ಬ್ರೇಕಿಂಗ್ ನ್ಯೂಸ್
28-05-24 06:45 pm Mangalore Correspondent ಕರಾವಳಿ
ಮಂಗಳೂರು, ಮೇ 28: ನಡು ರಸ್ತೆಯಲ್ಲಿ ನಮಾಜ್ ಮಾಡಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಘಟನೆಗೆ ಕಾರಣವಾದ ಅಪರಿಚಿತ ಯುವಕರ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಕದ್ರಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 341, 283, 143 ಜೊತೆಗೆ 149 ಸೆಕ್ಷನ್ ಗಳಡಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಕಂಕನಾಡಿಯ ಮಸೀದಿ ಹೊರಗಿನ ರಸ್ತೆಯಲ್ಲಿ ಮೇ 24ರಂದು ಕೆಲವು ಯುವಕರು ಸೇರಿ ನಮಾಜ್ ಮಾಡಿದ್ದು, ಅದರ ವಿಡಿಯೋ ವೈರಲ್ ಆಗಿತ್ತು. ಯುವಕರು ರಸ್ತೆಯಲ್ಲಿ ಕುಳಿತು ಪ್ರಾರ್ಥನೆ ಮಾಡುತ್ತಿದ್ದುದರಿಂದ ಸಾರ್ವಜನಿಕರಿಗೆ ವಾಹನ ಚಲಾಯಿಸಲು ಸಮಸ್ಯೆ ಆಗಿತ್ತು. ಈ ಬಗ್ಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಕ್ರಮಕ್ಕೆ ಆಗ್ರಹ ಮಾಡಿದ್ದರು.
ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ನಾಯಕರು, ಈ ಘಟನೆಯನ್ನು ಖಂಡಿಸಿದ್ದಲ್ಲದೆ ಇದೇ ರೀತಿ ಮುಂದುವರಿದರೆ ನಾವು ರಸ್ತೆಯಲ್ಲಿ ಕುಳಿತು ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ. ಮುಂದೇನಾದರೂ ರಸ್ತೆಯಲ್ಲಿ ನಮಾಜ್ ಮಾಡಿದರೆ ನೇರ ಕಾರ್ಯಾಚರಣೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಇದರಿಂದಾಗಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತೆ ಎನ್ನುವ ಅಭಿಪ್ರಾಯ ಬರುತ್ತಲೇ ಪೊಲೀಸರು ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ.
Namaz in the middle of the road in Mangalore, police register sumoto case soon after Bajarang dal members warned of taking action against them if they were found doing the same again.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm