ಬ್ರೇಕಿಂಗ್ ನ್ಯೂಸ್
08-05-24 04:54 pm Mangalore Correspondent ಕರಾವಳಿ
ಮಂಗಳೂರು, ಮೇ 8: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ತನಿಖೆಯಿಂದ ನ್ಯಾಯ ಸಿಗುವ ನಿರೀಕ್ಷೆ ಇಲ್ಲ. ಎಸ್ಐಟಿ ತನಿಖೆ ಬಗ್ಗೆ ನಮಗೆ ವಿಶ್ವಾಸವಿಲ್ಲ. ವಿಡಿಯೋ ಪ್ರಜ್ವಲ್ ರೇವಣ್ಣ ಅವರದ್ದೇ ಆಗಿದ್ದಲ್ಲಿ ಶಿಕ್ಷೆಯಾಗಲಿ. ಪ್ರಜ್ವಲ್ ರೇವಣ್ಣ ಪಾತ್ರದಷ್ಟೇ ವಿಡಿಯೋ ಹರಿಯ ಬಿಟ್ಟವರ ಪಾತ್ರವೂ ಇದೆ. ಇದೆಲ್ಲದರ ತನಿಖೆ ಆಗಬೇಕಿದ್ದರೆ ಸಿಬಿಐಗೆ ಕೊಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಪ್ರಕರಣದಲ್ಲಿ ಮಹಿಳೆಯರ ಮುಖ ಬ್ಲರ್ ಮಾಡದೆ ವಿಡಿಯೋ ಹರಿಯ ಬಿಟ್ಟಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ, ತುಂಬಾ ಮಹಿಳೆಯರು ಇದ್ದಾರೆ. ಅವರ ಕುಟುಂಬ ಮತ್ತು ಸಂಸಾರಕ್ಕೆ ಇದು ದೊಡ್ಡ ಹೊಡೆತ. ಯಾರು ವಿಡಿಯೋ ಹರಿಯ ಬಿಟ್ಟಿದ್ದಾರೋ ಅವರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದವರು ಆಗ್ರಹಿಸಿದರು.


ಎಸ್ಐಟಿ ಒಂದು ಭಾಗದ ವಿಚಾರಣೆಯನ್ನು ಮಾತ್ರ ಮಾಡಿದ್ದಾರೆ. ಯಾರು ಹಂಚಿಕೆ ವೈರಲ್ ಮಾಡುತ್ತಿದ್ದರೋ ಅವರನ್ನ ವಿಚಾರಣೆ ಮಾಡುತ್ತಿಲ್ಲ. ಇದಕ್ಕಾಗಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ತಪ್ಪು ಮಾಡಿದವರಿಗೆಲ್ಲ ಶಿಕ್ಷೆಯಾಗಬೇಕು ಎಂದು ಅಕ್ಷಿತ್ ಸುವರ್ಣ ಆಗ್ರಹಿಸಿದರು. ನಿಯೋಗದಲ್ಲಿ ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು ಹಾಗೂ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನೀತ್, ರಿನಿತ್, ನಿಶಾಂತ್ ಮುಂತಾದವರು ಪಾಲ್ಗೊಂಡಿದ್ದರು.
Mangalore Jds Akshith Suvarna demands CBI probe in Prajwal Revanna sex case. We don't trust in SIT giving justice he added. A memorandum was submitted to DC of Mangalore demanding for justice.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm