ಬ್ರೇಕಿಂಗ್ ನ್ಯೂಸ್
18-05-24 10:31 pm Mangalore Correspondent ಕರಾವಳಿ
ಮಂಗಳೂರು, ಮೇ 18: ರಾಜ್ಯದಲ್ಲಿ ಬೊಮ್ಮಾಯಿ ಸರಕಾರ ಇದ್ದಾಗ ಓಬಿಎಸ್ ಹೋರಾಟದಲ್ಲಿ ಐವರು ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಸಂದರ್ಭ ಕಾರ್ಮಿಕರ ನೋವು ಕೇಳದೇ ಇದ್ದ ಮುಖ್ಯಮಂತ್ರಿ ಬೊಮ್ಮಾಯಿ, ಅವರ ಮನೆಯ ನಾಯಿ ಸತ್ತಾಗ ಮುತ್ತಿಟ್ಟು ತಿಥಿ ಮಾಡಿದ್ದರು. ಆಮೂಲಕ ಕಾರ್ಮಿಕರ ಜೀವವನ್ನು ನಾಯಿಗಿಂತ ಕೀಳಾಗಿ ನೋಡಿದ್ದರು. ಅದೇ ಕಾರಣಕ್ಕಾಗಿ ನಾನು ಪಕ್ಷ ಬಿಟ್ಟು ಬರಬೇಕಾಯಿತು ಎಂದು ವಿಧಾನ ಪರಿಷತ್ ಚುನಾವಣೆಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಟೀಕಿಸಿದರು.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಸರ್ಕಾರ ಇದ್ದಾಗ ಖಾಸಗಿ ಕಂಪೆನಿಯ ಒತ್ತಡಕ್ಕೆ ಮಣಿದು ಕಾರ್ಮಿಕರ ಕೆಲಸದ ಸಮಯ ತಿದ್ದುಪಡಿ ಮಾಡಿ ನಾಲ್ಕು ಗಂಟೆ ಹೆಚ್ಚಿಸಿದ್ದರು. ನಾವು ನಮ್ಮದೇ ಸರಕಾರವನ್ನು ವಿರೋಧಿಸಿ ಕಾರ್ಮಿಕರ ಪರ ನಿಂತಿದ್ದೆವು. ಜೀವನದ ಉದ್ದಕ್ಕೂ ಕಾರ್ಮಿಕರ ಪರವಾಗಿ, ಅತಿಥಿ ಉಪನ್ಯಾಸಕರ ಪರವಾಗಿ ಹೋರಾಟ ಮಾಡಿಕೊಂಡು ಬಂದಿದ್ದೇನೆ. ನನ್ನ ಕೆಲಸ ನೋಡಿ ಓಟು ಕೊಡುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದರು.



ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಮಾತನಾಡಿ, ಬಿಜೆಪಿ ಸರಕಾರದಲ್ಲಿ ಶಿಕ್ಷಕರ ವೇತನ ಹೆಚ್ಚಿಸಿಲ್ಲ. 2018ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚಿಸಿದ್ದರೆ, ಕುಮಾರಸ್ವಾಮಿ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರದ ತಿಂಗಳಲ್ಲೇ ಪಿಂಚಣಿಯನ್ನು ರದ್ದುಪಡಿಸಿದ್ದರು. ಶಿಕ್ಷಕರ ಬದುಕನ್ನು ಈ ಎರಡು ಪಕ್ಷಗಳು ಕಿತ್ತುಕೊಂಡಿದ್ದವು. ಇದಕ್ಕಾಗಿ ಸೇಡು ತೀರಿಸಲು ಕಾಯುತ್ತಿದ್ದಾರೆ. ನಮ್ಮ ನೌಕರರ ಹಣದಲ್ಲಿ ಜೂಜಾಡಿದ್ದಾರೆ, ಶೇರು ಹಾಕಿದ್ದಾರೆ ಎಂದು ಆರೋಪಿಸಿದರು. ಅನುದಾನಿತ ಶಾಲಾ ಶಿಕ್ಷಕರು ನಿವೃತ್ತರಾದ ಬಳಿಕ ನಯಾಪೈಸೆ ಸಿಗದಂತೆ ಮಾಡಿದ್ದರು. ಈ ಬಗ್ಗೆ ಧ್ವನಿ ಎತ್ತುವಲ್ಲಿ ಶಿಕ್ಷಕ ಪ್ರತಿನಿಧಿಗಳು ವಿಫಲರಾಗಿದ್ದಾರೆಂದು ಟೀಕಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಾತನಾಡಿ, ಆರು ಜಿಲ್ಲೆಗಳಲ್ಲಿ 30 ವಿಧಾನಸಭೆ ಕ್ಷೇತ್ರಗಳಿದ್ದು 15 ಬಿಜೆಪಿ, 14 ಕಾಂಗ್ರೆಸ್, ಓರ್ವ ಜೆಡಿಎಸ್ ಶಾಸಕ ಇದ್ದಾರೆ. ಮೇಲ್ಮನೆಯ ಎಲ್ಲ ಸ್ಥಾನಗಳನ್ನು ಗೆಲ್ಲಬೇಕೆಂದು ತಯಾರಿ ನಡೆಸಿದ್ದೇವೆ. ಗೆಲುವಿನ ವಿಶ್ವಾಸ ಇದೆ ಎಂದು ಹೇಳಿದರು. ಎಸ್.ಎಂ.ಕೃಷ್ಣ, ಡಿ.ಬಿ.ಚಂದ್ರೇಗೌಡ ಬಳಿಕ ಆಯನೂರು ಮಂಜುನಾಥ್ ಅವರು ರಾಜ್ಯಸಭೆ, ಲೋಕಸಭೆ, ವಿದಾನಸಭೆ, ವಿಧಾನ ಪರಿಷತ್ತಿನ ಸದಸ್ಯರಾದ ಅನುಭವ ಹೊಂದಿರುವ ಏಕೈಕ ರಾಜಕಾರಣಿ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಕಾಂಗ್ರೆಸ್ ಪಕ್ಷಕ್ಕಿದೆ ಎಂದರು.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಇದೆ. ಕರಾವಳಿ ಭಾಗದಲ್ಲೂ ಉತ್ತಮ ವಾತಾವರಣ ಸೃಷ್ಟಿಯಾಗಿದೆ. ಇದೇ ವಿಶ್ವಾಸದಲ್ಲಿ ಮೇಲ್ಮನೆ ಚುನಾವಣೆ ಎದುರಿಸುತ್ತಿದ್ದೇವೆ. ಆರು ಅಭ್ಯರ್ಥಿಗಳು ಗೆಲ್ಲಬೇಕೆನ್ನುವ ನಿಟ್ಟಿನಲ್ಲಿ ಕೆಲಸ ಆರಂಭಿಸಿದ್ದೇವೆ ಎಂದರು.
ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಅಭಯಚಂದ್ರ ಜೈನ್ ಇನ್ನಿತರರು ಉಪಸ್ಥಿತರಿದ್ದರು.
Former cm Bommai has seen labourers very cheaply says Ayanur Manjunath in Mangalore. Bommai had changed the timings of work due to work pressure of private organisations he added.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm