ಸಮೀಪದ ಬಬ್ಬುಕಟ್ಟೆ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ತಡರಾತ್ರಿ ತೊಕ್ಕೊಟ್ಟಿನಿಂದ ಕುತ್ತಾರು ಕಡೆ ತೆರಳುತ್ತಿದ್ದ ಪೋಲೊ ಕಾರು ಬಬ್ಬುಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬಡಿದು ಪಲ್ಟಿಯಾಗಿದೆ. ಕಾರಲ್ಲಿದ್ದ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕೇರಳ ಮೂಲದ ವೈದ್ಯರಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವು ಹೊಂಡದಿಂದಲೇ ಹೊರ ಬಂದು ಮುರಿದು ಬಿದ್ದಿದೆ. ಕಂಬದ ಒಂದು ತುದಿಯು ಸಲಾಕೆ ಸಮೇತ ಕಾರೊಳಗೆ ಹೊಕ್ಕಿದರೂ ಚಾಲಕ ಪಾರಾಗಿದ್ದಾನೆ.


ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಕಡಿತ
ಅಪಘಾತದಿಂದ ವಿದ್ಯುತ್ ಕಂಬ ಮುರಿದಿದ್ದು ಮೆಸ್ಕಾಂ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇಂದು ಬೆಳಗ್ಗೆ ಕಾರನ್ನ ತೆರವುಗೊಳಿಸುವ ಕೆಲಸ ನಡೆದಿದ್ದು ಮೆಸ್ಕಾಂ ಸಿಬ್ಬಂದಿ ಕ್ರೇನ್ ಮೂಲಕ ವಿದ್ಯುತ್ ಕಂಬ ತೆರವುಗೊಳಿಸಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಅಪಘಾತದಿಂದ ಸ್ಥಳೀಯರು ಕರೆಂಟ್ ಇಲ್ಲದೆ ಪರದಾಡುವಂತಾಗಿದೆ. ವಿದ್ಯುತ್ ಕಂಬಕ್ಕೆ ಹಾನಿಯಾಗಿರುವುದರಿಂದ ಕಾರು ಮಾಲೀಕ ಮೆಸ್ಕಾಂಗೆ ದಂಡ ಪಾವತಿ ಮಾಡಲು ಒಪ್ಪಿಕೊಂಡಿದ್ದಾರಂತೆ. ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ.
ಬಬ್ಬುಕಟ್ಟೆ ಅಪಘಾತ ವಲಯ
ಕಾರು ನಿನ್ನೆ ತಡರಾತ್ರಿ ವೇಳೆ ಅಪಘಾತಕ್ಕೀಡಾಗಿದೆ. ಗಾಯಾಳುಗಳನ್ನು ಸ್ಥಳೀಯರೇ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಪ್ರದೇಶದಲ್ಲಿ ಹಲವು ಅಪಘಾತಗಳು ನಡೆದಿವೆ. ಇಲ್ಲಿ ಶಾಲಾ ಕಾಲೇಜುಗಳು ಇರುವುದರಿಂದ ರಸ್ತೆಗೆ ಹಂಪ್ಸ್ ಅಳವಡಿಸುವ ಅವಶ್ಯಕತೆ ಇದೆ. ಮುಂದೆ ಅಪಘಾತಗಳು ನಡೆಯದಂತೆ ಸಂಬಂಧಪಟ್ಟ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Accident in Mangalore, polo car rams electric pole near Thokottu after losing control over speed.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm