Mangalore Dr Palthadi Ramakrishna Achar: ತುಳು ಜನಪದ ವಿದ್ವಾಂಸ ಪಾಲ್ತಾಡಿ ರಾಮಕೃಷ್ಣ ಆಚಾರ್ ಇನ್ನಿಲ್ಲ

08-05-24 12:49 pm       Mangalore Correspondent   ಕರಾವಳಿ

ಹಿರಿಯ ತುಳು ಜಾನಪದ ವಿದ್ವಾಂಸ, ಕರ್ನಾಟಕ ತುಳು ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ ರಾತ್ರಿ ನಿಧನರಾದರು. ಅವರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಪುತ್ತೂರು, ಮೇ 8: ಹಿರಿಯ ತುಳು ಜಾನಪದ ವಿದ್ವಾಂಸ, ಕರ್ನಾಟಕ ತುಳು ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ ರಾತ್ರಿ ನಿಧನರಾದರು. ಅವರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಲ್ತಾಡಿಯವರಾದ ರಾಮಕೃಷ್ಣ ಆಚಾರ್, ಪುತ್ತೂರು ಹೊರವಲಯದ ಬೆದ್ರಾಳದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು. ಕೆಲ ಸಮಯದಿಂದ ಬೆಳ್ಳಾರೆಯ ಪೆರುವಾಜೆಯಲ್ಲಿರುವ ಮಗಳ ಮನೆಯಲ್ಲಿದ್ದರು. ಮಂಗಳವಾರ ಸಂಜೆ ಅನಾರೋಗ್ಯಕ್ಕೆ ತುತ್ತಾದ ಕಾರಣ ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಕೆಯ್ಯೂರು ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿದ್ದರು. 1994ರಲ್ಲಿ ಕರ್ನಾಟಕ ತುಳು ಅಕಾಡೆಮಿ ಸ್ಥಾಪನೆಯಾದಾಗ ಅದರ ಮೊದಲ ರಿಜಿಸ್ಟ್ರಾರ್ ಆಗಿ ನೇಮಕಗೊಂಡಿದ್ದರು.

ಸೇವಾ ನಿವೃತ್ತಿ ಬಳಿಕ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ತುಳು ಜನಪದ ಕುಣಿತಗಳ ಬಗ್ಗೆ ಇವರು ನಡೆಸಿದ ಅಧ್ಯಯನ ಪ್ರಬಂಧಕ್ಕೆ ಗೌರವ ಡಾಕ್ಟರೇಟ್ ಪ್ರದಾನವಾಗಿತ್ತು. ತುಳು ಜನಪದ, ದೈವಾರಾಧನೆ ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದ ಪಾಲ್ಡಾಡಿ ರಾಮಕೃಷ್ಣ ಆಚಾರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುಳು ಜನಪದ ಬಗ್ಗೆ ಉಪನ್ಯಾಸ, ತರಬೇತಿ, ತುಳು ಲಿಪಿ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟಿದ್ದರು. ತುಳು ಅಕಾಡೆಮಿ ಅಧ್ಯಕ್ಷರಾಗಿದ್ದಾಗ ಅನೇಕ ತುಳು ಕೃತಿಗಳ ಪ್ರಕಟಣೆಗೆ ಶ್ರಮಿಸಿದ್ದರು.

Dr Palthadi Ramakrishna Achar, former president of Karnataka Tulu Sahitya Academy, folk scholar, and literature teacher, breathed his last on Tuesday, May 7 at the age of 79.