Mangalore Alvas pragathi job fair: ಜೂನ್ 7-8 ; `ಆಳ್ವಾಸ್ ಪ್ರಗತಿ' ಬೃಹತ್ ಉದ್ಯೋಗ ಮೇಳ, 200ಕ್ಕೂ ಹೆಚ್ಚು ಕಂಪೆನಿಗಳು ಪಾಲ್ಗೊಳ್ಳುವ ನಿರೀಕ್ಷೆ 

11-05-24 06:48 pm       Mangalore Correspondent   ಕರಾವಳಿ

ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪತಿಷ್ಠಾನ ವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಈ ಬಾರಿ 14ನೇ ಆವೃತ್ತಿಯದ್ದಾಗಿದ್ದು, ಜೂನ್ 7 ಹಾಗೂ 8ರಂದು ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ. 

ಮಂಗಳೂರು, ಮೇ.11: ಮೂಡುಬಿದ್ರೆಯ ಆಳ್ವಾಸ್ ಶಿಕ್ಷಣ ಪತಿಷ್ಠಾನ ವತಿಯಿಂದ ಆಯೋಜಿಸಲ್ಪಡುತ್ತಿರುವ ಬೃಹತ್ ಉದ್ಯೋಗ ಮೇಳ ಈ ಬಾರಿ 14ನೇ ಆವೃತ್ತಿಯದ್ದಾಗಿದ್ದು, ಜೂನ್ 7 ಹಾಗೂ 8ರಂದು ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ. 

ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್ ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ.

ಆಳ್ವಾಸ್ ಪ್ರಗತಿಯಲ್ಲಿ ಭಾಗವಹಿಸುವ ಎಲ್ಲಾ  ಅಭ್ಯರ್ಥಿಗಳು ಆಳ್ವಾಸ್ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಉಚಿತ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದು. ಅಲ್ಲದೇ ಆಳ್ವಾಸ್ ಸಂಸ್ಥೆಯ ಪರಿಣತ ತಂಡದಿಂದ `ಆಳ್ವಾಸ್ ಪ್ರಗತಿ'ಯಲ್ಲಿ ಉದ್ಯೋಗ ನೀಡುವ ಕಂಪೆನಿಗಳ ಮಾಹಿತಿ, ಸಂದರ್ಶನ ಕೌಶಲ್ಯಗಳ ತರಬೇತಿಯನ್ನು ವಿವಿಧ ಕಡೆಗಳಲ್ಲಿ ನೀಡಲಾಗುವುದು. 
200ಕ್ಕೂ ಅಧಿಕ ಕಂಪೆನಿಗಳು ಈ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇರುವುದರಿಂದ ವಿವಿಧ ಕಾಲೇಜುಗಳ ಪ್ರಾಂಶುಪಾಲರಿಗೆ ಮುಂಚಿತವಾಗಿ ತಿಳಿಸಿ, ಅಲ್ಲಿನ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉತ್ತೇಜಿಸಲಾಗುತ್ತಿದೆ ಎಂದು ಆಳ್ವಾಸ್ ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. 

ಉದ್ಯೋಗಾವಕಾಶಗಳ ಮಹಾಪೂರ 

ಆಳ್ವಾಸ್ ಪ್ರಗತಿಗೆ ಈವರೆಗೆ 60 ಕಂಪನಿಗಳು ನೋಂದಾಯಿಸಿದ್ದು ಮತ್ತು ಹೆಚ್ಚುವರಿಯಾಗಿ 137 ಕಂಪನಿಗಳು ಪಾಲ್ಗೊಳ್ಳುವ ಭರವಸೆ ನೀಡಿವೆ. ಒಟ್ಟು 200ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸುವ ನಿರೀಕ್ಷೆಯಿದೆ. ಎಂಬಿಎ, ಎಂ.ಕಾಂ, ಬಿ.ಕಾಂ, ಬಿಬಿಎ, ಬಿಎಸ್ಸಿ, ಬಿಎ, ಬಿಸಿಎ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರಿಗೆ ಹೈದರಾಬಾದ್‌ ನ ಫ್ಯಾಕ್ಟ್ಸೆಟ್ ಸಂಸ್ಥೆ, ಇಎಕ್ಸ್ಎಲ್ ಸರ್ವೀಸ್, ಮಹೀಂದ್ರಾ ಫಿನಾನ್ಸ್, ಪ್ರತಿಷ್ಠಿತ ಬ್ಯಾಂಕ್‌ಗಳಾದ ಎಚ್‌ಡಿಎಫ್‌ಸಿ, ಆ್ಯಕ್ಸಿಸ್, ಐಡಿಎಫ್‌ಸಿ ಫಸ್ಟ್ ಬ್ಯಾಂಕ್, ಬಂಧನ್ ಬ್ಯಾಂಕ್ ಹಾಗೂ ಇನ್ನಿತರ ಸಂಸ್ಥೆಗಳು ಅವಕಾಶಗಳನ್ನು ನೀಡಲಿವೆ. 

ಉತ್ಪಾದನಾ ವಲಯದಲ್ಲಿ ಕಿರ್ಲೋಸ್ಕರ್ ಟೊಯೋಟಾ, ಟೆಕ್ಸಟೈಲ್ ಮೆಷಿನರಿ, ಉಷಾ ಆರ್ಮರ್ ಮುಂತಾದ ಕಂಪೆನಿಗಳು ಭಾಗವಹಿಸಲಿವೆ. ಐಟಿ ವಲಯದಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್,  ದಿಯಾ ಸಿಸ್ಟಮ್ಸ್, ಕಾನ್ಸೆಂಟ್ರಿಕ್ಸ್, ವಿನ್‌ಮ್ಯಾನ್ ಸಾಫ್ಟ್ವೇರ್ ಕಂಪೆನಿಗಳು ಯಾವುದೇ ಹಿನ್ನಲೆಯ ಪದವೀಧರರನ್ನು ನೇಮಿಸಿಕೊಳ್ಳಲಿವೆ.

ಮಾರಾಟ ವಲಯದಲ್ಲಿ ಕಲ್ಟ್ಫಿಟ್, ಐಟಿಸಿ ಲಿಮಿಟೆಡ್, ಬ್ಲೂಸ್ಟೋನ್ ಜ್ಯುವೆಲ್ಲರಿಗಳು ಪದವೀಧರರಿಗೆ ಉದ್ಯೋಗ ನೀಡಲಿವೆ. ಅಜಾಕ್ಸ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಬುಹ್ಲರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ನೆಕ್ಸ್ಟೀರ್ ಆಟೋಮೋಟಿವ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ವಂಡರ್ಲಾ ಹಾಲಿಡೇಸ್‌ನಂತಹ ಕಂಪೆನಿಗಳು ಮೆಕ್ಯಾನಿಕಲ್ ಇಂಜಿನಿಯರ್‌ಗಳಿಗೆ 50ಕ್ಕೂ ಹೆಚ್ಚಿನ ಉದ್ಯೋಗಾವಕಾಶ ನೀಡಲಿವೆ. ವೋಲ್ವೋಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮಹಿಳಾ ಮೆಕ್ಯಾನಿಕಲ್ ಪದವೀಧರರಿಗೆ ಉದ್ಯೋಗ ನೀಡಲಿದೆ. 

ಆ್ಯಂಥಮ್ ಬಯೋ, ಹೈದರಾಬಾದ್‌ನ ಎಂಎಸ್‌ಎನ್ ಲ್ಯಾಬೋರೇಟರೀಸ್ ಹಾಗೂ ಹಿಟಿರೋ ಲ್ಯಾಬ್ಸ್ ಎಂಎಸ್ಸಿ ಹಾಗೂ ಬಿಎಸ್ಸಿ ಪದವೀಧರರಿಗೆ ಉದ್ಯೋಗ ಕಲ್ಪಿಸಲಿವೆ. ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್, ಏರೋಸ್ಪೇಸ್ ಡಿವಿಶನ್, ಸೆರಾಟಿಜಿಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಕಿರ್ಲೋಸ್ಕರ್ ಟೊಯೋಟಾ ಟೆಕ್ಸ್ಟೈಲ್ ಮೆಷಿನರಿ ಪ್ರೈ ಲಿಮಿಟೆಡ್, ವೋಲ್ವೋ ಗ್ರೂಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಸುಂದರಂ ಆಟೋ ಕಾಂಪೊನೆಂಟ್ಸ್ ಲಿಮಿಟೆಡ್, ಹಿಮಾಲಯ ವೆಲ್ನೆಸ್, ಮಾಂಡೋವಿ ಮೋಟಾರ್ಸ್, ಪ್ರಥಮ್ ಮೋಟಾರ್ಸ್, ಅರವಿಂದ್ ಮೋಟಾರ್ಸ್, ಸುಪ್ರೀಮ್ ಆಟೋ ಮತ್ತು ಇನ್ನೂ ಅನೇಕ ಕಂಪೆನಿಗಳು ಐಟಿಐ ಹಾಗೂ ಡಿಪ್ಲೊಮೋ ಅಭ್ಯರ್ಥಿಗಳಿಗೆ ಉದ್ಯೋಗ ನೀಡಲಿವೆ. ನರ್ಸಿಂಗ್ ಪದವೀಧರ ಅಭ್ಯರ್ಥಿಗಳಿಗೆ ಪ್ರಮುಖ ಆಸ್ಪತ್ರೆಗಳಾದ ಹೀರಾನಂದಾನಿ ಆಸ್ಪತ್ರೆ, ಮುಂಬೈಯ ಅಪೊಲೊ ಆಸ್ಪತ್ರೆ,  ಕೆಎಂಸಿ ಆಸ್ಪತ್ರೆ ಹಾಗೂ ಇನ್ನಿತರ ವೈದ್ಯಕೀಯ ಸಂಸ್ಥೆಗಳು ಉದ್ಯೋಗ ನೀಡಲಿವೆ. 

ಹೊರ ಜಿಲ್ಲೆಗಳಿಂದ ಬರುವ ಉದ್ಯೋಗಾಕಾಂಕ್ಷಿಗಳಿಗೆ ಜೂನ್ 6ರಿಂದ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಐಟಿಐ ಅಭ್ಯರ್ಥಿಗಳಿಗೆ ಬಸ್ ಸೌಕರ್ಯ ಕಲ್ಪಿಸಲಾಗುವುದು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
9008907716, 9663190590, 7975223865, 9741440490 

ಕಂಪೆನಿಗಳ ನೊಂದಾವಣೆ ಹಾಗೂ ಇತರ ಮಾಹಿತಿಗೆ: 8971250414

ಪತ್ರಿಕಾಗೋಷ್ಠಿಯಲ್ಲಿ ಸುಶಾಂತ್ ಅನಿಲ್ ಲೋಬೊ, ಪ್ರಾಂಶುಪಾಲ ಡಾ. ಕುರಿಯನ್, ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ‌

Mangalore Alv.as pragathi job fair at alvas college in Moodbidri, 200 companies to participate