ಬ್ರೇಕಿಂಗ್ ನ್ಯೂಸ್
03-06-24 11:05 pm Mangalore Correspondent ಕರಾವಳಿ
ಮಂಗಳೂರು, ಜೂನ್ 3: ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದಲ್ಲಿ ಸದಸ್ಯರ ಆಯ್ಕೆಗೆ ಸೋಮವಾರ ಐದು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮತದಾನ ನಡೆದಿದೆ. ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಕ್ಷೇತ್ರಗಳಿಗೆ ಭಾರೀ ಪೈಪೋಟಿಯಲ್ಲಿ ಮತ ಚಲಾವಣೆ ಆಗಿದೆ.
ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಡಾ.ಧನಂಜಯ ಸರ್ಜಿ, ಕಾಂಗ್ರೆಸಿನಿಂದ ಆಯನೂರು ಮಂಜುನಾಥ್ ಅಭ್ಯರ್ಥಿಯಿದ್ದಾರೆ. ಎರಡು ಪಕ್ಷಗಳಿಗೂ ಈ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಬಿಜೆಪಿಯಿಂದ ಬಂಡಾಯ ಸಾರಿದ್ದ ಮಾಜಿ ಶಾಸಕ ರಘುಪತಿ ಭಟ್ ಹಾಗೂ ಕಾಂಗ್ರೆಸಿನಲ್ಲಿ ಟಿಕೆಟ್ ಸಿಗದೆ ಬಂಡಾಯ ಸ್ಪರ್ಧಿಸಿರುವ ಎಸ್.ಪಿ. ದಿನೇಶ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ಗೆಲುವಿಗೆ ತೊಡಕಾಗಿದ್ದಾರೆ. ಹೀಗಾಗಿ ಈ ಕ್ಷೇತ್ರದಲ್ಲಿ ಚತುಷ್ಕೋನ ಸ್ಪರ್ಧೆ ಎದುರಾಗಿದೆ. ಎಸ್.ಪಿ. ದಿನೇಶ್ ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆಯನೂರು ಮಂಜುನಾಥ್ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಕಂಡಿದ್ದರು. ಅಂದು ನೇರ ಪೈಪೋಟಿ ಇದ್ದರೆ, ಈ ಬಾರಿ ಬಿಜೆಪಿ ಮತ್ತು ಕಾಂಗ್ರೆಸಿಗೆ ತಮ್ಮದೇ ಪಕ್ಷದ ಪ್ರಭಾವಿಗಳ ಬಂಡಾಯ ಕಗ್ಗಂಟಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಪದವೀಧರ ಕ್ಷೇತ್ರಕ್ಕೆ 27,412 ಮತದಾರರು ಇದ್ದಾರೆ. ಅಲ್ಲಿ ಎಷ್ಟು ಮತ ಚಲಾವಣೆ ಆಗಿದೆ ಎನ್ನುವ ಮಾಹಿತಿಯಿಲ್ಲ. ಉಡುಪಿ ಜಿಲ್ಲೆಯಲ್ಲಿ 17,033 ಮತದಾರರಿದ್ದು 12,633 ಮಂದಿ ಮಚಲಾ ಚಲಾಯಿಸಿದ್ದಾರೆ. 74.17 ಶೇಕಡಾ ಮತದಾನ ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 19,971 ಪದವೀಧರ ಮತದಾರರಿದ್ದು, 14,553 ಮಂದಿ ಮತ ಚಲಾಯಿಸಿದ್ದಾರೆ. 72.87 ಶೇಕಡಾ ಮತದಾನ ಆಗಿದೆ. ಕೊಡಗು ಜಿಲ್ಲೆಯಲ್ಲಿ ಒಟ್ಟು 3909 ಮತದಾರರಿದ್ದು 3170 ಮಂದಿ ಮತ ಚಲಾವಣೆ ಮಾಡಿದ್ದು 81.09 ಶೇಕಡಾ ಮತದಾನವಾಗಿದೆ.
ಶಿಕ್ಷಕರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಬಂಡಾಯ ಎದುರಾಗಿದೆ. ಕಾಂಗ್ರೆಸಿನಲ್ಲಿ ಕೆಕೆ ಮಂಜುನಾಥ್ ಅಭ್ಯರ್ಥಿ ಇದ್ದರೆ, ಬಿಜೆಪಿ- ಜೆಡಿಎಸ್ ಮೈತ್ರಿಕೂಟದಿಂದ ಭೋಜೇಗೌಡ ಅಭ್ಯರ್ಥಿ ಇದ್ದಾರೆ. ಇಲ್ಲಿ ಮಂಗಳೂರಿನ ಸಹಕಾರಿ ಕ್ಷೇತ್ರದ ಮುಖಂಡ ಹರೀಶ್ ಆಚಾರ್ಯ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಕಾಂಗ್ರೆಸಿನಲ್ಲಿ ಗುರುತಿಸಿದ್ದ ಅರುಣ್ ಹೊಸಕೊಪ್ಪ ಸ್ಪರ್ಧಿಸಿದ್ದು ಆ ಭಾಗದ ಒಂದಷ್ಟು ಮತಗಳನ್ನು ಸೆಳೆಯಲಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದು, ಒಟ್ಟು 22 ಸಾವಿರ ಮತದಾರರಲ್ಲಿ ದಕ್ಷಿಣ ಕನ್ನಡ ಒಂದರಲ್ಲೇ 8189 ಮತಗಳಿವೆ. ಹೀಗಾಗಿ ಈ ಜಿಲ್ಲೆಯಲ್ಲಿ ಅತಿ ಹೆಚ್ಚು ಮತ ಪಡೆದವರು ಗೆಲ್ಲುವ ಸಾಧ್ಯತೆಯಿದೆ.
ಚುನಾವಣೆ ಅಂಕಿಅಂಶ ಪ್ರಕಾರ, ಶಿಕ್ಷಕರ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯಲ್ಲಿ 4074 ಮತಗಳಿದ್ದು, 3047 ಮಂದಿ ಮತ ಚಲಾಯಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 8189 ಶಿಕ್ಷಕ ಮತದಾರರಲ್ಲಿ 6200 ಮಂದಿ ಮತ ಚಲಾಯಿಸಿದ್ದಾರೆ. ಒಟ್ಟು 75.71 ಶೇಕಡಾ ಮತದಾನ ಆಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 4365 ಶಿಕ್ಷಕ ಮತದಾರರಿದ್ದಾರೆ. ಉಳಿದಂತೆ, ಕೊಡಗು, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಯ ಎರಡು ತಾಲೂಕು ವ್ಯಾಪ್ತಿಯಲ್ಲಿ ಮತದಾರರಿದ್ದಾರೆ. ತ್ರಿಕೋನ ಸ್ಪರ್ಧೆ ಎದುರಾದರೆ ಏಳು ಸಾವಿರಕ್ಕಿಂತ ಹೆಚ್ಚು ಮತ ಪಡೆದವರು ಗೆಲ್ಲುತ್ತಾರೆ.
Polling was held in five districts on Monday to elect members to the South-West Graduates' and Teachers' constituencies of the Legislative Council. Shimoga, Udupi, Chikkamagaluru and Dakshina Kannada districts witnessed a fierce contest for these constituencies.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm