ಬ್ರೇಕಿಂಗ್ ನ್ಯೂಸ್
26-05-24 11:12 pm Udupi Correspondent ಕರಾವಳಿ
ಉಡುಪಿ, ಮೇ 26: ಉಡುಪಿ, ಮೇ 26: ನಗರದ ಶಾರದಾ ಮಂಟಪ ಜಂಕ್ಷನ್ ಬಳಿ ಲಾಂಗ್ ಹಿಡಿದು ಅಟ್ಟಹಾಸ ಮೆರೆದಿದ್ದ ಗರುಡ ಗ್ಯಾಂಗ್‍ನ 6 ಪುಡಿ ರೌಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮೇ 25 ರಂದು ಮೂವರನ್ನು ಪೊಲೀಸರು ಬಂಧಿಸಿದ್ದರು.
ಬಂಧಿತರನ್ನು ಮಜೀದ್, ಅಲ್ಫಾಝ್, ಶರೀಫ್ ಎಂದು ಉಡುಪಿ ಎಸ್‍ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ಪ್ರಮುಖ ಆರೋಪಿ ಕಾಪುವಿನ ಕೊಂಬಗುಡ್ಡೆಯ ಆಶಿಕ್, ತೋನ್ಸೆಯ ರಾಕೀಬ್, ಸಕ್ಲೈನ್ ರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಇಲ್ಲಿಯವರೆಗೂ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದ್ದು, ಇನ್ನೂ ಇಬ್ಬರಿದ್ದು ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ರಿಯಲ್ ಎಸ್ಟೇಟ್ ವಿವಾದಕ್ಕೆ ಸಂಬಂಧಿಸಿ ಉಭಯ ಗ್ಯಾಂಗ್‌ನ ಸದಸ್ಯರು ಪರಸ್ಪರ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಎರಡು ಕಾರು, ಲಾಂಗ್ ಗಳನ್ನು ವಶಪಡಿಸಿದ್ದಾರೆ.
ಉಡುಪಿಯ ಕಾಪುವಿನಲ್ಲಿ ಟೀಂ ಗರುಡ ಹೆಸರಿನಲ್ಲಿ ತಂಡ ಕಟ್ಟಿಕೊಂಡಿದ್ದ ಪುಂಡರು ಗಾಂಜಾ, ದನ ಕಳ್ಳತನ, ದರೋಡೆ ಕೃತ್ಯದಲ್ಲಿ ಸಕ್ರಿಯವಾಗಿತ್ತು. ತಲವಾರು, ಡ್ರ್ಯಾಗನ್ ಹಿಡಿದೇ ತಿರುಗಾಡುತ್ತಿದ್ದ ಈ ಗುಂಪಿಗೆ ರೌಡಿಶೀಟರ್ ಆಶಿಕ್ ಎಂಬಾತನೇ ಕ್ಯಾಪ್ಟನ್. ನಾಲ್ಕು ವರ್ಷದ ಹಿಂದೆ ಅಂದಿನ ಎಸ್ಪಿ ಡಾ. ವಿಷ್ಣುವರ್ಧನ್ ಈ ತಂಡದ ಹೆಡೆಮುರಿ ಕಟ್ಟಿದ್ದರು. ಎರಡು ವಾರದ ಹಿಂದೆ ಆಶಿಕ್ ಮತ್ತು ಅಲ್ಫಾಝ್ ನಡುವೆ ಜಗಳ ನಡೆದಿತ್ತು. ಒಂದೇ ತಂಡ ಆಗಿದ್ದರಿಂದ “ರಾಜಿ ಆಗುವ ಬಾ, ಗಲಾಟೆ ಬೇಡ” ಅಂತ ಆಶಿಕ್‌ನನ್ನು ಅಲ್ಫಾಝ್ ಟೀಂ ಕರೆಸಿಕೊಂಡಿತ್ತು. ಆದರೆ ಅಲ್ಫಾಝ್ ವಿಷಯ ಗೊತ್ತಿದ್ದ ಆಶಿಕ್ ಕುಂಜಿಬೆಟ್ಟಿಗೆ ಬಂದವನು ಕಾರಿನಿಂದ ಇಳಿದಿರಲಿಲ್ಲ. ಹೀಗಾಗಿ ಕಾರು ಗುದ್ದಾಟದ ಮೂಲಕ ಆಶಿಕ್‌ನನ್ನ ಮಟ್ಟ ಹಾಕಲು ಅಲ್ಫಾಝ್ ಪ್ರಯತ್ನಿಸಿದ್ದ. ಅಷ್ಟೇ ಅಲ್ಲ, ತಲವಾರು ದಾಳಿ ನಡೆಸಲು ಮುಂದಾಗಿದ್ದ. ಇಷ್ಟಾಗುತ್ತಲೇ ಆಶಿಕ್ ಕಡೆಯವರು ತಮ್ಮ ಸ್ವಿಫ್ಟ್ ಕಾರನ್ನ ಶರೀಫ್ ಎಂಬಾತನ ಮೇಲೆ ಹರಿಸಿದ್ದರು.
ಗರುಡನ ಹೆಸರಿಟ್ಟು ದನ ಕಳ್ಳತನ ಮಾಡಲು ಆರಂಭಿಸಿದ್ದ ಈ ಗ್ಯಾಂಗ್, 10 ವರ್ಷಗಳಲ್ಲಿ ನಟೋರಿಯಸ್ಸಾಗಿ ಬೆಳೆದಿದೆ. 2022ರ ಏಪ್ರಿಲ್ನಲ್ಲಿ ಗರುಡ ಗ್ಯಾಂಗ್ನ ಆರೋಪಿ ನಂದು ಸದ್ಯ ಬಂಧನದಲ್ಲಿರುವ ಆರೋಪಿ ಆಶಿಕ್ನ ಶೂಟ್ ಔಟ್ ಮಾಡುವ ಮೂಲಕ ಸುದ್ದಿಯಾಗಿದ್ದ. 2020ರಲ್ಲಿ ಕೊತ್ತನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಬೆಂಗಳೂರು ಮೂಲದ ವ್ಯಕ್ತಿಯ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣ ಆಶಿಕ್ ಮತ್ತು ಇಸಾಕ್ ಮೇಲೆ ದಾಖಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡು ತನಿಖೆ ಆರಂಭಿಸಿದ ಪೊಲೀಸರಿಗೆ ಆಶಿಕ್ ಮತ್ತು ಇಸಾಕ್ ತಾವು ಎಷ್ಟು ನಟೋರಿಯಸ್ ಎನ್ನುವುದನ್ನು ತೋರಿಸಿದ್ದರು. ತಮ್ಮನ್ನು ಹಿಡಿಯಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಇವರಿಗೆ ಗುಂಡು ಹಾರಿಸಿ ಬಂಧಿಸಿದ್ದರು.
ಗ್ಯಾಂಗ್ ವಾರ್ಗೂ ಮೊದಲು ಕಾಪುವಿನಲ್ಲಿ ಟಾಕ್ ವಾರ್ ನಡೆದಿತ್ತು. ಇದಾದ ಬಳಿಕ ಮಜೀದ್, ಆಶಿಕ್ ತಂಡಕ್ಕೆ ಉಡುಪಿಗೆ ಬರುವಂತೆ ಆಹ್ವಾನ ನೀಡಿದ್ದ. ಉಡುಪಿಗೆ ತನ್ನ ಸಂಗಡಿಗರೊಂದಿಗೆ ಬಂದಿದ್ದ ಆಶಿಕ್ ಕಾರಿನಿಂದ ಕೆಳಗೆ ಇಳಿದೇ ಇರಲಿಲ್ಲ. ಇದರಿಂದ ಕೋಪಗೊಂಡ ಮಜೀದ್ ತನ್ನ ಕಾರಿನಿಂದ ಆಶಿಕ್ ಕಾರಿಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಕಾರಿನಲ್ಲಿ ತಂದಿದ್ದ ತಲ್ವಾರ್, ದೊಣ್ಣೆಗಳನ್ನ ಬಳಸಿ ಹಲ್ಲೆ ಮಾಡಲು ಯತ್ನಿಸಿದ್ದ ಎಂದು ತಿಳಿದುಬಂದಿದೆ.
Udupi gang war, totally six arrested by police so far, search for missing is on. The Udupi city police have arrested three more individuals in connection with the gang war involving the Garuda gang that occurred in the early hours of May 19 at Kunjibettu on the Udupi-Manipal National Highway. This brings the total number of arrests to six.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm