ಬ್ರೇಕಿಂಗ್ ನ್ಯೂಸ್
31-05-24 10:49 pm Mangalore Correspondent ಕರಾವಳಿ
ಮಂಗಳೂರು, ಮೇ 31: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಹಿಂದುತ್ವವಾದಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ದಮನಿಸುವ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ನೀತಿ ಇದೇ ರೀತಿ ಮುಂದುವರಿದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ಕಾಪಾಡಬೇಕಾಗಿರುವ ಸರಕಾರ ಮತ್ತು ಪೊಲೀಸ್ ಇಲಾಖೆ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಪೊಲೀಸರು ಸ್ವಾತಂತ್ರ್ಯ ಕಳಕೊಂಡು ಯಾರದ್ದೋ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಸ್ತೆಯಲ್ಲಿ ನಮಾಜ್ ಮಾಡಿದ್ದಕ್ಕೆ ಕೇಸು ದಾಖಲಿಸಿದ್ದ ಅದೇ ಪೊಲೀಸರು ಮೇಲಿನಿಂದ ಒತ್ತಡ ಬರುತ್ತಲೇ ಕೇಸು ಹಿಂಪಡೆಯುತ್ತಾರೆ. ಅಲ್ಲದೆ, ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿದ್ದ ಹಿಂದು ಸಂಘಟನೆ ಮುಖಂಡ ಶರಣ್ ಪಂಪ್‌ವೆಲ್ ಜಾಮೀನು ರಹಿತ ಕೇಸು ದಾಖಲಿಸಿದ್ದಾರೆ. ಕೇಸ್ ದಾಖಲಿಸಿರುವುದನ್ನು ಕೂಡಲೇ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಯುವ ಜನರನ್ನು ಒಗ್ಗೂಡಿಸಿ, ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪೊಲೀಸರು ಕಾಂಗ್ರೆಸ್ ನಾಯಕರ ಒತ್ತಡದಿಂದ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದವರು ಮನವಿ ಸಲ್ಲಿಸಿದ ಬೆನ್ನಲ್ಲೇ ನಮಾಜ್ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆ ಬಿ ರಿಪೋರ್ಟ್ ಸಲ್ಲಿಸಿದೆ. ಆದರೆ, ಈ ರೀತಿ ರಸ್ತೆ ಮೇಲೆ ನಮಾಜ್ ಮಾಡಿರುವುದು ತಪ್ಪು, ಇದೇ ರೀತಿ ಮುಂದುವರಿದಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿರುವ ಶರಣ್ ಪಂಪ್‌ವೆಲ್ ಮೇಲೆ ಪ್ರಕರಣ ದಾಖಲಿಸಿದ್ದಾರೆ. ರಸ್ತೆಯಲ್ಲಿ ನಮಾಜ್ ಕುರಿತಂತೆ ಮಸೀದಿ ಕಾರ್ಯದರ್ಶಿಯೇ ಇದು ಸರಿಯಲ್ಲ ಎಂದು ಒಪ್ಪಿಕೊಂಡಿದ್ದಾರೆ. ಇದೀಗ ಕೇಸು ಹಿಂಪಡೆದು ಆ ರೀತಿ ಮಾಡಿದ್ದು ಸರಿ ಎಂದು ಪೊಲೀಸರು ಪರೋಕ್ಷವಾಗಿ ಒಪ್ಪಿಕೊಂಡ ರೀತಿ ಆಗಿದೆ. ಇದರಿಂದ ಪೊಲೀಸರು ಅಪನಂಬಿಕೆ ಎದುರಿಸುವಂತಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ನಿತಿನ್ ಕುಮಾರ್, ಜಗದೀಶ್ ಶೇಣವ, ಪ್ರೇಮಾನಂದ ಶೆಟ್ಟಿ, ಅರುಣ್ ಜಿ. ಶೇಟ್, ನಂದನ್ ಮಲ್ಯ ಉಪಸ್ಥಿತರಿದ್ದರು.
Namaz in road mangalore, BJP Satish Kumapla slams police department, congress government is trying to disturb peace in Karnataka he added.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm