ಬ್ರೇಕಿಂಗ್ ನ್ಯೂಸ್

Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಅಧಿಕಾರಿಗಳ ಸಭೆ ; ಶಾಸಕ ಅಶೋಕ್ ರೈ ವಿರುದ್ಧ ಪ್ರಕರಣ ದಾಖಲು 

13-05-24 02:27 pm       Mangalore Correspondent   ಕರಾವಳಿ

ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳ ಸಭೆ ಕರೆದು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು ಚುನಾವಣಾ ಅಧಿಕಾರಿಗಳು ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪುತ್ತೂರು, ಮೇ.13: ಲೋಕಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗಳ ಸಭೆ ಕರೆದು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದು ಚುನಾವಣಾ ಅಧಿಕಾರಿಗಳು ಶಾಸಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು ನಗರಸಭೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಶಾಸಕರ ಕಚೇರಿಯಲ್ಲಿ ನೀರು ಪೂರೈಕೆ ಕುರಿತು ಅಧಿಕಾರಿಗಳ ಸಭೆ ಕರೆದಿದ್ದರು. ಸಭೆಯ ಬಗ್ಗೆ ಮಾಹಿತಿ ತಿಳಿದು ಚುನಾವಣಾ ಅಧಿಕಾರಿ ತಹಸೀಲ್ದಾರ್ ಆಗಮಿಸಿದ್ದು ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸಭೆ ನಡೆಸಲು ಅನುಮತಿಯಿಲ್ಲ ಎಂದು ಹೇಳಿದರು. 

ನೀರಿನ ಸಮಸ್ಯೆಯಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ, ಹಾಗಾಗಿ ಸಭೆ ಕರೆದಿದ್ದೇನೆ ಎಂದು ಶಾಸಕ ಅಶೋಕ ರೈ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ, ಸಮಸ್ಯೆಯನ್ನು ಅಧಿಕಾರಿಗಳೇ ಬಗೆಹರಿಸುತ್ತಾರೆ, ನೀವು ಸಭೆಯನ್ನು ತಕ್ಷಣ ನಿಲ್ಲಿಸುವಂತೆ ಮನವಿ ಮಾಡಿದರು. ಕಚೇರಿಯಲ್ಲಿ ಸೇರಿದ್ದ ತಾಲೂಕು ಮಟ್ಟದ ಅಧಿಕಾರಿಗಳನ್ನು ಹೊರಗೆ ಕಳುಹಿಸಿದರು. ತಹಶೀಲ್ದಾರ್ ಕುಂಞಿ ಅಹಮ್ಮದ್ ನೇತೃತ್ವದ ಅಧಿಕಾರಿಗಳ ತಂಡ ಶಾಸಕರು ಕೂಡ ತಮ್ಮ ಸರ್ಕಾರಿ ಕಚೇರಿಯನ್ನು ಬಳಸದಂತೆ ಸೂಚನೆ ನೀಡಿದೆ. ಇದರಂತೆ, ಶಾಸಕ ಅಶೋಕ್ ರೈ ಮೇಲೆ ಮೇಲೆ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣ ದಾಖಲಾಗಿದೆ.

Meeting of officials in violation of election code of conduct, case filed against MLA Ashok Rai in Puttur.