ಬ್ರೇಕಿಂಗ್ ನ್ಯೂಸ್
16-05-24 12:37 pm Mangalore Correspondent ಕರಾವಳಿ
ಪುತ್ತೂರು, ಮೇ.16: ಜ್ವರ ಎಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ನಡುವೆ ಸಾವನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷದಿಂದಾಗಿ ಸಾವು ಸಂಭವಿಸಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿ ವೈದ್ಯರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಕೃಷ್ಣಪ್ಪ ಅವರು ವಿಪರೀತ ಜ್ವರವಿದ್ದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷಿಸಿದ ವೈದ್ಯರು ನಾಲಿಗೆಯ ಅಡಿ ಭಾಗದಲ್ಲಿ ಗಡ್ಡೆ ಇದ್ದು ಅದನ್ನು ತೆಗೆಯಬೇಕೆಂದು ಹೇಳಿದ್ದಾರೆ.
ಗಡ್ಡೆ ತೆಗೆಯಲು ಆಪರೇಷನ್ ಮಾಡಿಸಬೇಕು, ಅದಕ್ಕಾಗಿ ಕೃಷ್ಣಪ್ಪ ಗೌಡ ಅವರ ಪತ್ನಿ ಸರೋಜಿನಿ ಮತ್ತು ಅತ್ತಿಗೆಯ ಸಹಿ ಹಾಕಿಸಿಕೊಂಡ ವೈದ್ಯರು ಆಸ್ಪತ್ರೆಯಲ್ಲಿ ಆಪರೇಷನ್ ಮಾಡಿದ್ದಾರೆ. ಆಪರೇಷನ್ ವೇಳೆ ಅನಸ್ತೇಶಿಯಾ ಕೊಡಲಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ಕೃಷ್ಣಪ್ಪ ಗೌಡ ಚೇತರಿಸಿಕೊಳ್ಳದೆ ಸಾವನ್ನಪ್ಪಿದ್ದರು. ವೈದ್ಯರ ನಿರ್ಲಕ್ಷ್ಯ ಮತ್ತು ಎಡವಟ್ಟಿನಿಂದಲೇ ಕೃಷ್ಣಪ್ಪ ಸಾವನಪ್ಪಿದ್ದಾರೆ ಎಂದು ರೊಚ್ಚಿಗೆದ್ದ ಸಂಬಂಧಿಕರು ರಾತ್ರೋರಾತ್ರಿ ಆಸ್ಪತ್ರೆ ಮುಂಭಾಗ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಂಬಂಧಿಕರು, ವೈದ್ಯರ ಎಡವಟ್ಟಿನಿಂದಲೇ ಸಾವು ಸಂಭವಿಸಿದೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಆಸ್ಪತ್ರೆಗೆ ರವಾನಿಸಲಾಗಿದೆ.
Puttur man dies after operation, doctors negligence, people protest. The deceased has been identified as Krishnappa Gowda. He was admitted over fever.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm